ರಾಯಚೂರು: ನಟ ಸೈಫ್ ಅಲಿ ಖಾನ್ (Saif Ali Khan) ಮೇಲೆ ನಡೆದ ಹಲ್ಲೆ ಕೇಳಿ ಭಾರೀ ಶಾಕ್ ಆಗಿದೆ. ಅವರು ಬೇಗ ಗುಣಮುಖರಾಗುತ್ತಾರೆ ಎಂಬ ನಂಬಿಕೆ ನನಗೆ ಇದೆ ಎಂದು ಬಾಲಿವುಡ್ (Bollywood) ನಟಿ ಶಿಲ್ಪಾ ಶೆಟ್ಟಿ (Shilpa Shetty) ಹೇಳಿದ್ದಾರೆ.
ರಾಯಚೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಶಿಲ್ಪಾ ಶೆಟ್ಟಿ, ಮುಂಬೈ ಪೊಲೀಸರು (Mumbai Police) ಸೈಫ್ ಅಲಿ ಖಾನ್ ಮೇಲೆ ಹಲ್ಲೆ ಮಾಡಿದವನನ್ನ ಕೂಡಲೇ ಬಂಧಿಸಲಿದ್ದಾರೆ ಎಂಬ ನಂಬಿಕೆ ಇದೆ ಎಂದರು. ಇನ್ನೂ ರಾಯಚೂರಿಗೆ ಬಂದಿರುವುದು ನಾನು ನಮ್ಮ ಊರಿಗೆ ಬಂದಂತೆ ಆಗಿದೆ. ನನ್ನ ಕನ್ನಡದ ಮುಂದಿನ ಸಿನಿಮಾ ಡೆವಿಲ್ ಹಾಗೂ ಕೆಡಿ ಬರುತ್ತಿವೆ. ಪ್ರೇಮ್ ನಿರ್ದೇಶನದ ಕೆಡಿ ಸಿನಿಮಾ ಬಗ್ಗೆ ನನಗೆ ಭಾರೀ ಕುತೂಹಲ ಇದೆ. ಧ್ರುವ ಸರ್ಜಾ ಹಾಗೂ ಸಂಜಯ್ ದತ್ ಜೊತೆಗೆ ನಟಿಸಿದ್ದಾರೆ ಎಂದರು. ಇದನ್ನೂ ಓದಿ: ಖಾಸಗೀಕರಣ ಹೊಸ್ತಿಲಲ್ಲಿದ್ದ ವೈಜಾಗ್ ಸ್ಟೀಲ್ ಕಾರ್ಖಾನೆಗೆ ಕೇಂದ್ರದಿಂದ ಜೀವದಾನ – 11,440 ಕೋಟಿ ಪುನಶ್ಚೇತನ ಪ್ಯಾಕೇಜ್
ಖಾಸಗಿ ಕಾರ್ಯಕ್ರಮಕ್ಕೆ ಬಂದಿದ್ದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ನೋಡಲು ರಾಯಚೂರಿನಲ್ಲಿ ಜನ ಮುಗಿಬಿದ್ದಿದ್ದರು. ನಗರದ ಸ್ಟೇಷನ್ ರಸ್ತೆಯಲ್ಲಿ ಜನರ ನೂಕುನುಗ್ಗಲಿನಿಂದ ಕೆಲಹೊತ್ತು ಟ್ರಾಫಿಕ್ ಜಾಮ್ ಆಗಿತ್ತು. ಜನರನ್ನು ಚದುರಿಸಿ, ರಸ್ತೆ ಸಂಚಾರ ತಿಳಿಗೊಳಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಇದನ್ನೂ ಓದಿ: ಗಮನಿಸಿ.. ಭಾನುವಾರ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆ ಸ್ಥಗಿತ