ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಚಾಲಕರ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ.
ಖಾಸಗಿ ಬಸ್ ಚಾಲಕ ಹಾಗೂ ಫಾರ್ಚೂನರ್ ಕಾರು ಚಾಲಕನ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಮೃತಪಟ್ಟ ಪ್ರಕಾಶ್ ಮಗಳು ದೂರು ನೀಡಿದ್ದಾರೆ. ಹೀಗಾಗಿ ವೇಗ ಮತ್ತು ಅಜಾಗರೂಕತೆ ಚಾಲನೆ ಎಂದು ಕೆ.ಆರ್.ಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
Advertisement
ಬಿಜೆಪಿ (BJP) ಸಭೆ ಇದೆ ಅಂತಾ ಬೆಳಗ್ಗೆ 9 ಗಂಟೆಗೆ ಪ್ರಕಾಶ್ ಮನೆಯಿಂದ ಹೊರಟಿದ್ದರು. 12 ಗಂಟೆ ಸುಮಾರಿಗೆ ಅಪಘಾತ ನಡೆದಿತ್ತು. ಫಾರ್ಚೂನರ್ ಕಾರು ಚಾಲಕ ರಸ್ತೆಯಲ್ಲಿ ವಾಹನ ನಿಲ್ಲಿಸಿ ಹಿಂಬದಿ ಡೋರ್ ತೆಗೆದಿದ್ದ. ಈ ವೇಳೆ ಬೈಕ್ ಡೋರ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಪ್ರಕಾಶ್ ಅವರು ಆಯಾತಪ್ಪಿ ಬೈಕ್ ಸಮೇತ ರಸ್ತೆ ಮೇಲೆ ಬಿದಿದ್ದಾರೆ. ಇದೇ ಸಂದರ್ಭದಲ್ಲಿ ಅದೇ ರಸ್ತೆಯಲ್ಲಿ ಬರುತ್ತಿದ್ದ ಖಾಸಗಿ ಬಸ್ ಪ್ರಕಾಶ್ ಮೇಲೆ ಹರಿದು ಗಂಭೀರ ಗಾಯಗೊಂಡಿದ್ದರು. ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ಬಸ್ ಕಂದಕಕ್ಕೆ ಉರುಳಿ 12 ಮಂದಿ ದುರ್ಮರಣ
Advertisement
Advertisement
ಕೂಡಲೇ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಪ್ರಕಾಶ್ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಪೊಲೀಸರು ಇಬ್ಬರು ಚಾಲಕರ ಮೇಲೆ ಕೇಸ್ ದಾಖಲಿಸಿದ್ದಾರೆ. ಕೆಆರ್ ಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.