– ತಮಿಳುನಾಡಿಗೆ ನೀರು ಹರಿಸೋದಕ್ಕೆ ಕೇಂದ್ರ ಸಚಿವೆ ವಿರೋಧ
ಚಿಕ್ಕಮಗಳೂರು: ರಾಜ್ಯ ಸರ್ಕಾರ (Government Of Karnataka) ತನ್ನೊಳಗಿನ ಗೊಂದಲಗಳಿಂದಾಗಿ ರಾಜ್ಯದ ಜನರನ್ನ ಬಲಿ ಕೊಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಆಕ್ರೋಶ ಹೊರಹಾಕಿದ್ದಾರೆ.
ಚಿಕ್ಕಮಗಳೂರಿನಲ್ಲಿಂದು (Chikkamagaluru) ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ತಮಿಳುನಾಡಿಗೆ ನೀರು ಬಿಡುವ ವಿಚಾರಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಡ್ಯಾಂನಲ್ಲಿ ತುಂಬಿ ಹಿಡಿದಿಟ್ಟುಕೊಳ್ಳಲು ಆಗದೇ ಇದ್ದಾಗ ತಮಿಳುನಾಡಿಗೆ ನೀರು ಬಿಟ್ಟಿದ್ವಿ: ಹೆಚ್‍ಡಿಕೆ
Advertisement
Advertisement
ದೇಶದಲ್ಲಿ ಇದ್ದಾರೆಂಬ ಕಾರಣಕ್ಕೆ ಒತ್ತಡದಿಂದ ನೀರು ಬಿಟ್ಟಿದ್ದಾರೆ. ಆದ್ರೆ ರಾಜ್ಯದಲ್ಲಿ ಮಳೆ ಕಡಿಮೆ ಇದ್ದು, ಬಹಳ ಜಿಲ್ಲೆಗಳಲ್ಲಿ ಬರದ ವಾತಾವರಣವಿದೆ. ತಮಿಳುನಾಡು ಸರ್ಕಾರ ಹಾಗೂ ವ್ಯವಸ್ಥೆಗೆ ಈ ಬಗ್ಗೆ ಮನವರಿಕೆ ಮಾಡಬೇಕಿತ್ತು. ನಮ್ಮ ರೈತರು, ಬೆಂಗಳೂರಿನ ಜನಕ್ಕೆ ಕುಡಿಯೋಕು ನೀರಿಲ್ಲದಂತಹ ಸ್ಥಿತಿ ನಿರ್ಮಾಣವಾಗುತ್ತೆ. ಈಗಾಗಲೇ ಬೆಂಗಳೂರು ನಗರಕ್ಕೆ (Bengaluru City) ಅಗತ್ಯಕ್ಕೆ ತಕ್ಕಷ್ಟು ನೀರು ಬಿಡುತ್ತಿಲ್ಲ. ಸರಿಯಾಗಿ ವಿದ್ಯುತ್ ಇಲ್ಲ, ನೀರಿಲ್ಲ, ಮಳೆ ಇಲ್ಲ ಎಲ್ಲಾ ಕಾರಣದಿಂದ ಸಮಸ್ಯೆ ಎದುರಿಸುತ್ತಿದ್ದಾರೆ. ಬೆಂಗಳೂರು, ಮೈಸೂರು, ಮಂಡ್ಯ (Mandya) ಜನರಿಗೆ ಕುಡಿಯುವ ನೀರಿಗೂ ತತ್ವಾರ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಜನರ ಬಗ್ಗೆ ಯೋಚಿಸ್ತಿಲ್ಲ, ಅವರವರ ಒಳ ರಾಜಕೀಯದ ಬಗ್ಗೆ ಯೋಚಿಸ್ತಿದೆ. ಸರ್ಕಾರ ತನ್ನೊಳಗಿನ ಗೊಂದಲಗಳಿಂದಾಗಿ ಕರ್ನಾಟಕದ ಜನರನ್ನ ಬಲಿ ಕೊಡ್ತಿದೆ ಎಂದು ಕಿಡಿ ಕಾರಿದ್ದಾರೆ.
Advertisement
Advertisement
ದೇಶಕ್ಕೆ ಮೋದಿ ಬೇಕು:
ಪಕ್ಷ ಬಿಟ್ಟು ಹೋದವರನ್ನ ಮತ್ತೆ ಸೇರಿಸಿಕೊಂಡು ಬಿಜೆಪಿಯನ್ನ ಗಟ್ಟಿ ಮಾಡಬೇಕು. ಮೋದಿಯನ್ನ ಮತ್ತೆ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಎಲ್ಲರೂ ಶ್ರಮ ವಹಿಸಬೇಕು. ದೇಶಕ್ಕೆ ಮೋದಿ ಬೇಕಾಗಿದೆ, ವಿಶ್ವಕ್ಕೆ ಮೋದಿ ಬೇಕಾಗಿದೆ. ವಿಶ್ವದ ಹಲವು ದೇಶ ಭಾರತ, ಮೋದಿಯನ್ನ ನೋಡ್ತಿವೆ. ಭಾರತವನ್ನು ಮತ್ತಷ್ಟು ಗಟ್ಟಿ ಮಾಡಲು ಎಲ್ಲರ ಸಹಕಾರ ಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: KRSನಿಂದ ತಮಿಳುನಾಡಿಗೆ ಗುರುವಾರವೂ ಭಾರೀ ಪ್ರಮಾಣದ ನೀರು – ಇಂದು ರೈತಸಂಘ ಪ್ರತಿಭಟನೆ
ಬಿಜೆಪಿ (BJP) ಸರ್ಕಾರ ರಚನೆ ಮಾಡಲು ಶಾಸಕರು, ಮುಖಂಡರು ಬಿಜೆಪಿ ಸೇರಿದ್ದರು. ಅವರಿಗೆ ಬಿಜೆಪಿ ಅತ್ಯಂತ ಗೌರವದಿಂದ ನಡೆದುಕೊಂಡಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಅವರಿಗೆ ದೊಡ್ಡ ಖಾತೆಗಳನ್ನೇ ಕೊಟ್ಟಿದೆ. ಅವರನ್ನ ದೊಡ್ಡ-ದೊಡ್ಡ ಜಿಲ್ಲೆಗೆ ಉಸ್ತುವಾರಿ ಸಚಿವರನ್ನಾಗಿ ಮಾಡಿದೆ. ಪಕ್ಷದ ಎಲ್ಲಾ ಚಟುವಟಿಕೆಯಲ್ಲಿ ಅವರನ್ನ ತೊಡಗಿಸಿಕೊಳ್ಳಲಾಗಿತ್ತು. ಇವತ್ತು ಸರ್ಕಾರ ಇಲ್ಲ, ಬಿಜೆಪಿ ಸೋತಿದೆ. ಆ ಸೋಲಿನಲ್ಲೂ ಎಲ್ಲರ ಪಾಲು ಇದೆ. ಮತ್ತೆ ಬಿಜೆಪಿಯನ್ನ ಕಟ್ಟಬೇಕು ಅನ್ನೋದು ನಮ್ಮ ಅಪೇಕ್ಷೆ. ಅಂದು ನಮ್ಮ ಪಕ್ಷದ ತತ್ವ-ಸಿದ್ಧಾಂತಗಳನ್ನ ಒಪ್ಪಿಕೊಂಡು ಪಕ್ಷ ಸೇರಿದ್ದರು. ಅವರು ಖಂಡಿತವಾಗಿಯೂ ಪಕ್ಷದಲ್ಲೇ ಇರ್ತಾರೆ ಅನ್ನೋ ವಿಶ್ವಾಸವಿದೆ. ಅಧಿಕಾರಕ್ಕಾಗಿ ಬಂದ್ರು, ಅಧಿಕಾರ ಇಲ್ಲದಾಗ ಹೋದ್ರು ಎಂಬ ಕೆಟ್ಟ ಹೆಸರನ್ನ ಯಾರೂ ತೆಗೆದುಕೊಳ್ಳಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಜಗದೀಶ್ ಶೆಟ್ಟರ್, ಲಕ್ಷ್ಮಣ್ ಸವದಿಗೆ ಪರೋಕ್ಷವಾಗಿ ಆಹ್ವಾನ ಕೊಟ್ಟ ಸಚಿವೆ, ಮೋದಿಗಾಗಿ ಪಕ್ಷ ಬಿಟ್ಟು ಹೋದವರಿಗೂ ಆಹ್ವಾನವಿದೆ. ಪಕ್ಷ ಬಿಟ್ಟೋದವರ ಜೊತೆ ಸದ್ಯಕ್ಕೆ ಯಾವುದೇ ಮಾತುಕತೆ ನಡೆದಿಲ್ಲ. ಮೋದಿಯಂತ ನಾಯಕ ಈ ದೇಶಕ್ಕೆ ಮತ್ತೆ ಸಿಗಲ್ಲ. ದೇಶದ ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಮೋದಿಯಂತಹ ನಾಯಕ ಯಾವ ಪಕ್ಷದಲ್ಲೂ ಸಿಗೋದಿಲ್ಲ. ಇಡೀ ವಿಶ್ವವೇ ಅವರನ್ನ ಒಪ್ಪುತ್ತಿದೆ. ಅವರನ್ನ ಪಿಎಂ ಮಾಡಬೇಕು ಅದಕ್ಕಾಗಿ ಯಾರೇ ಪಾರ್ಟಿ ಬಿಟ್ಟಿದರೂ ವಾಪಸ್ ಬರಲು ವಿನಂತಿ. ಮೋದಿಗಾಗಿ, ದೇಶಕ್ಕಾಗಿ, ಮುಂದಿನ ಪೀಳಿಗೆಗಾಗಿ ಬರಬೇಕಿದೆ. ಪಕ್ಷಕ್ಕೆ ವಾಪಸ್ ಬನ್ನಿ. ವಿಶ್ವದ ಶಾಂತಿಗಾಗಿ ನಾವೆಲ್ಲರೂ ಒಗ್ಗೂಡಿ ಕೆಲಸ ಮಾಡೋಣ ಬಿಜೆಪಿಯನ್ನು ದೇಶದಲ್ಲಿ ಇನ್ನಷ್ಟು ಬಲಿಷ್ಠಗೊಳಿಸೋಣ ಎಂದು ಕರೆ ನೀಡಿದ್ದಾರೆ.
Web Stories