ಚಿಕ್ಕಮಗಳೂರು: ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆಗೆ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಪಟ್ಟಿ ಪ್ರದರ್ಶನ ಮಾಡಿರುವ ಘಟನೆ ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ.
Advertisement
ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ತರೀಕೆರೆ ಪಟ್ಟಣಕ್ಕೆ ಭೇಟಿ ನೀಡಿದ್ದರು. ತರೀಕೆರೆ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಆಕ್ಸಿಜನ್ ಘಟಕದ ಉದ್ಘಾಟನೆ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ನೂರಕ್ಕೂ ಹೆಚ್ಚು ಯೂತ್ ಕಾಂಗ್ರೆಸ್ ಕಾರ್ಯಕರ್ತರು ಶೋಭಾ ಕರಂದ್ಲಾಜೆ ಕಾರು ಅಡ್ಡಗಟ್ಟಲು ಯತ್ನಿಸಿ, ಕಪ್ಪು ಪಟ್ಟಿ ಪ್ರದರ್ಶಿಸಿದರು. ಇದನ್ನೂ ಓದಿ: ನಮ್ಮ ಅವಧಿಯಲ್ಲೇ ಮಹದಾಯಿ ವಿವಾದಕ್ಕೆ ತಾರ್ಕಿಕ ಅಂತ್ಯ ಸಿಗುತ್ತೆ: ಬೊಮ್ಮಾಯಿ
Advertisement
Advertisement
ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ, ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ತರೀಕೆರ ಪಟ್ಟಣದ ಗಾಂಧಿ ಸರ್ಕಲ್ ಬಳಿ ಸಂಸದೆ ಶೋಭಾ ತೆರಳುತ್ತಿದ್ದ ಕಾರನ್ನು ಅಡ್ಡಗಟ್ಟಲು ಯತ್ನಿಸಿ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಾರು ಅಡ್ಡಗಟ್ಟಲು ಯತ್ನಿಸಿದ ಯೂತ್ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು, ಬಳಿಕ ಬಿಡುಗಡೆಗೊಳಿಸಿದರು.