ನವದೆಹಲಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಎನ್‍ಐಎಗೆ ಹಸ್ತಾಂತರಿಸಿದಕ್ಕಾಗಿ ಕೇಂದ್ರ ಕೃಷಿ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರು ಗೃಹ ಸಚಿವ ಅಮಿತ್ ಶಾಗೆ ಅಭಿನಂದನೆ ಸಲ್ಲಿಸಿದ್ದಾರೆ.
ಇಂದು ದೆಹಲಿಯಲ್ಲಿ ಭೇಟಿ ಮಾಡಿದ ಅವರು ಹತ್ಯೆಯ ಬಗ್ಗೆ ತನಿಖೆ ತೀವ್ರಗೊಳ್ಳಬೇಕು ಎಂದು ಮನವಿ ಮಾಡಿದರು. ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ಹೆಚ್ಚುತ್ತಿದೆ. ಎಲ್ಲ ಹತ್ಯೆಗಳು ಒಂದೇ ಮಾದರಿಯಲ್ಲಿದೆ. ನೆರೆಯ ಕೇರಳದಿಂದಲೂ ಹಂತಕರು ಬರುತ್ತಿರುವ ಅನುಮಾನಗಳಿವೆ. ಈ ಹಿನ್ನಲೆಯಲ್ಲಿ ತನಿಖೆ ತೀವ್ರಗೊಳ್ಳಬೇಕು. ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವ ಮೂಲಕ ಅಪರಾಧಿಗಳನ್ನು ಶೀಘ್ರದಲ್ಲಿ ಪತ್ತೆ ಹೆಚ್ಚಬೇಕು ಎಂದು ಅಮಿತ್ ಶಾಗೆ ಮನವಿ ಮಾಡಿದರು.
Advertisement
Advertisement
ಇನ್ನು ಇದೇ ವೇಳೆ ರಾಜ್ಯದಲ್ಲಿ ವಿದ್ವಂಸಕ ಕೃತ್ಯಗಳು ಹೆಚ್ಚುತ್ತಿರುವ ಹಿನ್ನೆಲೆ ಎನ್‍ಐಎ ಕಚೇರಿ ವ್ಯಾಪ್ತಿಯನ್ನು ಬೆಂಗಳೂರಿಗೆ ವಿಸ್ತರಿಸುವಂತೆ ಮನವಿ ಮಾಡಿದರು. ಎನ್‍ಐಎಯಿಂದ ರಾಜ್ಯದಲ್ಲಿ ಅಪರಾಧ ಪ್ರಕರಣಗಳನ್ನು ನಿಯಂತ್ರಣಕ್ಕೆ ಬರಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ – ಡಿ.ಕೆ ಶಿವಕುಮಾರ್‌ಗೆ ಬಿಗ್ ರಿಲೀಫ್
Advertisement
Advertisement
ಅಮಿತ್ ಶಾ ಭೇಟಿಗೂ ಮುನ್ನ ಶೋಭಾ ಕರಂದ್ಲಾಜೆ ಅವರು ಅಮಿತ್ ಶಾಗೆ ಪತ್ರ ಬರೆದು ಪ್ರವೀಣ್ ಹತ್ಯೆಯನ್ನು ಎನ್‍ಐಎ ತನಿಖೆಗೆ ವಹಿಸಬೇಕು ಎಂದು ಮನವಿ ಮಾಡಿದ್ದರು. ಇದಾದ ಬಳಿಕ ರಾಜ್ಯ ಸರ್ಕಾರವೂ ಎನ್‍ಐಎಗೆ ಪ್ರಕರಣವನ್ನು ಹಸ್ತಾಂತರ ಮಾಡಿತ್ತು. ಈ ಮನವಿಗಳ ಹಿನ್ನಲೆ ಸದ್ಯ ಪ್ರಕರಣ ಎನ್‍ಐಎಗೆ ವರ್ಗಾವಣೆಯಾಗಿದೆ. ಇದನ್ನೂ ಓದಿ: ಕೋವಿಡ್-19 ಲಸಿಕಾಕರಣದ ಬಳಿಕ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ: ಅಮಿತ್ ಶಾ