ಧಾರವಾಡ: ಸ್ಟೆಷನರಿ ಹಾಗೂ ಕಿರಾಣಿ ಅಂಗಡಿಗೆ ಶಾರ್ಟ್ ಸರ್ಕ್ಯೂಟ್ ಹಿನ್ನೆಲೆ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡ ನೆಹರೂ ಮಾರುಕಟ್ಟೆಯಲ್ಲಿ ತಡರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದ ಸ್ಟೆಷನರಿ ಹಾಗೂ ಕಿರಾಣಿ ಅಂಗಡಿಗೆ ಬೆಂಕಿ ಹೊತ್ತಿ ಅಂಗಡಿ ಉರಿದಿದೆ. ಸ್ಥಳೀಯರು ಬೆಂಕಿ ನೋಡಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ವೀಸಾ ಹಗರಣ – ನಿರೀಕ್ಷಣಾ ಜಾಮೀನು ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕಾರ್ತಿ ಚಿದಂಬರಂ
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ. ಧಾರವಾಡ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.