3ನೇ ತರಗತಿ ಬಾಲಕಿಯ ಬಟ್ಟೆ ಬಿಚ್ಚಿ ಅತ್ಯಾಚಾರಗೈದ ಪ್ರಿನ್ಸಿಪಾಲ್!

Public TV
2 Min Read

ಲಕ್ನೋ: 71 ವರ್ಷದ ಶಾಲಾ ಪ್ರಾಂಶುಪಾಲನೊಬ್ಬ ತಮ್ಮದೇ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿಯೊಬ್ಬಳ ಬಟ್ಟೆಬಿಚ್ಚಿ ಅತ್ಯಾಚಾರವೆಸಗಿದ್ದು ಘಟನೆ ಉತ್ತರ ಪ್ರದೇಶದ ಮುಜಾಫರ್‌ ನಗರದಲ್ಲಿ ನಡೆದಿದೆ.

ಗುರುವನ್ನು ದೇವರ ಸ್ಥಾನದಲ್ಲಿ ಇರಿಸಲಾಗಿದೆ. ತಂದೆ-ತಾಯಿ, ಗುರುಗಳು ಸಹ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಆದರೆ 71 ವರ್ಷದ ಪ್ರಾಂಶುಪಾಲ ತನ್ನ ಶಾಲೆಯಲ್ಲಿ 9 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಉತ್ತರ ಪ್ರದೇಶದಲ್ಲಿ ಮಕ್ಕಳ ಮೇಲಿನ ಅಪರಾಧಗಳಿಗೆ ಅಂತ್ಯವೇ ಇಲ್ಲದಂತಾಗಿದೆ. ಮೊಮ್ಮಗಳ ವಯಸ್ಸಿನ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ.

pocso

ಅಪರಾಧದ ವಿವರಗಳನ್ನು ಮರೆಮಾಚಿದ್ದಕ್ಕಾಗಿ ಅದೇ ಶಾಲೆಯ ಶಿಕ್ಷಕ ಮತ್ತು ಅತ್ಯಾಚಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ವರದಿಯ ಪ್ರಕಾರ, 3 ನೇ ತರಗತಿಯ ವಿದ್ಯಾರ್ಥಿಗೆ ತೀವ್ರ ರಕ್ತಸ್ರಾವವಾದ ನಂತರ ಮನೆಗೆ ಹಿಂದಿರುಗಿದ್ದಾಳೆ ಈ ವೇಳೆ ಬಾಲಕಿಯ ತಾಯಿಗೆ ಈ ವಿಷಯ ತಿಳಿದಿದೆ. ತೀವ್ರ ರಕ್ತಸ್ರಾವವಾಗುತ್ತಿದ್ದರು ಆ ಪುಟ್ಟ ಬಾಲಕಿ ತನ್ನ ನೋವನ್ನು ಪೋಷಕರಿಗೆ ತಿಳಿಸಿರಲಿಲ್ಲ. ಬಳಿಕ ಆಕೆಯನ್ನು ವೈದ್ಯರ ಬಳಿ ಕರೆದುಕೊಂಡು ಹೋದಾಗ ಆಕೆಯ ಮೇಲೆ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಡಬಲ್ ಎಂಜಿನ್ ಸರ್ಕಾರ ಅಲ್ಲ, ಡಬ್ಬಾ ಸರ್ಕಾರ ಇದು: ಸಿದ್ದು ಕಿಡಿ

ಸಂತ್ರಸ್ತೆ ವೈದ್ಯಕೀಯ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಯ ತಂದೆಯ ದೂರಿನ ನಂತರ, ಶಾಲಾ ಪ್ರಾಂಶುಪಾಲರ ವಿರುದ್ಧ ಭಾರತೀಯ ದಂಡ ಸಂಹಿತೆ ಐಪಿಸಿ ಸೆಕ್ಷನ್ 376 ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Police Jeep

ಯಾವುದೋ ಕಾರಣಕ್ಕೆ ನನ್ನ ಮಗಳನ್ನು ತರಗತಿ ಕೋಣೆಗೆ ಕರೆದೊಯ್ದ ಪ್ರಾಂಶುಪಾಲರು ಆಕೆಯ ಬಟ್ಟೆ ಬಿಚ್ಚಿಸಿ ಅತ್ಯಾಚಾರವೆಸಗಿದ್ದಾರೆ. ನಮ್ಮ ಮಗಳು ತನ್ನ ಮೇಲೆ ನಡೆದ ದೌರ್ಜನ್ಯದ ಅರಿವಿಲ್ಲದೆ ಮನೆಗೆ ಬಂದು ಅಮ್ಮ ನನಗೆ ತುಂಬಾ ನೋವಾಗುತ್ತಿದೆ ಎಂದು ಹೇಳಿದ್ದಾಳೆ. ಈ ವೇಳೆ ನಾವು ಅವಳನ್ನು ವೈದ್ಯರ ಬಳಿಗೆ ಕರೆದೊಯ್ದಾಗ, ನಮಗೆ ಅದು ತಿಳಿದಿತ್ತು ಅಂತ ಹುಡುಗಿಯ ತಂದೆ ಆರೋಪಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಎಲ್ಲಾ ಸಂಬಂಧಿತ ವಿವರಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ನಮ್ಮ ಇಲಾಖೆಯಲ್ಲಿ ಅನುದಾನ ಇಲ್ಲ- ಸದನದಲ್ಲಿ ಜಲಸಂಪನ್ಮೂಲ ಸಚಿವರ ಅಳಲು

ಸೆಪ್ಟೆಂಬರ್ 2018ರಲ್ಲಿ ಇದೇ ರೀತಿಯ ಘಟನೆ ಸಂಭವಿಸಿದೆ. ಬಿಹಾರದ ಫುಲ್ವಾರಿ ಷರೀಫ್ ಖಾಸಗಿ ಶಾಲೆಯ ಪ್ರಾಂಶುಪಾಲರು ಮತ್ತು ಗುಮಾಸ್ತರು 5ನೇ ತರಗತಿ ವಿದ್ಯಾರ್ಥಿನಿಯನ್ನು 9 ತಿಂಗಳ ಕಾಲ ಅತ್ಯಾಚಾರ ಮಾಡಿದ್ದಾರೆ. 10 ವರ್ಷದ ಬಾಲಕಿ ಗರ್ಭಿಣಿಯಾದಾಗ ಅತ್ಯಾಚಾರದ ವಿಷಯ ಬೆಳಕಿಗೆ ಬಂದಿತ್ತು.

Share This Article
Leave a Comment

Leave a Reply

Your email address will not be published. Required fields are marked *