ಢಾಕಾ: ಸರ್ಕಾರಿ ಉದ್ಯೋಗ ಕೋಟಾಗಳ ವಿರುದ್ಧ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಇದನ್ನು ನಿಯಂತ್ರಿಸಲು ‘ಕಂಡಲ್ಲಿ ಗುಂಡು’ ಹಾರಿಸಲು ಬಾಂಗ್ಲಾದೇಶದಲ್ಲಿ (Bangladesh) ಆದೇಶ ಹೊರಡಿಸಲಾಗಿದೆ.
ಕನಿಷ್ಠ 133 ಜನರ ಸಾವಿಗೆ ಕಾರಣವಾದ ಹಿಂಸಾಚಾರ ಮತ್ತು ಘರ್ಷಣೆಯನ್ನು ಪ್ರಚೋದಿಸಿದ ನಾಗರಿಕ ಸೇವಾ ಉದ್ಯೋಗ ಕೋಟಾವನ್ನು ರದ್ದುಗೊಳಿಸಬೇಕೆ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾನುವಾರ ತೀರ್ಪು ನೀಡಲು ಸಿದ್ಧವಾಗಿದೆ. ಇದನ್ನೂ ಓದಿ: ಬಾಂಗ್ಲಾದಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ 115 ಮಂದಿ ಬಲಿ – 1,000ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ತವರಿಗೆ ವಾಪಸ್
ಸರ್ಕಾರಿ ಉದ್ಯೋಗ ಕೋಟಾಗಳ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆಯಿಂದಾಗಿ ರಾಷ್ಟ್ರದಲ್ಲಿ ಅತಿರೇಕದ ಹಿಂಸಾಚಾರ ಮುಂದುವರಿದಿದೆ. ಇದನ್ನು ನಿಯಂತ್ರಿಸಲು ಬಾಂಗ್ಲಾದೇಶ ಸರ್ಕಾರವು ತೀವ್ರ ಭದ್ರತಾ ಕ್ರಮಗಳನ್ನು ಜಾರಿಗೆ ತಂದಿದೆ. ಹಿಂಸಾಚಾರವನ್ನು ನಿಯಂತ್ರಿಸಲು ವಿಫಲವಾದ ನಂತರ, ಆಡಳಿತವು ರಾಷ್ಟ್ರವ್ಯಾಪಿ ಕರ್ಫ್ಯೂ ವಿಧಿಸಿತು. ಹಿಂಸಾಚಾರಪೀಡಿತ ಪ್ರದೇಶಗಳಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ಪಾಕಿಸ್ತಾನ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕುಟುಂಬಗಳಿಗೆ ಶೇ.30 ಸೇರಿ ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ನೀಡುವ ಸರ್ಕಾರದ ನಿರ್ಧಾರದ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿವೆ. ಇದನ್ನೂ ಓದಿ: ಮೀಸಲಾತಿ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ 105 ಮಂದಿ ಸಾವು – 300ಕ್ಕೂ ಹೆಚ್ಚು ಭಾರತೀಯರು ತವರಿಗೆ!
2018 ರಲ್ಲಿ ಶೇಖ್ ಹಸೀನಾ ಸರ್ಕಾರ ಈ ಕೋಟಾ ಪದ್ಧತಿಯನ್ನು ರದ್ದುಗೊಳಿಸಿತ್ತು. ಆದರೆ ಈಚೆಗೆ ಸುಪ್ರೀಂ ಕೋರ್ಟ್ ಅದನ್ನು ಮರುಸ್ಥಾಪಿಸಿತ್ತು. ಇದರ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು, ಹಿಂಸಾಚಾರಕ್ಕೆ ತಿರುಗಿದೆ.