ಡಾಲಿ ಧನಂಜಯ್ (Dolly Dhananjay), ಶಿವರಾಜ್ ಕುಮಾರ್ (Shivaraj Kumar) ಕಾಂಬಿನೇಷನ್ ನ ಉತ್ತರ ಕಾಂಡ ಸಿನಿಮಾದ ಶೂಟಿಂಗ್ (Shooting) ಏಪ್ರಿಲ್ 15ರಿಂದ ಉತ್ತರ ಕರ್ನಾಟಕ ವಿವಿಧ ಸ್ಥಳಗಳಲ್ಲಿ ನಡೆಯಲಿದೆ. ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡುವ ದೃಷ್ಟಿಯಿಂದ ಉತ್ತರ ಕರ್ನಾಟಕದಲ್ಲೇ ಆಡಿಷನ್ ಮಾಡಿ ಕೆಲವು ಕಲಾವಿದರನ್ನು ಆಯ್ಕೆ ಮಾಡಿಕೊಂಡಿದೆ ಚಿತ್ರತಂಡ.
ಒಂದು ಕಡೆ ಶೂಟಿಂಗ್ ಖುಷಿ ವಿಚಾರವಾದರೆ, ಮತ್ತೊಂದು ಕಡೆ ಹೆಸರಾಂತ ನಟಿಯೇ ಈ ಚಿತ್ರಕ್ಕೆ ಕೈ ಕೊಟ್ಟಿದ್ದಾರೆ. ಸ್ಯಾಂಡಲ್‌ವುಡ್ ನಟಿ ರಮ್ಯಾ (Ramya) ಮತ್ತೆ ಬೆಳ್ಳಿಪರದೆಗೆ ಕಮ್‌ಬ್ಯಾಕ್ ಆಗುತ್ತಿದ್ದಾರೆ ಎಂಬ ಸುದ್ದಿ ಕೇಳಿಯೇ ಫ್ಯಾನ್ಸ್ ಖುಷಿಪಟ್ಟಿದ್ದರು. ಇದೀಗ ಅಭಿಮಾನಿಗಳಿಗೆ ರಮ್ಯಾ ನಿರಾಸೆ ಮೂಡಿಸಿದ್ದಾರೆ. ಬಹುನಿರೀಕ್ಷಿತ ‘ಉತ್ತರಕಾಂಡ’ ಚಿತ್ರಕ್ಕೆ ನಟಿ ಕೈಕೊಟ್ಟಿದ್ದಾರೆ.
ಡೇಟ್ಸ್ ಹೊಂದಾಣಿಕೆ ಆಗದ ಕಾರಣ, ನಾನು ಉತ್ತರಕಾಂಡ (Uttarakanda Film) ಸಿನಿಮಾದಲ್ಲಿ ನಟಿಸುತ್ತಿಲ್ಲ. ನನ್ನ ಸಿನಿಮಾ ಮತ್ತು ರಾಜಕೀಯ ಕೆಲಸಗಳನ್ನು ಸದ್ಯ ಕಾಯ್ದಿರಿಸಿದ್ದೇನೆ. ಆದರೆ ಚಿತ್ರತಂಡಕ್ಕೆ ಶುಭವಾಗಲಿ ಎಂದು ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ.
ಡಾಲಿ ಧನಂಜಯ್‌ಗೆ ನಾಯಕಿಯಾಗಿ ರಮ್ಯಾ ಕಾಣಿಸಿಕೊಳ್ಳುವುದಾಗಿ ಕಳೆದ ವರ್ಷ ಘೋಷಣೆಯಾಗಿತ್ತು. ಅದ್ಧೂರಿಯಾಗಿ ಮುಹೂರ್ತ ಕೂಡ ನೆರವೇರಿತ್ತು. ಚಿತ್ರದಲ್ಲಿ ಶಿವಣ್ಣ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಆದರೆ ಈಗ ರಮ್ಯಾ ಚಿತ್ರದಿಂದ ಹೊರನಡೆದಿದ್ದಾರೆ.