ಶೂಟಿಂಗ್ ದೃಶ್ಯ, ಫೋಟೋ ಸೋರಿಕೆ: ಮೈಸೂರಿನಲ್ಲಿ ಶೂಟಿಂಗ್ ಆರಂಭಿಸಿದ ಶಂಕರ್

Public TV
1 Min Read
ram charan

ಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಗೇಮ್ ಚೇಂಜರ್ ಸಿನಿಮಾದ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದೆ. ನಿರ್ದೇಶಕ ಶಂಕರ್ ತಮ್ಮ ಸಿನಿಮಾ ಟೀಮ್ ಅನ್ನು ಮೈಸೂರಿಗೆ ಕರೆದುಕೊಂಡು ಬರಲು ಕಾರಣ, ಚಿತ್ರದ ಶೂಟಿಂಗ್ ದೃಶ್ಯಗಳು ಮತ್ತು ಫೋಟೋಗಳು ಸೋರಿಕೆ ಆಗುತ್ತಿರುವುದು. ಹಾಗಾಗಿ, ಸೇಫ್ ಅನಿಸುವಂತಹ ಜಾಗವನ್ನು ಅವರು ಹುಡುಕಿಕೊಂಡು ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.

ram charan

ನಿನ್ನೆಯಷ್ಟೇ ನಟ  ರಾಮ್ ಚರಣ್ (Ram Charan)  ಮೈಸೂರಿಗೆ ಬಂದಿಳಿದಿದ್ದಾರೆ. ಗೇಮ್ ಚೇಂಜರ್ ಸಿನಿಮಾದ ಶೂಟಿಂಗ್ ಗಾಗಿ ಅವರು ಹೈದರಾಬಾದ್ ನಿಂದ ಮೈಸೂರಿಗೆ ಖಾಸಗಿ ಜೆಟ್ ನಲ್ಲಿ ಆಗಮಿಸಿದ್ದಾರೆ. ಬೆಳಗ್ಗೆ ಮೈಸೂರು (Mysore) ವಿಮಾನ ನಿಲ್ದಾಣದಲ್ಲಿ ಬಂದಿಳಿದ ನಟನಿಗೆ ಸ್ವಾಗತ ಕೋರಲಾಗಿದೆ. ಮೈಸೂರಿನಲ್ಲಿ ಅವರ ನಟನೆಯ ಸಿನಿಮಾ ಶೂಟ್ ಆಗುತ್ತಿದೆ.

ram charan 1

ಒಂದು ಕಡೆ ಸಿನಿಮಾದ ಭರ್ಜರಿ ಚಿತ್ರೀಕರಣ ನಡೆಯುತ್ತಿದ್ದರೆ, ಮತ್ತೊಂದು ಕಡೆ ಸೋರಿಕೆಯ ಸಮಸ್ಯೆಯನ್ನು ಟೀಮ್ ಎದುರಿಸುತ್ತಿದೆ. ಸಿನಿಮಾದ ಯಾವುದೇ ವಿಷಯ ಸೋರಿಕೆ ಆಗದಂತೆ ಎಚ್ಚರಿಕೆ ತೆಗೆದುಕೊಂಡಿದ್ದರೂ, ಮೊನ್ನೆಯಷ್ಟೇ ಹಾಡಿಗೇ ಹಾಡೇ ಸೋರಿಕೆ (Song Leak) ಆಗಿ ಆತಂಕ ಮೂಡಿಸಿತ್ತು. ಈ ಕುರಿತಂತೆ ನಿರ್ಮಾಪಕರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈಗಾಗಲೇ ಒಬ್ಬರನ್ನು ಅರೆಸ್ಟ್ ಕೂಡ ಮಾಡಿದ್ದಾರೆ.

Ram Charan

ಡೈರೆಕ್ಟರ್ ಶಂಕರ್ (Shankar) ನಿರ್ದೇಶನದ ‘ಗೇಮ್ ಚೇಂಜರ್’ನಲ್ಲಿ(Game Changer) ಕಿಯಾರಾ ಅಡ್ವಾಣಿ- ರಾಮ್ ಚರಣ್ ಜೋಡಿಯಾಗಿ ನಟಿಸಿದ್ದಾರೆ. ಈ ಸಿನಿಮಾಗೆ ಸೋರಿಕೆ ಕಾಟ ಶುರುವಾಗಿದೆ. ಸಾಕಷ್ಟು ಎಚ್ಚರಿಕೆ ವಹಿಸಿದ ಹೊರತಾಗಿಯೂ ಸಿನಿಮಾ ಸೆಟ್‌ನ ಫೋಟೋ ಲೀಕ್ ಆಗಿತ್ತು. ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆ ಹಚ್ಚುವ ಕಾರ್ಯ ನಡೆದಿತ್ತು. ಆದರೆ, ಕಿಡಿಗೇಡಿಗಳು ಪತ್ತೆ ಆಗಿರಲಿಲ್ಲ.

 

ಸಮುದ್ರ ತೀರದಲ್ಲಿ ರಾಮ್ ಚರಣ್- ಕಿಯಾರಾ(Kiara Advani) ನಟಿಸುತ್ತಿರುವ ದೃಶ್ಯ ಲೀಕ್ ಆಗಿದೆ. ಇಬ್ಬರೂ ಕಪ್ಪು ಬಣ್ಣದ ಉಡುಗೆಯಲ್ಲಿ ಕಾಣಿಸಿಕೊಂಡಿದ್ದರು. ಈ ಹಿಂದೆ ‘ವಿನಯಾ ವಿಧೇಯ ರಾಮ’ ಸಿನಿಮಾದಲ್ಲಿ ಚರಣ್-ಕಿಯಾರಾ ಜೋಡಿಯಾಗಿ ನಟಿಸಿದ್ದರು. ಇದೀಗ ಗೇಮ್ ಚೇಂಜರ್‌ಗಾಗಿ ಮತ್ತೆ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಮುಂದಿನ ವರ್ಷ ಹೊಸತರಲ್ಲಿ ಚಿತ್ರ ತೆರೆಗೆ ಬರಲಿದೆ.

Share This Article