ಹೈದರಾಬಾದ್: ಎಸ್.ಎಸ್. ರಾಜಮೌಳಿ ನಿರ್ದೇಶನದ ಬಾಹುಬಲಿ-2 ಚಿತ್ರದ ಟ್ರೇಲರ್ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ನಿರ್ಮಿಸಿದೆ. ಬಾಹುಬಲಿ-2 ಚಿತ್ರದ ಟ್ರೇಲರನ್ನ ಈಗಾಗಲೇ ಕೋಟ್ಯಾಂತರ ಮಂದಿ ವೀಕ್ಷಿಸಿದ್ದು ವಿಶ್ವದಾದ್ಯಂತ ಟ್ರೆಂಡಿಂಗ್ ಆಗಿದೆ.
ಇದನ್ನೂ ಓದಿ: ಪ್ರಭಾಸ್, ರಾಣಾ ಫೈಟಿಂಗ್, ಅನುಷ್ಕಾ ರೋಮ್ಯಾಂಟಿಕ್ ಸೀನ್: ಬಾಹುಬಲಿ ಟ್ರೇಲರ್ ರಿಲೀಸ್
Advertisement
ಟ್ರೇಲರ್‍ನಲ್ಲಿ ಪ್ರಭಾಸ್ ಹಾಗೂ ಅನುಷ್ಕಾ ಶೆಟ್ಟಿ ನಡುವಿನ ರೊಮ್ಯಾಂಟಿಕ್ ದೃಶ್ಯವನ್ನೂ ನೋಡಬಹುದು. ಬಾಹುಬಲಿ ಭಾಗ-1ರಲ್ಲಿ ಅನುಷ್ಕಾ ಮಧ್ಯವಯಸ್ಕ ಮಹಿಳೆಯಾಗಿ ಕಾಣಿಸಿಕೊಂಡಿದ್ದರು. ಭಾಗ-1ರಲ್ಲಿ ಪ್ರಭಾಸ್ ಮತ್ತು ತಮನ್ನಾ ನಡುವಿನ ರೊಮ್ಯಾನ್ಸ್ ದೃಶ್ಯಗಳಿದ್ದವು. ಆದ್ರೆ ಭಾಗ -2ರಲ್ಲಿ ಅನುಷ್ಕಾ ಮತ್ತು ಪ್ರಭಾಸ್ ನಡುವೆ ರೊಮ್ಯಾನ್ಸ್ ಇರಲಿದೆ ಅನ್ನೋ ಸ್ಪಷ್ಟ ಸೂಚನೆ ಟ್ರೇಲರ್‍ನಲ್ಲಿ ಸಿಕ್ಕಿದೆ.
Advertisement
ಬಾಹುಬಲಿ-2 ಚಿತ್ರ ಬಿಡುಗಡೆಯಾಗುತ್ತಿದ್ದಂತೆಯೇ ಪ್ರಭಾಸ್ ವಿಶಾಖಪಟ್ಟಣಂನಲ್ಲಿ ವಾಸವಿರೋ 22 ವರ್ಷದ ಎಂಜಿನಿಯರಿಂಗ್ ಪದವೀಧರೆಯಾಗಿರೋ ಸಂಬಂಧಿಯೋರ್ವರನ್ನು ಮದುವೆಯಾಗ್ತಾರೆ ಅಂತ ಸುದ್ದಿಯಾಗಿತ್ತು. ಆದ್ರೆ ಈ ಸುದ್ದಿಯ ನಡುವೆ ಪ್ರಭಾಸ್ ಅನುಷ್ಕಾ ಮದುವೆಯಾಗ್ತಾರೆ ಅನ್ನೋ ಗುಲ್ಲೆದ್ದಿತ್ತು. ಇದಕ್ಕೆ ಕಾರಣ ಬಾಹುಬಲಿ ಚಿತ್ರದಲ್ಲಿ ಅವರಿಬ್ಬರ ನಡುವೆ ಇರೋ ಕೆಮಿಸ್ಟ್ರಿ. ಚಿತ್ರದ ಪ್ರಮುಖ ಪಾತ್ರಗಳಾದ ಪ್ರಭಾಸ್ ಮತ್ತು ಅನುಷ್ಕಾ ಶೆಟ್ಟಿಯ ನಿಶ್ಚಿತಾರ್ಥ ಸಮಾರಂಭವನ್ನ ತೋರಿಸಲು ನಿರ್ದೇಶಕ ಎಸ್‍ಎಸ್ ರಾಜಮೌಳಿ ಅದ್ಧೂರಿ ಸೆಟ್ ವಿನ್ಯಾಸಗೊಳಿಸಿದ್ರು. ಈ ಸೆಟ್ ಎಷ್ಟು ನೈಜವಾಗಿತ್ತೆಂದರೆ ಇದನ್ನು ನೋಡಿದ ಜನ ಇದು ರಿಯಲ್ ನಿಶ್ಚಿತಾರ್ಥ ಸಮಾರಂಭ ಎಂದುಕೊಂಡಿದ್ದು ಈ ವದಂತಿಗೆ ಪುಷ್ಟಿ ನೀಡಿತ್ತು.
Advertisement
ಇದನ್ನೂ ಓದಿ: ಭಾರತದ ಸಿನಿಮಾ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಬಾಹುಬಲಿ ಟ್ರೇಲರ್
Advertisement
ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಸೃಷ್ಟಿಸಿರೋ ಬಾಹುಬಲಿ-2 ಚಿತ್ರದ ಟ್ರೇಲರ್ ಬಿಡುಗಡೆಯಾದ 24 ಗಂಟೆಯಲ್ಲೇ 5 ಕೋಟಿಗೂ ಅಧಿಕ ವ್ಯೂ ಗಳಿಸಿದೆ. ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಬರೆದ ಕಥೆಯಾಧರಿತ ಬಾಹುಬಲಿ 2 ಚಿತ್ರದಲ್ಲಿ ಪ್ರಭಾಸ್, ರಾಣಾ ದಗ್ಗುಬಾಟಿ, ಅನುಷ್ಕಾ ಶೆಟ್ಟಿ, ಸತ್ಯರಾಜ್, ತಮನ್ನಾ, ರಮ್ಯಾಕೃಷ್ಣ ಅಭಿನಯಿಸಿದ್ದು ವಿಶ್ವದಾದ್ಯಂತ ಏಪ್ರಿಲ್ 28 ರಂದು ತೆರೆಕಾಣಲಿದೆ.
ಇದನ್ನೂ ಓದಿ: ಬಾಹುಬಲಿಯನ್ನು ಕೊಂದಿದ್ದು ಯಾಕೆ: ಕೊನೆಗೂ ಉತ್ತರ ಹೇಳಿದ ಕಟ್ಟಪ್ಪ!