ಕೊಲಂಬೋ: ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಭಾರತ (Team India) ಹಾಗೂ ಪಾಕ್ ಸೂಪರ್ ಫೋರ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಇದರ ನಡುವೆ ಮಳೆ ತರಿಸಿ ಅಲ್ಲಾ ಕಾಪಾಡಿದ್ದಾನೆ ಎಂದು ಪಾಕಿಸ್ತಾನದ ಮಾಜಿ ವೇಗಿ ಶೋಯೆಬ್ ಅಖ್ತರ್ (Shoaib Akhtar) ಹೇಳಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದೆ.
ಅಖ್ತರ್ ತಮ್ಮ ನೇರ ನುಡಿಗಳಿಂದ ಹೆಸರುವಾಸಿಯಾಗಿದ್ದಾರೆ. ಈ ಪಂದ್ಯ ನಡೆಯುವಾಗ ಅವರು ಟ್ವಿಟ್ಟರ್‌ನಲ್ಲಿ (ಎಕ್ಸ್‌ನಲ್ಲಿ) ಪಾಕ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ವಿಚಾರವಾಗಿ ಇದೊಂದು ಮೂರ್ಖತನದ ನಿರ್ಧಾರ ಎಂದು ಬರೆದುಕೊಂಡಿದ್ದಾರೆ. ಅಲ್ಲದೇ ಪಂದ್ಯದ ವೇಳೆ ಮಳೆ ಬಂದು ನಮ್ಮ ತಂಡವನ್ನು ಕಾಪಾಡಿದೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: Asia Cup 2023ː ಇಂಡೋ-ಪಾಕ್ ಹೈವೋಲ್ಟೇಜ್ ಕದನಕ್ಕೆ ಮತ್ತೆ ಮಳೆ ಅಡ್ಡಿ – ಸೋಮವಾರಕ್ಕೆ ಮುಂದೂಡಿಕೆ
Advertisement
Advertisement
ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಬಾಬರ್ ಅಜಮ್ ನಿರ್ಧಾರದ ಬಗ್ಗೆ ಅಖ್ತರ್ ಅಸಮಾಧಾನ ವ್ಯಕ್ತಪಡಿಸಿದ್ದರು. ಭಾರತದ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ನಡುವಿನ ಬ್ಯಾಟಿಂಗ್ ಅಬ್ಬರದಿಂದ 121 ರನ್ ತಲುಪಿದಾಗ ಅಖ್ತರ್ ಈ ರೀತಿಯ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
Advertisement
Advertisement
ಮೀಸಲು ದಿನದಂದು ಪಂದ್ಯವು ಮುಂದುವರಿದರೆ ಬಾಬರ್ ಅಜಮ್ ವಿಭಿನ್ನ ತಂತ್ರ ಅನುಸರಿಸಬೇಕು. ಮೊದಲು ಬೌಲಿಂಗ್ ಅಥವಾ ಬ್ಯಾಟಿಂಗ್‌ಗೆ ಬಂದಾಗ ಬುದ್ಧಿವಂತ ನಿರ್ಧಾರವನ್ನು ತೆಗೆದುಕೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: KL ರಾಹುಲ್ ಈಸ್ ಬ್ಯಾಕ್ – ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಕನ್ನಡಿಗನ ವಿಶೇಷ ಸಾಧನೆ
Web Stories