– ಬುಧವಾರ ಕಾಂಗ್ರೆಸ್ ಸೇರ್ಪಡೆ
ಹುಬ್ಬಳ್ಳಿ: ಚುನಾವಣೆಯ ಸಮಯದಲ್ಲಿ ಬಿಜೆಪಿಗೆ (BJP) ಮತ್ತೊಂದು ಆಘಾತ ಎದುರಾಗಿದ್ದು, ವಿಧಾನ ಪರಿಷತ್ ಸ್ಥಾನಕ್ಕೆ (MLC) ಕೆ.ಪಿ.ನಂಜುಂಡಿ (KP Nanjundi) ರಾಜೀನಾಮೆ ನೀಡಿದ್ದಾರೆ.
Advertisement
ಬಿಜೆಪಿ ವಿಧಾನ ಪರಿಷತ್ ಸದಸ್ಯರಾಗಿದ್ದ ಕೆ.ಪಿ.ನಂಜುಂಡಿ ಸಭಾಪತಿ ಬಸವರಾಜ ಹೊರಟ್ಟಿಯವರ ಹುಬ್ಬಳ್ಳಿಯ ಗೃಹ ಕಚೇರಿಗೆ ತೆರಳಿ ರಾಜೀನಾಮೆ (Resignation) ನೀಡಿದ್ದಾರೆ. ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆ ಅಂಗೀಕಾರ ಮಾಡಿದ್ದು, ಸ್ವ-ಇಚ್ಛೆಯಿಂದ ರಾಜೀನಾಮೆ ನೀಡಿರುವುದಾಗಿ ನಂಜುಂಡಿ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಬಣದಲ್ಲಿ ಗುರುತಿಸಿಕೊಂಡಿದ್ದ ಕೆ.ಪಿ.ನಂಜುಂಡಿ ವಿಶ್ವಕರ್ಮ ಸಮುದಾಯದ ಪ್ರಬಲ ನಾಯಕರಾಗಿದ್ದಾರೆ. ಇದನ್ನೂ ಓದಿ: ರಾಜ್ಯ ಕ್ಯಾಂಪೇನ್‍ಗೆ ಪ್ರಿಯಾಂಕಾ ಗಾಂಧಿ- ಬೆಂಗಳೂರು, ಚಿತ್ರದುರ್ಗದಲ್ಲಿ ಪ್ರಚಾರ
Advertisement
Advertisement
ರಾಜೀನಾಮೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಂಜುಂಡಿ, ಬಿಜೆಪಿ ಕಾರ್ಯಕರ್ತರಿಗೆ, ಪಕ್ಷದ ಮುಖಂಡರಿಗೆ ಧನ್ಯವಾದ ತಿಳಿಸುವೆ. ರಾಜಕೀಯ ನನ್ನ ವೃತ್ತಿ ಅಲ್ಲಾ. ನನ್ನ ಸಮಾಜದ ಉಳಿವಿಗಾಗಿ ನಾನು ರಾಜಕೀಯಕ್ಕೆ ಬಂದಿದ್ದೆ. ಹಿಂದುಳಿದ ವರ್ಗಗಳ ಧ್ವನಿಯಾಗಿ ನನ್ನನ್ನು ಬಳಸಿಕೊಳ್ಳುತ್ತಾರೆ ಎಂದು ಬಿಜೆಪಿ ಸೇರಿದ್ದೆ. ಬರೀ ಎಂಎಲ್‌ಸಿ ಮಾಡಿದರೆ ನಮ್ಮ ಸಮಾಜ ಉದ್ಧಾರ ಆಗಲ್ಲ. ನಮ್ಮ ಸಮಾಜಕ್ಕೆ ಏನೂ ಮಾಡಿಲ್ಲ. ಎಂಎಲ್‌ಸಿ ಎನ್ನುವುದು ಗೌರವ ಅಧಿಕಾರ ಅಲ್ಲಾ. ಎಂಎಲ್‌ಸಿ ಮಾಡಿದರೆ ಸಮಾಜಕ್ಕೆ ಎಲ್ಲಾ ಸಿಗುತ್ತೆ ಎನ್ನುವುದು ತಪ್ಪು. ನಾನು ಮೋದಿ ಬಗ್ಗೆ, ಪಕ್ಷದ ಬಗ್ಗೆ ಏನೂ ಮಾತನಾಡಲ್ಲ. ಆದರೆ ಪಕ್ಷದಲ್ಲಿ ನನ್ನನ್ನು ನಿರ್ಲಕ್ಷ್ಯ ಮಾಡಿದ್ದಾರೆ ಎಂದರು. ಇದನ್ನೂ ಓದಿ: ಬರಪರಿಹಾರ ಬಿಡುಗಡೆ – ಇಂದು ಕೇಂದ್ರದ ವಿರುದ್ಧ ರಾಜ್ಯ ಸರ್ಕಾರ ಪ್ರತಿಭಟನೆ
Advertisement
ಬಿಜೆಪಿ ಅಧಿಕಾರದಲ್ಲಿದ್ದಾಗ ನನಗೆ ಸಚಿವ ಸ್ಥಾನ ನೀಡಬೇಕಿತ್ತು. ನನಗೆ ಅರ್ಹತೆ ಇತ್ತು. ನಾಳೆ (ಬುಧವಾರ) ಬೆಳಗ್ಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯ ನಡೆಯಲಿದೆ. ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪಕ್ಷ ಸೇರ್ಪಡೆ ಆಗುವೆ ಎಂದು ತಿಳಿಸಿದರು. ಇದನ್ನೂ ಓದಿ: ಇಂದು ಮಧ್ಯರಾತ್ರಿ ವಿಶ್ವವಿಖ್ಯಾತ ಐತಿಹಾಸಿಕ ಕರಗೋತ್ಸವಕ್ಕೆ ವಿದ್ಯುಕ್ತ ಚಾಲನೆ