ಮೈಸೂರು: ಮಹದಾಯಿಗಾಗಿ ಕನ್ನಡ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದರೆ ಮೈಸೂರಿನ ಕನ್ನಡ ಸಂಘಟನೆಗಳು ಬಂದ್ ವಿರೋಧಿಸಿವೆ.
ಮೈಸೂರಿನಲ್ಲಿ ಬಂದ್‍ಗೆ ಬೆಂಬಲ ನೀಡದೇ ಅಂಗಡಿಯನ್ನು ತೆರೆದು ವ್ಯಾಪಾರ ಮಾಡುತ್ತಿರುವ ಅಂಗಡಿ ಮಾಲೀಕರಿಗೆ ಸಂಘಟನೆಯ ಕಾರ್ಯಕರ್ತರು ಹೂವಿನ ಹಾರ ಹಾಕಿ ಸನ್ಮಾನ ಮಾಡಿ ಅಭಿನಂದಿಸಿದ್ದಾರೆ.
ತರಕಾರಿ ವ್ಯಾಪಾರಿಗಳು, ಸಣ್ಣ ಹೊಟೇಲ್ ಹಾಗೂ ಅಂಗಡಿಗಳ ಬಾಗಿಲು ತೆರೆದು ವ್ಯಾಪಾರ ನಡೆಸುತ್ತಿರುವ ವ್ಯಾಪಾರಿಗಳಿಗೆ ಸನ್ಮಾನ ಮಾಡಿದ್ದಾರೆ. ಕಾರ್ಯಕರ್ತರು ರಾಜಕೀಯ ಪ್ರೇರಿತ ಬಂದ್ ನಮಗೆ ಬೇಡ ಎಂದು ಘೋಷಣೆ ಕೂಗಿ ಮೆರವಣಿಗೆ ನಡೆಸಿ ಆಕ್ರೋಶ ಪಡಿಸುತ್ತಿದ್ದಾರೆ.