Connect with us

Latest

ಮುಖ್ಯ ಸಚೇತಕಿಯಾಗಿ ನೇಮಕ -ಕರಂದ್ಲಾಜೆಗೆ ಮೋದಿ ಗಿಫ್ಟ್

Published

on

ನವದೆಹಲಿ: ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಲೋಕಸಭೆಯ ಮುಖ್ಯ ಸಚೇತಕಿ ಸ್ಥಾನವನ್ನು ಮೋದಿ ಅವರು ನೀಡಿದ್ದಾರೆ.

ಎರಡು ಬಾರಿ ಸಂಸದರಾಗಿರುವ ಶೋಭಾ ಕರಂದ್ಲಾಜೆ ಅವರಿಗೆ ಈ ಬಾರಿ ಮೋದಿ ಸಂಪುಟದಲ್ಲಿ ಮಂತ್ರಿ ಸ್ಥಾನ ಸಿಗಲಿದೆ ಎನ್ನುವ ಸುದ್ದಿ ಬಂದಿತ್ತು. ಆದರೆ ಸಂಪುಟದಲ್ಲಿ ಲೋಕಸಭಾ ಸದಸ್ಯರಾದ ಡಿವಿ ಸದಾನಂದ ಗೌಡ, ಪ್ರಹ್ಲಾದ್ ಜೋಷಿ, ಸುರೇಶ್ ಅಂಗಡಿ ಮತ್ತು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ ನಿರ್ಮಲಾ ಸೀತಾರಾಮನ್ ಅವರಿಗೆ ಮಾತ್ರ ಮಂತ್ರಿ ಸ್ಥಾನ ಸಿಕ್ಕಿತ್ತು.

ಶೋಭಾ ಕರಂದ್ಲಾಜೆ ಅವರಿಗೆ ಮಂತ್ರಿ ಸ್ಥಾನ ಸಿಗಲು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಸಹ ಲಾಬಿ ಮಾಡಿದ್ದರು ಎನ್ನುವ ಮಾತು ಕೇಳಿ ಬಂದಿತ್ತು. ಮಂತ್ರಿ ಸ್ಥಾನ ಸಿಗದೇ ಇದ್ದರೂ ಈಗ ಕರಂದ್ಲಾಜೆ ಅವರಿಗೆ ಸಚೇತಕಿ ಹುದ್ದೆಯನ್ನು ನೀಡುವ ಮೂಲಕ ಬಿಎಸ್‍ವೈ ಮನವಿಯನ್ನು ಮೋದಿ ಪುರಸ್ಕರಿಸಿದ್ದಾರೆ.

ನಿರ್ಮಲಾ ಸೀತರಾಮನ್ ಅವರಿಗೆ ಹಣಕಾಸು ಖಾತೆ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಸದಾನಂದ ಗೌಡ ಅವರಿಗೆ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ, ಧಾರವಾಡದ ಪ್ರಹ್ಲಾದ್ ಜೋಷಿ ಅವರಿಗೆ ಸಂಸದೀಯ ವ್ಯವಹಾರ, ಬೆಳಗಾವಿ ಸಂಸದ ಸುರೇಶ್ ಅಂಗಡಿ ಅವರಿಗೆ ರೈಲ್ವೇ ಖಾತೆಯ ರಾಜ್ಯ ಸಚಿವ ಸ್ಥಾನವನ್ನು ನೀಡಲಾಗಿದೆ.