ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election) ಹೊತ್ತಲ್ಲಿ ಬಿಜೆಪಿಗೆ ಮತ್ತೊಂದು ಆಘಾತವುಂಟಾಗಿದೆ. ಇತ್ತೀಚಿಗಷ್ಟೇ ಎಂಎಲ್‌ಸಿ (MLC) ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ತೇಜಸ್ವಿನಿ ಗೌಡ (Tejaswini Gowda) ಇದೀಗ ಅಧಿಕೃತವಾಗಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.
ದೆಹಲಿಯಲ್ಲಿ (New Delhi) ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ತೇಜಸ್ವಿನಿ ಗೌಡ ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು. ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿದ್ದ ಬಿಜೆಪಿ ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ಕೆಲವು ದಿನಗಳ ಹಿಂದಷ್ಟೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ವಿಧಾನಸೌಧದಲ್ಲಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು. ಇದನ್ನೂ ಓದಿ: ಕೇಜ್ರಿವಾಲ್ ಬಂಧನ ಬೆನ್ನಲ್ಲೇ ಮತ್ತೊಬ್ಬ ದೆಹಲಿ ಸಚಿವರಿಗೆ ಇ.ಡಿ ಸಮನ್ಸ್
Advertisement
Advertisement
ಸುಮಾರು ಹತ್ತು ವರ್ಷಗಳ ಹಿಂದೆ ಕಾಂಗ್ರೆಸ್‌ನಿಂದ ಬಿಜೆಪಿಗೆ ವಲಸೆ ಬಂದಿದ್ದ ತೇಜಸ್ವಿನಿ ಅವರು ಈಗ ಮತ್ತೆ ಕಾಂಗ್ರೆಸ್‌ಗೆ ವಾಪಸ್ಸಾಗಿದ್ದಾರೆ. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ತೇಜಸ್ವಿನಿ ಮೈಸೂರು ಅಥವಾ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಬಯಸಿದ್ದರು. ಟಿಕೆಟ್ ಸಿಗದೇ ಇದ್ದುದರಿಂದ ಬೇಸರಗೊಂಡು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಘರ್‌ವಾಪ್ಸಿ ಆಗಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಏ.3 ರಂದು ನಾಮಪತ್ರ ಸಲ್ಲಿಕೆ
Advertisement