ಚಾಮರಾಜನಗರ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವವರು ರೈತರೇ ಅಲ್ಲ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ.
ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲು ಚಾಮರಾಜನಗರದಲ್ಲಿ ಹಮ್ಮಿಕೊಂಡಿದ್ದ ಜನಾಶೀರ್ವಾದ ಯಾತ್ರೆ ಕಾರ್ಯಕ್ರಮದ ಬಳಿಕ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ಹಲವು ತಿಂಗಳಿಂದ ಹೋರಾಟ ಮಾಡುತ್ತಿರುವವರೆಲ್ಲಾ ಮದ್ಯವರ್ತಿಗಳೇ ಹೊರತು ರೈತರಲ್ಲ ಎಂದಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನ ಭಯೋತ್ಪಾದಕರ ಕೈಗೆ ಹೋಗುವುದು ಒಳ್ಳೆಯದಲ್ಲ: ಶೋಭಾ ಕರಂದ್ಲಾಜೆ
Advertisement
ಜನಶೀರ್ವಾದ ಯಾತ್ರೆಯ ಅಂಗವಾಗಿ ಇಂದು ಟಿ.ನರಸೀಪುರದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಕೇಂದ್ರ ಸರಕಾರದ ಸಾಧನೆಗಳನ್ನು ತಿಳಿಸಲಾಯಿತು.
ಕೃಷಿ ಇಲಾಖೆಯಲ್ಲಿನ ಜನಪರ ಯೋಜನೆಗಳು, ರೈತರ ಕಲ್ಯಾಣಕ್ಕಾಗಿ ಕೈಗೊಂಡ ನಿರ್ಧಾರಗಳ ಕುರಿತು ಮಾಹಿತಿ ನೀಡಲಾಯಿತು.#JanAshirwadYatra pic.twitter.com/PrnUG7d5hx
— Shobha Karandlaje (@ShobhaBJP) August 16, 2021
Advertisement
ಎಪಿಎಂಸಿ ಲಾಭಿಯ ಮದ್ಯವರ್ತಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ, ಎಪಿಎಂಸಿಗಳಲ್ಲಿ ಯಾರಿಗೆ ಲಾಭ ಸಿಗುತ್ತಿತ್ತೋ ಅವರು ಪ್ರತಿಭಟನೆ ಮಾಡುತ್ತಿದ್ದಾರೆ. ಪಂಜಾಬ್ ಮತ್ತು ಹರಿಯಾಣ ರಾಜ್ಯ ಗಳಲ್ಲಿ ಯಾರು ಹೆಚ್ಚು ಕಮಿಷನ್ ಹೊಡೆಯುತ್ತಿದ್ದಾರೋ ಅವರು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು.
Advertisement
ಜನಾಶೀರ್ವಾದ ಯಾತ್ರೆಯ ಅಂಗವಾಗಿ ಇಂದು ಮಂಡ್ಯ ನಗರದಲ್ಲಿ ಪತ್ರಕರ್ತರನ್ನುದ್ದೇಶಿಸಿ ಮಾತನಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ @narayanagowdakc, ಜಿಲ್ಲಾ ಅಧ್ಯಕ್ಷರು, ಹಿರಿಯರು ಉಪಸ್ಥಿತರಿದ್ದರು.#JanAshirwadYatra pic.twitter.com/oHNkWNp33o
— Shobha Karandlaje (@ShobhaBJP) August 16, 2021
Advertisement
ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕರ್ನಾಟಕದಲ್ಲೂ ನಡೆಯುತ್ತಿರುವ ಪ್ರತಿಭಟನೆಗಳು ರಾಜಕೀಯ ಪ್ರೇರಿತ ಎಂದು ಆರೋಪಿಸಿದ ಅವರು ಪ್ರತಿಭಟನೆ ಮಾಡುತ್ತಿರುವವರು ಹೇಳುತ್ತಿರುವುದರಲ್ಲಿ ಯಾವುದೇ ಹುರುಳಿಲ್ಲ ಎಂದಿದ್ದಾರೆ,