ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸ್ಯಾಂಡಲ್‍ವುಡ್ ನಟರ ಮನೆಯ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಶಾಕ್ ಕೊಟ್ಟಿದ್ದರೆ, ಇತ್ತ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರಿಗೂ ಐಟಿ ಶಾಕ್ ಕೊಟ್ಟಿದೆ.
ಸಚಿವ ಡಿ.ಕೆ. ಶಿವಕುಮಾರ್ ತಾಯಿ ಗೌರಮ್ಮ ಅವರಿಗೆ ತೆರಿಗೆ ಇಲಾಖೆ ನೋಟಿಸ್ ಕಳುಹಿಸಿದೆ. ಗೌರಮ್ಮ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಕನಕಪುರದ ದೊಡ್ಡ ಆಲಹಳ್ಳಿಯ ನಿವಾಸದಲ್ಲಿ ಐಟಿ ಅಧಿಕಾರಿಗಳು ನೋಟಿಸ್ ಅಂಟಿಸಿ ಹೋಗಿದ್ದಾರೆ. ಇದನ್ನೂ ಓದಿ: Exclusive: ಡಿಕೆ ಶಿವಕುಮಾರ್ ತಾಯಿ ಗೌರಮ್ಮಗೆ ಐಟಿ ಕೇಳಿದ ಪ್ರಶ್ನೆಗಳು ಏನು..?
Advertisement
Advertisement
2017ರ ನವೆಂಬರ್ 6 ರಂದು ಡಿಕೆ ಶಿವಕುಮಾರ್ ಪತ್ನಿ ಉಷಾ, ಸಹೋದರ ಡಿ ಕೆ ಸುರೇಶ್, ತಾಯಿ ಗೌರಮ್ಮ, ಇಬ್ಬರು ಪುತ್ರಿಯರನ್ನು ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಎಂಎಲ್‍ಸಿ ರವಿ, ಡಿಕೆಶಿ ಮಾವನ ಮಗ, ಡಿಕೆಶಿ ತಾಯಿ ಗೌರಮ್ಮ ಅವರ ಅಣ್ಣನ ಮಗ, ದವನಂ ಜ್ಯುವೆಲ್ಲರ್ಸ್ ಮಾಲೀಕ ಹರೀಶ್, ಶರ್ಮಾ ಟ್ರಾವೆಲ್ಸ್ ಮಾಲೀಕ ಸುನಿಲ್ ಶರ್ಮಾ, ಗ್ಲೋಬಲ್ ಕಾಲೇಜು ನಿರ್ದೇಶಕ ನಂದೀಶ್ ಸೇರಿ ಒಟ್ಟು 15 ಮಂದಿ ವಿಚಾರಣೆಗೆ ಹಾಜರಾಗಿ ಐಟಿ ಅಧಿಕಾರಿಗಳ ಪ್ರಶ್ನೆ ಉತ್ತರ ನೀಡಿದ್ದರು.
Advertisement
ಕುಟುಂಬ ಸದಸ್ಯರು ಐಟಿ ಅಧಿಕಾರಿಗಳ ವಿಚಾರಣೆಗೆ ಹಾಜರಾದ ಬಳಿಕ ಅಂದು ಪ್ರತಿಕ್ರಿಯೆ ನೀಡಿದ್ದ ಡಿಕೆ ಶಿವಕುಮಾರ್, ನಾನು ತೆರೆದ ಪುಸ್ತಕ, ನಾನು ಸಾಕಷ್ಟು ವಿಚಾರಣೆ ನೋಡಿದ್ದೇನೆ. ಜಾರಿ ನಿರ್ದೇಶನಾಲಯ(ಇಡಿ), ಸಿಬಿಐ ಕೊಡಬೇಕು ಎಂದು ಇದ್ದರೆ ಕೊಡಲಿ. ನಾನು ಯಾವುದಕ್ಕೂ ಭಯ ಪಡುವುದಿಲ್ಲ ಎಂದು ಹೇಳಿದ್ದರು.
Advertisement
ತನಿಖೆಗೆ ನಾನು ನನ್ನ ಕುಟುಂಬದವರು ಸಹಕಾರ ನೀಡಿದ್ದೇವೆ. ನ್ಯಾಯಯುತವಾಗಿ ತನಿಖೆ ನಡೆಯುವ ವಿಶ್ವಾಸವಿದೆ. ನಾವು ಸಂವಿಧಾನ ಒಪ್ಪಿದ್ದೇವೆ. ಕಾನೂನಿಗೆ ಗೌರವ ಕೊಡುತ್ತೇನೆ. ನಾನೊಬ್ಬ ಜವಾಬ್ದಾರಿಯುತ ವ್ಯಕ್ತಿಯಾಗಿದ್ದು ಯಾವುದನ್ನು ಮುಚ್ಚಿಡಲ್ಲ. ಅಧಿಕಾರಿಗಳ ಪ್ರಶ್ನೆಗೆ ಉತ್ತರ ನೀಡುವುದು ನಮ್ಮ ಕರ್ತವ್ಯ. ಐಟಿ ಅಧಿಕಾರಿಗಳಿಗೆ ನಾವು ಈ ಹಿಂದೆ ನೀಡಿದ ಮಾಹಿತಿ ಸಾಲದೇ ಇದ್ದಿದ್ದಕ್ಕೆ ಇಂದು ನಮ್ಮನ್ನು ವಿಚಾರಣೆಗೆ ಕರೆಸಿದ್ದಾರೆ ಎಂದು ತಿಳಿಸಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv