ಮಡಿಕೇರಿ: ಲೈಸೆನ್ಸ್ (License) ರಿನ್ಯೂವಲ್ ಮಾಡಿಲ್ಲ ಎಂದು ಚಿಪ್ಸ್ ಅಂಗಡಿ ಮಾಲೀಕನಿಗೆ ಜನಪ್ರತಿನಿಧಿಯೋರ್ವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿರುವ ಘಟನೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ ನಗರದ ಗೌರಿಕೆರೆ ವಾರ್ಡಿನಲ್ಲಿ ನಡೆದಿದೆ.
ಚಿಪ್ಸ್ ಅಂಗಡಿ ಹಾಗೂ ಬೇಕರಿ ವ್ಯಾಪಾರಿ ನಡೆಸುತ್ತಿದ್ದ ಅಂಗಡಿ ಮಾಲೀಕ ಕಾರ್ತಿಕ್ ಮೇಲೆ ವಿರಾಜಪೇಟೆ ಪುರಸಭೆ ಕಾಂಗ್ರೆಸ್‍ನ ಸದಸ್ಯ ಪೃಥ್ವಿನಾಥ್ ಅವಾಚ್ಯ ಶಬ್ದಗಳಿಂದ ನಿಂದಿಸಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ವಿರಾಜಪೇಟೆ ಪುರಸಭೆ ಹೊರಗುತ್ತಿಗೆ ನೌಕರ ಸಣ್ಣು ಎಂಬಾತನು ಅಂಗಡಿ ಮಾಲೀಕನ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ (CC Camera) ಸೆರೆಯಾಗಿದೆ.
ಬೇಕರಿ ಮಾಲೀಕ ಒಂದು ವರ್ಷದಿಂದ ವ್ಯಾಪಾರ ಲೈಸೆನ್ಸ್ ಪಡೆದಿಲ್ಲವೆಂದು ಹಲ್ಲೆ ನಡೆಸಲಾಗಿದೆ. ಹಲ್ಲೆಗೊಳಗಾದ ಅಂಗಡಿ ಮಾಲೀಕ ಕಾರ್ತಿಕ್‍ನಿಂದ ವಿರಾಜಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಲ್ಲದೇ ಜನಪ್ರತಿನಿಧಿ ಮಾಡಿರುವ ಹಲ್ಲೆಯನ್ನು ಸಾರ್ವಜನಿಕರು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಶಾರೀಕ್ ಬಳಿಯಿದ್ದ ಕುಕ್ಕರ್ ಬಾಂಬ್‌ಗೆ ಬಸ್ಸನ್ನೇ ಸ್ಫೋಟಿಸುವ ಸಾಮರ್ಥ್ಯ ಇತ್ತು
ಅಷ್ಟೇ ಅಲ್ಲದೆ ವಿರಾಜಪೇಟೆ ಪಟ್ಟಣ ಪಂಚಾಯತಿ ಮುಂಭಾಗ ಸಾರ್ವಜನಿಕರು ಹಾಗೂ ಇತರೆ ವ್ಯಾಪಾರಸ್ಥರು ಪ್ರತಿಭಟನೆ ನಡೆಸಿ ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿರಾಜಪೇಟೆ ಮುಖ್ಯಕಾರ್ಯನಿರ್ವಣಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ದಿಢೀರ್ ಕಾಂಗ್ರೆಸ್‌ಗೆ ಗುಡ್‌ಬೈ – 300ಕ್ಕೂ ಹೆಚ್ಚು ಕಾರ್ಯಕರ್ತರು BJP ಸೇರ್ಪಡೆ