ಕಮಲಾ ಹ್ಯಾರಿಸ್ ಕಚೇರಿ ಮೇಲೆ ಗುಂಡಿನ ದಾಳಿ

Public TV
1 Min Read
kamala harris

ನ್ಯೂಯಾರ್ಕ್: ಅಮೆರಿಕದಲ್ಲಿ (America) ಚುನಾವಣೆ ಹೊತ್ತಿನಲ್ಲೇ ಹಾಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ (Kamala Harris) ಪಕ್ಷದ ಪ್ರಚಾರ ಕಚೇರಿ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ.

ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರನ್ನು (Donald Tramp) ಗುರಿಯಾಗಿಸಿಕೊಂಡು ಈ ಮೊದಲು 2 ಬಾರಿ ಗುಂಡಿನ ದಾಳಿ ನಡೆದಿತ್ತು. ಅದರ ಬೆನ್ನಲ್ಲೇ ಮಧ್ಯರಾತ್ರಿ ಕಮಲಾ ಹ್ಯಾರಿಸ್ ಅರಿಜೋನಾದ ಡೆಮಾಕ್ರಟಿಕ್ ಕಚೇರಿ ಮೇಲು ಕಿಡಿಗೇಡಿಗಳು ಗುಂಡು ಹಾರಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಅನೈತಿಕ ರಾಜಕೀಯ; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್‌ಗೆ ಕೇಜ್ರಿವಾಲ್ ಐದು ಪ್ರಶ್ನೆ

ಘಟನೆ ನಡೆದ ತಕ್ಷಣ ಕಚೇರಿಯಲ್ಲಿದ್ದ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ನಡೆಸಿದ್ದಾರೆ. ಇದು ಎರಡನೇ ಬಾರಿ ದಾಳಿಗೆ ಯತ್ನ ನಡೆದಿದ್ದು, ಕಟ್ಟಡದ ಕಿಟಕಿಗಳಿಂದ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ಕಚೇರಿಯಲ್ಲಿ ತಡರಾತ್ರಿ ಯಾರೂ ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ. ಆದರೆ ಆ ಕಟ್ಟಡದಲ್ಲಿ ಕೆಲಸ ಮಾಡುವವರು ಹಾಗೂ ಸ್ಥಳೀಯರು ಕಳವಳ ವ್ಯಕ್ತಪಡಿಸಿದ್ದಾರೆ. ಹಲವು ಆಯಾಮಗಳಿಂದ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬಹಿರಂಗ ಕ್ಷಮೆ ಕೇಳಿದ ನಟಿ, ಸಂಸದೆ ಕಂಗನಾ ರಣಾವತ್

ಟ್ರಂಪ್ ಹತ್ಯೆಗೆ 2 ಬಾರಿ ಯತ್ನ:
ಡೊನಾಲ್ಡ್ ಟ್ರಂಪ್ ಮೇಲೆ ಎರಡು ಬಾರಿ ಗುಂಡಿನ ದಾಳಿ ನಡೆದಿತ್ತು. ಫ್ಲೋರಿಡಾದ ವೆಸ್ಟ್ ಪಾಮ್ ಬೀಚ್‌ನಲ್ಲಿ ಗಾಲ್ಫ್ ಆಡುತ್ತಿದ್ದಾಗ ಓರ್ವ, ಟ್ರಂಪ್ ಹತ್ಯೆಗೆ ಯತ್ನಿಸಿದ್ದ. ಆರೋಪಿ ಫೆನ್ಸಿಂಗ್‌ನಿಂದ ಬಂದೂಕು ಹಿಡಿದು ಬರುತ್ತಿರುವುದನ್ನು ಕಂಡ ಭದ್ರತಾ ಪಡೆ ಗುಂಡಿನ ದಾಳಿ ನಡೆಸಿ ಆತನನ್ನು ಬಂಧಿಸಿತು. ಅದಕ್ಕೂ ಕೆಲವು ದಿನಗಳ ಮೊದಲು, ಟ್ರಂಪ್ ಅವರು ಪೆನ್ಸಿಲ್ವೇನಿಯಾ ರ‍್ಯಾಲಿಯಲ್ಲಿ ಹತ್ಯೆಯ ಪ್ರಯತ್ನದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆ ಪಡೆದರೆ ಇಡೀ ದಕ್ಷಿಣ ಭಾರತ ಹೊತ್ತಿ ಉರಿಯುತ್ತೆ: ಅಹಿಂದ ರಾಜ್ಯಾಧ್ಯಕ್ಷ

Share This Article