– ಕೆಲಕಾಲ ಕನ್ನಡಾಂಬೆ ಮೆರವಣಿಗೆ ಸ್ಥಗಿತ
ರಾಯಚೂರು: ಪಟಾಕಿ (Fire Crackers) ಕಿಡಿ ತಗುಲಿ ಅಂಗಡಿಗೆ (Shop) ಬೆಂಕಿ ಹೊತ್ತಿಕೊಂಡ ಪರಿಣಾಮ ಅಂಗಡಿಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮವಾದ ಘಟನೆ ರಾಯಚೂರು (Raichur) ನಗರದ ಸದರಬಜಾರ್ ಪೊಲೀಸ್ ಠಾಣೆ (Sadar Bazar Police Station) ಎದುರು ನಡೆದಿದೆ.
Advertisement
ರಾಯಚೂರು ನಗರದ ಎಂ.ಜಿ ರೋಡ್ ಬಳಿ ಇರುವ ಬಟ್ಟೆ ತಯಾರಿಸುವ ಉಲ್ಲನ್ ದಾರದ ಅಂಗಡಿಗೆ ಪಟಾಕಿ ಕಿಡಿ ತಗುಲಿ ಬೆಂಕಿ ಬಿದ್ದಿದೆ. ಬೆಂಕಿ ನಂದಿಸಲು ಸ್ಥಳೀಯರು ಹರಸಾಹಸಪಟ್ಟಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು| ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರ ಮೇಲೆ ಪೆಪ್ಪರ್ ಸ್ಪ್ರೇ
Advertisement
Advertisement
ಘಟನೆ ನಡೆದ ವೇಳೆ ಅದೇ ಮಾರ್ಗವಾಗಿ ತಾಯಿ ಭುವನೇಶ್ವರಿ ಮೆರವಣಿಗೆ ಸಾಗುತ್ತಿತ್ತು. ಬೆಂಕಿ ಅವಘಡ ಹಿನ್ನೆಲೆ ಕನ್ನಡಾಂಬೆ ಮೆರವಣಿಗೆಗೆ ಅಡ್ಡಿಯುಂಟಾಗಿದೆ. ಬೆಂಕಿ ಹೊತ್ತಿ ಉರಿದಿದ್ದರಿಂದ ಕೆಲ ಕಾಲ ಕನ್ನಡಾಂಬೆ ಮೆರವಣಿಗೆ ಸ್ಥಗಿತಗೊಂಡಿದೆ. ಇದನ್ನೂ ಓದಿ: ಅಮೆರಿಕಾ ಚುನಾವಣೆಯಲ್ಲೂ ಹಿಂದೂ ಅಸ್ತ್ರ ಪ್ರಯೋಗ – ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದಾಳಿ ಖಂಡಿಸಿದ ಟ್ರಂಪ್
Advertisement