ಬೆಂಗಳೂರು: ಕುಖ್ಯಾತ ರೌಡಿಶೀಟರ್ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ನಗರದ ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಬ್ರೇಜ್ ಗುಂಡೇಟು ತಿಂದ ರೌಡಿಶೀಟರ್. ಈತನ ವಿರುದ್ಧ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ ಸೇರಿದಂತೆ ಹಲವಾರು ಪ್ರಕರಣಗಳು ದಾಖಲಾಗಿವೆ. ಅಲ್ಲದೇ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈತನ ಉಪಟಳ ಮಿತಿ ಮೀರಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Advertisement
Advertisement
ನ್ಯಾಯಾಲಯದ ವಾರೆಂಟ್ ಇದ್ದರು ಕೂಡ ಪೊಲೀಸರ ಕೈಗೆ ಸಿಕ್ಕದೆ ತಲೆ ಮರೆಸಿಕೊಂಡು ಓಡಾಡುತ್ತಿದ್ದ ತಬ್ರೇಜ್ ಬಂಧನಕ್ಕೆ ಪೊಲೀಸರು ಬಲೆ ಪ್ರಯತ್ನಿಸಿದ್ದರು. ಆದರೆ ಭಾನುರಾತ್ರಿ ಪೊಲೀಸರ ಕೈಗೆ ಸಿಗದೆ ಎಸ್ಕೇಪ್ ಆಗಿದ್ದ. ಬಳಿಕ ಇಂದು ಬೆಳಗ್ಗೆ ತಬ್ರೇಜ್ ಬಗ್ಗೆ ಖಚಿತ ಮಾಹಿತಿ ಪಡೆದ ಎಸ್‍ಐ ಪ್ರದೀಪ್ ಅವರು ಬಂಧಿಸಲು ಹೋದ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಇನ್ಸ್ ಪೆಕ್ಟರ್ ಎಡ್ವಿನ್ ಪ್ರದೀಪ್ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
Advertisement
ಪೊಲೀಸ್ ಗುಂಡು ಹಾರಿಸಿದ ಪರಿಣಾಮ ತಬ್ರೇಜ್ ಬಲಗೈ ಮತ್ತು ಬಲಗಾಲಿಗೆ ಗುಂಡು ತಾಕಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಆರೋಪಿ ಕಾಲಿಗೆ ಗುಂಡು ಹಾರಿಸುವ ಮುನ್ನ ಶರಣಾಗುವಂತೆ ಎಚ್ಚರಿಕೆ ನೀಡಿ ಗಾಳಿಯಲ್ಲಿ ಗುಂಡು ಹಾರಿಸಲಾಗಿದ್ದು, ಪೊಲೀಸರ ಎಚ್ಚರಿಕೆಗೆ ಬಗ್ಗದ ಕಾರಣ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv