ಶಿವಮೊಗ್ಗ: ಹಾಸನದಲ್ಲಿ ಪ್ರಜ್ವಲ್, ಮಂಡ್ಯದಲ್ಲಿ ನಿಖಿಲ್ ಚುನಾವಣೆಗೆ ನಿಂತಿದ್ದಾರೆ. ಆದ್ದರಿಂದ ಮುಂದಿನ ಮೂರು ದಶಕಗಳ ಕಾಲ ಮತ್ತೆ ಗೌಡರ ಕುಟುಂಬಕ್ಕಾಗಿ ಕಾರ್ಯಕರ್ತರು ದುಡಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಟಾಂಗ್ ಕೊಟ್ಟಿದ್ದಾರೆ.
ತೀರ್ಥಹಳ್ಳಿಯಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದಕ್ಷಿಣ ಭಾರತದಿಂದ ಈ ಬಾರಿ ಹೆಚ್ಚು ಬಿಜೆಪಿ ಸಂಸದರು ಸಂಸತ್ ಪ್ರವೇಶಿಸಲಿದ್ದಾರೆ. ಬಹಳ ವರ್ಷಗಳ ಕಾಲ ಕುಟುಂಬ ರಾಜಕಾರಣ ನಡೆಯುವುದಿಲ್ಲ. ಇಷ್ಟು ವರ್ಷಗಳ ಕಾಲ ದೇವೇಗೌಡರಿಗಾಗಿ ಹಾಸನದಲ್ಲಿ ಜನ ಬೆಂಬಲ ನೀಡಿ ಕೆಲಸ ಮಾಡಿದ್ದಾರೆ. ಇದೀಗ ರೇವಣ್ಣ ಅವರ ಮಗ ಪ್ರಜ್ವಲ್ ರೇವಣ್ಣ ಕೂಡ ಹಾಸನದಿಂದ ಕಣಕ್ಕಿಳಿಯಲು ಸಿದ್ಧರಾಗಿದ್ದಾರೆ. ಜೆಡಿಎಸ್‍ಗೆ ಬೆಂಬಲಿಸಿದ ಕಾರ್ಯಕರ್ತರಿಗೆ ಏನೂ ಸಿಕ್ಕಿಲ್ಲ. ಅವರಿಗೆ ಈವರೆಗೆ ಯಾವುದೇ ಕೆಲಸವಾಗಿಲ್ಲ ಎಂದರು.
Advertisement
Advertisement
ಕಳೆದ 2-3 ದಶಕದಿಂದ ರಾಜ್ಯದ ಜನ ದೇವೇಗೌಡರ ಕುಟುಂಬದ ಕಣ್ಣೀರು ನೋಡಿದ್ದಾರೆ. ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗಾಗಿ ದೇಶದ ಜನ ಇಂದು ಕಣ್ಣೀರು ಹಾಕುತ್ತಿದ್ದಾರೆ. ಕಣ್ಣೀರಿಗೆ ರಾಜ್ಯದ ಜನರು ಮರುಳಾಗಲ್ಲ. ದೇಶದಲ್ಲಿ ಮತ್ತೊಮ್ಮೆ ಮೋದಿ ಪ್ರಧಾನಿಯಾಗಬೇಕು ಎಂಬ ವಾತವಾರಣವಿದೆ. ದೇಶದ ಅಭಿವೃದ್ಧಿ, ರಕ್ಷಣೆಗಾಗಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಜನರು ಕೂಡ ಅದನ್ನೇ ಬಯಸುತ್ತಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
Advertisement
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv