ಉಡುಪಿ: ದೇವಸ್ಥಾನಗಳನ್ನು ಕೆಡವಿದರೆ ನಮಗೆ ಒಳ್ಳೆದಾಗಲ್ಲ ಎನ್ನುವ ಮೂಲಕ ಶೋಭಾ ಕರಂದ್ಲಾಜೆ ಸರ್ಕಾರದ ಕಿವಿ ಹಿಂಡಿದ್ದಾರೆ.
Advertisement
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರದ್ಧಾಕೇಂದ್ರಗಳ ಬಗ್ಗೆ ಜನರ ನಂಬಿಕೆ ಜಾಸ್ತಿ ಇರುತ್ತದೆ. ಭಕ್ತಿ ಭಾವ ಪ್ರೀತಿ ಜಾಸ್ತಿ ಇರುವ ಕೇಂದ್ರಗಳನ್ನು ಕೆಡವಿದಾಗ ಭಕ್ತರ ಭಾವನೆಗೆ ನೋವಾದಾಗ ಪ್ರತಿಭಟನೆ ನಡೆಸುತ್ತಾರೆ. ಯಾವುದೇ ಸಮುದಾಯ, ಧರ್ಮಕ್ಕೆ ನೋವುಂಟು ಮಾಡಿದರೆ ನಮಗೆ ಒಳ್ಳೆಯದಾಗಲ್ಲ ಎಂದು ಪರೋಕ್ಷವಾಗಿ ಸರ್ಕಾರದ ಕ್ರಮವನ್ನು ಟೀಕಿಸಿದರು. ಇದನ್ನೂ ಓದಿ: ನನ್ನ ಮಗ ಗೂಂಡಾ ಅಲ್ಲ, ತಪ್ಪು ಸಾಬೀತಾದರೆ ಕ್ರಮ ಕೈಗೊಳ್ಳಲಿ: ಮಾನಪ್ಪ ವಜ್ಜಲ್
Advertisement
Advertisement
ಧರ್ಮಕ್ಕೆ ನೋವುಂಟು ಮಾಡಿದರೆ ನಮಗೆ ಒಳ್ಳೇದಾಗಲ್ಲ ಎಂದ ಅವರು, ದೇವಸ್ಥಾನ, ಮಸೀದಿ, ಚರ್ಚ್ ನಮ್ಮ ಶ್ರದ್ಧಾ ಕೇಂದ್ರಗಳು. ಶ್ರದ್ಧಾ ಕೇಂದ್ರಗಳ ರಕ್ಷಣೆ ನಮ್ಮ ಜವಾಬ್ದಾರಿ. ಅಕ್ರಮ ಸ್ಥಳದಲ್ಲಿ ಶ್ರದ್ಧಾಕೇಂದ್ರಗಳಿದ್ದರೆ ಪೂರ್ವ ಸೂಚನೆ ನೀಡಬೇಕು. ಸ್ಥಳೀಯ ಜನರ ಮನವೊಲಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಜನರನ್ನು ಒಪ್ಪಿಸಿ ಧಾರ್ಮಿಕ ಕೇಂದ್ರ ತೆರವು ಮಾಡುವ ಬಗ್ಗೆ ಸರ್ಕಾರ ಯೋಚಿಸಬೇಕು. ಅಕ್ರಮ ದೇವಾಲಯ ಕಂಡು ಬಂದರೆ ಊರಿನ ಜನರ ಮನವೊಲಿಸಿ ಇದು ರಾಜ್ಯ ಸರಕಾರಕ್ಕೆ ನನ್ನ ಪ್ರಾರ್ಥನೆ ಎಂದರು.ಇದನ್ನೂ ಓದಿ: ಪ್ರಧಾನಿ ಮೋದಿ ಹುಟ್ಟುಹಬ್ಬ- ಎಸ್‍ಟಿ ಕುಟುಂಬಗಳಿಗೆ ದಿನಸಿ ವಿತರಿಸಿದ ಶೋಭಾ
Advertisement
ಮೈಸೂರಿನ ದೇವಸ್ಥಾನ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಹಿಂದೂ ಸಂಘಟನೆಗಳು ಸಿಎಂ ಬೊಮ್ಮಾಯಿ ಸರ್ಕಾರದ ವಿರುದ್ಧ ತಿರುಗಿಬಿದ್ದಿದೆ. ರಾಜ್ಯಾದ್ಯಂತ ಅಲ್ಲಲ್ಲಿ ಪ್ರತಿಭಟನೆಗಳು ಸಹ ನಡೆಯುತ್ತಿದೆ.