ವಾಷಿಂಗ್ಟನ್: ಅಮೆರಿಕಾದ ಟೆಕ್ಸಾಸ್ ಪ್ರಾಂತ್ಯದ ಶಾಪಿಂಗ್ ಮಾಲ್ ನಲ್ಲಿ ಶೂಟೌಟ್ ನಡೆದಿದ್ದು, ಘಟನೆಯಲ್ಲಿ 20 ಜನರು ಸಾವನ್ನಪ್ಪಿದ್ದು, 26 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು 21 ವರ್ಷದ ಯುವಕನೋರ್ವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಥಳೀಯ ಮಾಧ್ಯಮವೊಂದು ಶಾಪಿಂಗ್ ಮಾಲ್ ನಲ್ಲಿದ್ದ 18 ಜನರಿಗೆ ಗುಂಡು ತಗುಲಿದೆ ಎಂದು ವರದಿ ಬಿತ್ತರಿಸಿದೆ. ಆದ್ರೆ ಎಷ್ಟು ಜನ ಸಾವನ್ನಪ್ಪಿದ್ದಾರೆ ಎಂಬುದರ ಕುರಿತ ಮಾಹಿತಿಯನ್ನು ನೀಡಿಲ್ಲ.
Advertisement
Advertisement
ಈ ಸಂಬಂಧ ಪ್ರತಿಕ್ರಿಯಿಸಿರುವ ಟೆಕ್ಸಾಸ್ ಗರ್ವನರ್, ಟೆಕ್ಸಾಸ್ ಇತಿಹಾಸದಲ್ಲಿ ಇದೊಂದು ಕರಾಳ ದಿನವಾಗಿದ್ದು, ಬಹುದೊಡ್ಡ ಭಯಾನಕ ಘಟನೆ ಇದಾಗಿದೆ. ಅಮೆರಿಕದ ಇತಿಹಾಸದಲ್ಲಿ ಈ ತರಹದ 8ನೇ ಶೂಟೌಟ್ ಇದಾಗಿದೆ. 1984ರಲ್ಲಿ ಸ್ಯಾನ್ ವೈಸಿಡ್ರೋನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 21 ಜನರು ಸಾವನ್ನಪ್ಪಿದ್ದರು ಎಂದು ಹೇಳಿದ್ದಾರೆ.
Advertisement
Terrible shootings in ElPaso, Texas. Reports are very bad, many killed. Working with State and Local authorities, and Law Enforcement. Spoke to Governor to pledge total support of Federal Government. God be with you all!
— Donald J. Trump (@realDonaldTrump) August 3, 2019
Advertisement
ಟೆಕ್ಸಾಸ್ ನಲ್ಲಿ ನಡೆದ ಘಟನೆ ನೋವುಂಟು ಮಾಡಿದೆ. ಗುಂಡಿನ ದಾಳಿಯಲ್ಲಿ ಹಲವರು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕಾನೂನಿನ ಚೌಕಟ್ಟಿನಲ್ಲಿ ಅಧಿಕಾರಿಗಳು ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ. ಘಟನೆಯ ಕುರಿತು ಟೆಕ್ಸಾಟ್ ಗವರ್ನರ್ ಜೊತೆ ಮಾತನಾಡಿದ್ದೇನೆ. ಫೆಡರಲ್ ಸರ್ಕಾರ ನಿಮ್ಮ ಸಹಾಯ ಮಾಡಲಿದ್ದು, ದೇವರು ನಿಮ್ಮೊಂದಿಗಿದ್ದಾನೆ ಎಂದು ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.