ಪ್ರತಿಷ್ಠಿತ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ (Shivaraj Kumar) ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ‘ಘೋಸ್ಟ್’ (Ghost) ಚಿತ್ರದ ಚಿತ್ರೀಕರಣ (Shooting) ಮುಕ್ತಾಯವಾಗಿದೆ.
ಇತ್ತೀಚೆಗೆ ಈ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಮುಕ್ತಾಯವಾಗಿದ್ದು (Complete), ಕುಂಬಳಕಾಯಿ ಒಡೆಯಲಾಗಿದೆ. ಚಿತ್ರದ ಇನ್ನೊಂದು ವಿಶೇಷವೆಂದರೆ ನಿರ್ದೇಶಕ ಶ್ರೀನಿ ಬೀರ್ ಬಲ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ಕೂಡ ಶ್ರೀನಿ (Srini) ಬೀರ್ ಬಲ್ ಚಿತ್ರದಲ್ಲಿ ಅಭಿನಯಿಸಿದ್ದರು. ಈಗ ಈ ಚಿತ್ರದಲ್ಲಿ ಬೀರ್ ಬಲ್ ಪಾತ್ರದಲ್ಲಿ ಅಭಿನಯಿಸಿರುವುದು, ಬೀರ್ ಬಲ್ ಭಾಗ 2 ಬರಬಹುದಾ ಎಂಬ ಪ್ರಶ್ನೆ ಮೂಡಿದೆ. ಇದನ್ನೂ ಓದಿ:ಪವನ್ ಕಲ್ಯಾಣ್ ಅಭಿಮಾನಿಗಳಿಗೆ ಇದು ನಿಜಕ್ಕೂ ಸಂತಸದ ಸುದ್ದಿ
ಈಗಾಗಲೇ ಘೋಸ್ಟ್ ಫಸ್ಟ್ ಲುಕ್, BIG DADDY ಟೀಸರ್ ಅಭಿಮಾನಿಗಳ ಮನ ಗೆದ್ದಿದೆ. ಚಿತ್ರವನ್ನು ತೆರೆಯ ಮೇಲೆ ನೋಡುವ ಕಾತುರ ಅಭಿಮಾನಿಗಳಲ್ಲಿ ಹೆಚ್ಚಿದೆ. ಅಲ್ಲದೇ ನಿರ್ದೇಶಕ ಶ್ರೀನಿ ಅವರ ಬಗೆ ಬಗೆಯ ಪ್ರಯತ್ನಗಳನ್ನು ಸ್ವತಃ ಶಿವರಾಜ್ ಕುಮಾರ್ ಅವರೇ ಕೊಂಡಾಡಿದ್ದಾರೆ. ಹೀಗಾಗಿ ಸಿನಿಮಾ ನಿರೀಕ್ಷೆ ಮೂಡಿಸಿದೆ.
ನಾಯಕನಾಗಿ ಶಿವರಾಜಕುಮಾರ್ ನಟಿಸಿದ್ದರೆ, ಅನುಪಮ್ ಖೇರ್ (Anupam Kher), ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್, ಶ್ರೀನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಮತ್ತಷ್ಟು ಮಾಹಿತಿಗಳನ್ನು ಶೀಘ್ರದಲ್ಲೇ ಚಿತ್ರತಂಡ ಹಂಚಿಕೊಳ್ಳಲಿದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]