ಉತ್ತರ ಕರ್ನಾಟಕದಲ್ಲಿ (North Karnataka) ಶೂಟಿಂಗ್ ಶುರು ಮಾಡಿ, ಹಲವು ದಿನಗಳ ಕಾಲ ಅಲ್ಲಿಯೇ ಬೀಡು ಬಿಟ್ಟಿದ್ದ ಉತ್ತರಕಾಂಡ ಸಿನಿಮಾ ಟೀಮ್ ವಾಪಸ್ಸು ಬೆಂಗಳೂರಿಗೆ ಬಂದಿದೆ. ಚುನಾವಣೆ ಕಾರಣದಿಂದಾಗಿ ಉತ್ತರ ಕರ್ನಾಟಕ ಚಿತ್ರೀಕರಣಕ್ಕೆ ಬ್ರೇಕ್ ಕೊಟ್ಟಿರುವ ನಿರ್ಮಾಪಕರು, ಈಗ ಬೆಂಗಳೂರಿನಲ್ಲಿ (Bangalore) ಶೂಟಿಂಗ್ ಶುರು ಮಾಡಿದ್ದಾರೆ. ಎಚ್.ಎಂ.ಟಿ ಫ್ಯಾಕ್ಟರಿ ಆವರಣದಲ್ಲಿ ಶೂಟಿಂಗ್ ನಡೆಯುತ್ತಿದೆ.
ಈ ನಡುವೆ ಸಿನಿಮಾ ಟೀಮ್ ಕರ್ನಾಟಕ ಕಿಂಗ್ ಯಾರಲೇ? ಎಂದು ಪ್ರಶ್ನೆಯನ್ನು ಮಾಡಿದೆ. ಈ ಪೋಸ್ಟರ್ ಕುತೂಹಲಕ್ಕೂ ಕಾರಣವಾಗಿದೆ. ಈ ಸಿನಿಮಾದಲ್ಲಿ ಶಿವರಾಜ್ ಕುಮಾರ್ ನಟಿಸಲಿದ್ದಾರೆ ಎನ್ನುವ ಸುದ್ದಿಯೇನೂ ಗುಟ್ಟಾಗಿ ಉಳಿದಿಲ್ಲ. ಶಿವಣ್ಣನನ್ನು (Shivaraj Kumar) ಅಭಿಮಾನಿಗಳು ಕಿಂಗ್ (King) ಅಂತಾನೇ ಕರೆಯುತ್ತಾರೆ. ಶಿವಣ್ಣನ ಪೋಸ್ಟರ್ ರಿಲೀಸ್ ಮಾಡುವುದಕ್ಕಾಗಿ ಈ ಪೋಸ್ಟರ್ ರಿಲೀಸ್ ಮಾಡಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ.
ಡಾಲಿ (Daali Dhananjay) ನಟನೆಯ ‘ಉತ್ತರಕಾಂಡ’ (Uttarakanda Film) ಸಿನಿಮಾ ತಂಡಕ್ಕೆ ಕಲಾವಿದರ ದಂಡೇ ಸೇರ್ಪಡೆಯಾಗುತ್ತಿದೆ. ಡಾಲಿಗೆ ಜೋಡಿಯಾಗೋ ಆ ನಾಯಕಿ ಯಾರು? ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಡಾಲಿಗೆ ಜೋಡಿಯಾಗಿ ಐಶ್ವರ್ಯಾ ರಾಜೇಶ್ (Aishwarya Rajesh) ಎಂಟ್ರಿ ಕೊಟ್ಟಿದ್ದಾರೆ.
ಚೈತ್ರಾ ಆಚಾರ್, ದಿಗಂತ್ ಪಾತ್ರದ ಬಗ್ಗೆ ರಿವೀಲ್ ಆದ ಬೆನ್ನಲ್ಲೇ ಐಶ್ವರ್ಯಾ ರಾಜೇಶ್ ಕೂಡ ಸಿನಿಮಾ ತಂಡ ಸೇರಿಕೊಂಡಿದ್ದಾರೆ. ಮುಖ್ಯ ಪಾತ್ರದಲ್ಲಿ ಡಾಲಿ ಜೊತೆ ಕಾಣಿಸಿಕೊಳ್ಳಲಿದ್ದಾರೆ. ಈ ಮೂಲಕ ನಟಿ ಸ್ಯಾಂಡಲ್‌ವುಡ್‌ಗೆ ಲಗ್ಗೆ ಇಟ್ಟಿದ್ದಾರೆ. ಬಾಲನಟಿ, ನಾಯಕಿಯಾಗಿ ತೆಲುಗು, ತಮಿಳಿನಲ್ಲಿ ಗುರುತಿಸಿಕೊಂಡಿರುವ ಐಶ್ವರ್ಯಾಗೆ ‘ಉತ್ತರಕಾಂಡ’ ಚಿತ್ರದಲ್ಲಿ ಮುಖ್ಯ ಪಾತ್ರವೇ ಸಿಕ್ಕಿದೆ.
ಕನ್ನಡ ಸಿನಿಮಾ ರಂಗದ ಹಿರಿಯ ನಟಿ, ಉಮಾಶ್ರೀ (Umashree) ಉತ್ತರಕಾಂಡ ಟೀಮ್ ಸೇರಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಅವರು ಪಂಢರಿಬಾಯಿ (Pandharibai) ಪಾತ್ರವನ್ನು ನಿರ್ವಹಿಸಲಿದ್ದಾರೆ. ಉಮಾಶ್ರೀಯ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಈ ಸಿನಿಮಾದಲ್ಲಿ ಸಾಕಷ್ಟು ಅನುಭವಿ ಕಲಾವಿದರು ನಟಿಸುತ್ತಿರುವುದು ವಿಶೇಷ.