ಡೆಡ್ಲಿ ಸೋಮ ಖ್ಯಾತಿಯ ಆದಿತ್ಯ (Aditya) ನಾಯಕರಾಗಿ ನಟಿಸಿರುವ ಹಾಗೂ ಕಿಶೋರ್ ಮೇಗಳಮನೆ (Kishor Megalamane) ನಿರ್ದೇಶನದ ಕಾಂಗರೂ (Kangaroo) ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಚಿಕ್ಕಮಗಳೂರು, ಹೊರನಾಡು ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಸದ್ಯ ಮಾತಿನ ಜೋಡಣೆ (ಡಬ್ಬಿಂಗ್) ನಡೆಯುತ್ತಿದೆ.
Advertisement
ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಆದಿತ್ಯ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ನಾಯಕಿಯಾಗಿ ರಂಜನಿ ರಾಘವನ್ ಅಭಿನಯಿಸಿದ್ದು, ಸೈಕಿಯಾಟ್ರಿಸ್ಟ್ ಡಾಕ್ಟರ್ ಪಾತ್ರ ನಿರ್ವಹಿಸಿದ್ದಾರೆ. ಶಿವಮಣಿ, ಕರಿಸುಬ್ಬು, ನಾಗೇಂದ್ರ ಅರಸ್ ಮುಂತಾದವರು ತಾರಾಬಳಗದಲ್ಲಿದ್ದಾರೆ.
Advertisement
Advertisement
ಸಸ್ಪೆನ್ಸ್ ಥ್ರಿಲ್ಲರ್ ಚಿತ್ರಗಳು ಸಾಕಷ್ಟು ಬಂದಿದೆ. ಆದರೆ ನಮ್ಮ ಚಿತ್ರ ಸ್ವಲ್ಪ ವಿಭಿನ್ನ. ವಿಶೇಷವಾಗಿ ಫ್ಯಾಮಿಲಿ ಆಡಿಯನ್ಸ್ ಗಾಗಿ ಮಾಡಿರುವ ಕಥೆವಿದು. ಇನ್ನು ಕಾಂಗರೂ ಶೀರ್ಷಿಕೆ ಕುರಿತು ಹೇಳುವುದಾದರೆ, ಕಾಂಗರೂ ಒಂದು ಮುಗ್ಧ ಪ್ರಾಣಿ. ಅದು ಯಾರಿಗೂ ಏನು ಮಾಡುವುದಿಲ್ಲ. ಮತ್ತು ಈ ಕಾಂಗರೂ ತನ್ನ ಮರಿಗೆ ಜನ್ಮ ನೀಡಿದ ನಂತರ ಅದರ ಹೊಟ್ಟೆಯ ಮೇಲ್ಬಾಗದಲ್ಲಿ ಇರುವ ಚೀಲದಲ್ಲಿ ಆ ಮರಿಯನ್ನು ಇಟ್ಟು ಕಾಪಾಡುತ್ತದೆ, ಅಂತ ಸಮಯದಲ್ಲಿ ತನ್ನ ಮರಿಯ ತಂಟೆಗೆ ಯಾರಾದರೂ ಹೋದರೆ ಅದು ಯಾರನ್ನು ಬಿಡುವುದಿಲ್ಲ. ಈ ಪ್ರಾಣಿಯ ನಡವಳಿಕೆಯನ್ನು ಹೋಲುವ ಕಥೆಯಾಗಿರುತ್ತದೆ ಎಂದು ನಿರ್ದೇಶಕರು ಚಿತ್ರದ ಬಗ್ಗೆ ಮಾಹಿತಿ ನೀಡಿದ್ದಾರೆ.
Advertisement
ಆರೋಹ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚನ್ನಕೇಶವ ಬಿ.ಸಿ, ನರಸಿಂಹಮೂರ್ತಿ ಚಕ್ರಭಾವಿ, ರಮೇಶ್ ಬಂಡೆ, ಸ್ವಾಮಿ ಚಕ್ರಭಾವಿ, ರವಿ ಕೀಲರ ಮಂಡ್ಯ ಹಾಗೂ ಕೆ ಜಿ ರಾಮಚಂದ್ರಯ್ಯ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಿರ್ದೇಶಕ ಕಿಶೋರ್ ಮೇಗಳಮನೆ ಅವರೆ ಬರದಿದ್ದಾರೆ, ಉದಯ್ ಲೀಲ ಛಾಯಾಗ್ರಹಣ ಹಾಗೂ ಅರ್ಜುನ್ ಕಿಟ್ಟು ಸಂಕಲನ ಈ ಚಿತ್ರಕ್ಕಿದೆ.