ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಮನಿ ಡಬ್ಲಿಂಗ್ ದಂಧೆಯಲ್ಲಿ ತೊಡಗಿದ್ದವರ ಮೇಲೆ ಪೊಲೀಸರಿಂದ ಶೂಟೌಟ್ ನಡೆದಿದ್ದು, ಖಾಕಿ ಗುಂಡೇಟಿಗೆ ಓರ್ವ ಸಾವನ್ನಪ್ಪಿದ್ದಾನೆ.
ನಗರದ ಹೆಬ್ಬಾಳ್ ರಿಂಗ್ ರಸ್ತೆ ಬಳಿಯ ಅಪಾರ್ಟ್‌ಮೆಂಟ್ ಮೇಲೆ ಮೈಸೂರಿನ ವಿಜಯನಗರ ಪೊಲೀಸರು ಶೂಟೌಟ್ ನಡೆಸಿದ್ದಾರೆ. ಬಾಂಬೆ ಮೂಲದ ವ್ಯಕ್ತಿಗಳು ಮನಿ ಡಬ್ಲಿಂಗ್ ದಂಧೆಯಲ್ಲಿ ತೊಡಗಿದ್ದಾರೆ ಎಂಬ ಖಚಿತ ಮಾಹಿತಿ ಲಭ್ಯವಾಗಿತ್ತು. ಹೀಗಾಗಿ ಆರೋಪಿಗಳನ್ನು ಸೆರೆಹಿಡಿಯಲು ಪೊಲೀಸರು ಫೈರಿಂಗ್ ಮಾಡಿದ್ದಾರೆ. ಈ ವೇಳೆ ಫೈರಿಂಗ್‍ನಲ್ಲಿ ಓರ್ವ ದಂಧೆಕೋರ ಸಾವನ್ನಪ್ಪಿದ್ದು, ಇನ್ನಿತರರು ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾರೆ.
Advertisement
Advertisement
ಶೂಟೌಟ್ ಬಳಿಕ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳು ಗನ್ ಸಮೇತ ನಾಪತ್ತೆಯಾಗಿದ್ದಾರೆ. ಆರೋಪಿಗಳ ಸೆರೆಗೆ ಪೊಲೀಸರು ಬಲೆ ಬೀಸಿದ್ದು, ಚೆಕ್ ಪೋಸ್ಟ್ ಗಳಲ್ಲಿ ಅಲರ್ಟ್ ಆಗಿರುವಂತೆ ಸಿಬ್ಬಂದಿಗೆ ಪೊಲೀಸ್ ಇಲಾಖೆಯಿಂದ ಸಂದೇಶ ರವಾನಿಸಲಾಗಿದೆ.
Advertisement
ಸದ್ಯ ಸ್ಥಳಕ್ಕೆ ಮೈಸೂರು ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ, ಡಿಸಿಪಿ ಮುತ್ತುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೀಗ ಕೆ.ಆರ್.ಆಸ್ಪತ್ರೆಗೆ ಮೃತದೇಹವನ್ನು ಪೊಲೀಸರು ಕೊಂಡೊಯ್ದಿದ್ದು, ಆಸ್ಪತ್ರೆ ಸುತ್ತಲು ಪೊಲೀಸರ ಸರ್ಪಗಾವಲು ಹಾಕಲಾಗಿದೆ.