ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ನೇತೃತ್ವದಲ್ಲಿ ರ‍್ಯಾಲಿ ನಡೆಯುತ್ತಿದ್ದ ವೇಳೆ ಗುಂಡಿನ ದಾಳಿ (Shooting) ನಡೆದಿದ್ದು, ಇಮ್ರಾನ್ ಖಾನ್‌ಗೆ ಗಾಯಗಳಾಗಿರುವ ಘಟನೆ ವಜೀರಾಬಾದ್‌ನಲ್ಲಿ ಗುರುವಾರ ನಡೆದಿದೆ.
ಇಂದು ಜಫರಾಲಿ ಖಾನ್ ಚೌಕ್‌ನಲ್ಲಿ ಘಟನೆ ನಡೆದಿದ್ದು, ಇಮ್ರಾನ್ ಖಾನ್ ಅವರ ಕಾಲಿಗೆ ಗಾಯಗಳಾಗಿವೆ. ದುಷ್ಕರ್ಮಿ 3-4 ಬಾರಿ ಗುಂಡು ಹಾರಿಸಿದ್ದಾನೆ. ಘಟನೆಯಲ್ಲಿ ಇಮ್ರಾನ್ ಖಾನ್ ಅವರ ಸಹಾಯಕ ಸೇರಿದಂತೆ ನಾಲ್ವರು ಗಾಯಗೊಂಡಿರುವುದಾಗಿ ವರದಿಯಾಗಿದೆ.
ಇಮ್ರಾನ್ ಖಾನ್ ಅವರು ರ‍್ಯಾಲಿಯ ವೇಳೆ ತೆರೆದ ಕಂಟೇನರ್‌ನಲ್ಲಿ ಪ್ರಯಾಣಿಸುತ್ತಿದ್ದರು. ಗುಂಡಿನ ದಾಳಿ ನಡೆದ ಬಳಿಕ ಅವರನ್ನು ಬುಲೆಟ್ ಪ್ರೂಫ್ ವಾಹನಕ್ಕೆ ವರ್ಗಾಯಿಸಲಾಯಿತು. ಇಮ್ರಾನ್ ಖಾನ್ ಅವರ ಸಹಾಯಕ ಪಿಟಿಐ ಮುಖಂಡ ಫೈಸಲ್ ಜಾವೇದ್ ಕೂಡಾ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಘಟನೆಯ ಬಳಿಕ ಬಂದೂಕುಧಾರಿಯನ್ನು ಬಂಧಿಸಲಾಗಿದೆ. ಇಮ್ರಾನ್ ಖಾನ್‌ನ ಬೆಂಬಲಿಗರೊಬ್ಬರು ಆತನನ್ನು ದಾಳಿ ನಡೆಸದಂತೆ ತಡೆದಿದ್ದಾರೆ. ಆತ ಎಕೆ-47 ನಿಂದ ಗುಂಡು ಹಾರಿಸಿದ್ದು, ಇದು ಉದ್ದೇಶಿತ ದಾಳಿ ಎಂದು ಪಿಟಿಐ ಮುಖಂಡ ಫವಾದ್ ಚೌಧರಿ ಹೇಳಿದ್ದಾರೆ. ಇದನ್ನೂ ಓದಿ: ಆಫ್ರಿಕಾಗೆ ಸೋಲು – ಚಿಗುರಿಕೊಂಡ ಪಾಕಿಸ್ತಾನದ ಸೆಮಿಫೈನಲ್ ಕನಸು
ಇಮ್ರಾನ್ ಖಾನ್ ಅವರನ್ನು ಲಾಹೋರ್‌ಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗುವುದು ಎಂದು ಮಾಜಿ ಸಚಿವ ಅಸದ್ ಉಮರ್ ತಿಳಿಸಿದ್ದಾರೆ. ಇದನ್ನೂ ಓದಿ: 5 ದಿನಗಳ ಬಳಿಕ ರೇಣುಕಾಚಾರ್ಯ ಸಹೋದರನ ಪುತ್ರನ ಶವ ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ಪತ್ತೆ