ಬೆಂಗಳೂರು: ಬಿಎಂಟಿಸಿ ವೋಲ್ವೋ ಬಸ್ ಪ್ರಯಾಣಿಕರಿಗೆ ಶಾಕ್ ನೀಡಲಾಗಿದ್ದು, ಡಿಸೇಲ್ ದರ ಏರಿಕೆ ಹಿನ್ನೆಲೆಯಲ್ಲಿ ವೋಲ್ವೋ ಬಸ್ ಪ್ರಯಾಣ ದರ ಹೆಚ್ಚಳವಾಗಲಿದೆ.
ಜುಲೈ 1 ರಿಂದ ಹಂತ ಸಂಖ್ಯೆ 7 ರಿಂದ 25 ರವರೆಗೆ ಮಾತ್ರ ಹಂತವಾರು ಬಸ್ ಪ್ರಯಾಣ ದರ 3.45% ರಿಂದ 26% ರವರೆಗೆ ಹೆಚ್ಚಳವಾಗಲಿದ್ದು, ಸರಾಸರಿ 16.89 ರಷ್ಟು ಏರಿಕೆ ಕಾಣಲಿದೆ. ನಾಳೆಯಿಂದಲೇ ನಗರದ ಸುಮಾರು 700 ವೋಲ್ವೋ ಬಸ್ಸುಗಳಿಗೆ ದರ ಅನ್ವಯವಾಗಲಿದೆ.
Advertisement
2018 ವರ್ಷದ ಮೊದಲ ದಿನವೇ ಬಿಎಂಟಿಸಿ ವೋಲ್ವೋ ಬಸ್ ಪ್ರಯಾಣ ದರ ಕಡಿಮೆ ಮಾಡುವ ಮೂಲಕ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿತ್ತು. ಈ ವೇಳೆ ವಜ್ರ ಪ್ರಯಾಣ ದರಗಳನ್ನು 5% ರಿಂದ 37% ರವರೆಗೆ ಸರಾಸರಿ 29 ರಷ್ಟು ಕಡಿಮೆಗೊಳಿಸಿ ಪರಿಷ್ಕರಿಸಲಾಗಿತ್ತು. ನಿರಂತರವಾಗಿ ಏರಿಕೆಯಾಗುತ್ತಿರುವ ಡೀಸೆಲ್ ದರ, ತುಟ್ಟಿಭತ್ಯೆ ಹೆಚ್ಚಳ, ಸಿಬ್ಬಂದಿ ಹಾಗೂ ಕಾರ್ಯಾಚರಣೆ ವೆಚ್ಚದಲ್ಲಿಯೂ ಏರಿಕೆಯಾಗಿದ್ದರಿಂದ ಈ ಕ್ರಮಕ್ಕೆ ಮುಂದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Advertisement
Advertisement
ಈ ಹಿಂದೆ ಸಾರಿಗೆ ಸಚಿವ ಡಿಸಿ ತಮ್ಮಣ್ಣ ಅವರು, ಡೀಸೆಲ್ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆಗಳು ಬಸ್ ಟಿಕೆಟ್ ದರ ಏರಿಸುವಂತೆ ಪ್ರಸ್ತಾವನೆ ಸಲ್ಲಿಸಿವೆ. ಆದರೆ ಯಾವುದೇ ಕಾರಣಕ್ಕೂ ಬಸ್ ಟಿಕೆಟ್ ದರ ಏರಿಕೆ ಮಾಡುವುದಿಲ್ಲ. ಈ ಕುರಿತು ಮುಖ್ಯಮಂತ್ರಿಗಳು ಸಭೆ ಕರೆದಿದ್ದು, ಸಭೆಯಲ್ಲಿ ಬಸ್ ದರ ಏರಿಸುವ ಬದಲು ಸಾರಿಗೆ ಸಂಸ್ಥೆಗಳಲ್ಲಿ ಆಗುತ್ತಿರುವ ನಷ್ಟವನ್ನು ಕಡಿಮೆಗೊಳಿಸುವ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ಹೇಳಿಕೆ ನೀಡಿದ್ದರು.