– ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ
ನವದೆಹಲಿ: ಎಲ್‌ಪಿಜಿ ಸಿಲಿಂಡರ್‌ಗಳ (LPG Cylinder) ಕೃತಕ ಅಭಾವ ಮತ್ತು ಕಾಳಸಂತೆ ತಡೆಯಲು ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಸಿಲಿಂಡರ್ ಬುಕ್ಕಿಂಗ್ (Cylinder Booking) ಅವಧಿಯನ್ನು 21 ರಿಂದ 25 ದಿನಗಳಿಗೆ ಹೆಚ್ಚಿಸಲಾಗಿದೆ.
ಗೃಹಬಳಕೆ ಗ್ರಾಹಕರಿಗೆ ಮೊದಲ ಆದ್ಯತೆ ನೀಡಲಾಗುವುದು. ದೇಶೀಯ ಉತ್ಪಾದನೆ ಹೆಚ್ಚಿಸಲು ಮತ್ತು ಹೊಸ ದೇಶಗಳಿಂದ ಎಲ್‌ಪಿಜಿ ಆಮದು ಮಾಡಿಕೊಳ್ಳಲು ಸರ್ಕಾರ ಕ್ರಮ ಕೈಗೊಂಡಿದೆ. ಈ ಹಿಂದೆ 55 ದಿನಗಳಿಗೊಮ್ಮೆ ಸಿಲಿಂಡರ್ ಬುಕ್ ಮಾಡುತ್ತಿದ್ದವರು, ಈಗ ಯುದ್ಧದ ಭೀತಿಯಿಂದ ಕೇವಲ 15 ದಿನಗಳಲ್ಲೇ ಬುಕ್ಕಿಂಗ್ ಮಾಡುತ್ತಿರುವುದು ಕಂಡುಬಂದಿದೆ. ಇದನ್ನು ನಿಯಂತ್ರಿಸಲು ಹೊಸ ನಿಯಮ ಜಾರಿಗೆ ತರಲಾಗಿದೆ. ಇದನ್ನೂ ಓದಿ: ಮುಷ್ಕರದಿಂದ ಹಿಂದೆ ಸರಿದ ವೈದ್ಯರು – ನಾಳೆಯಿಂದ ಎಂದಿನಂತೆ ಓಪಿಡಿ ಓಪನ್
ವಾಣಿಜ್ಯ ಬಳಕೆಯ ಸಿಲಿಂಡರ್‌ಗಳಿಗಿಂತ ಮನೆ ಬಳಕೆಯ ಗ್ರಾಹಕರಿಗೆ ಮೊದಲ ಆದ್ಯತೆ ನೀಡುವಂತೆ ಸರ್ಕಾರ ಸೂಚನೆ ನೀಡಿದೆ. ಮನೆ ಬಳಕೆಯ ಗ್ರಾಹಕರ ಹಿತವೇ ನಮಗೆ ಮುಖ್ಯ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವ್ಯಂಗ್ಯ

