ವಾಷಿಂಗ್ಟನ್: ಅಮೆರಿಕದ ಶ್ವೇತಭವನದ(White House) ಸಮೀಪ ಹಮ್ಮಿಕೊಳ್ಳಲಾಗಿದ್ದ ವರದಿಗಾರರ ಔತಣಕೂಟದ (White House Correspondents’ Dinner) ವೇಳೆ ಗುಂಡಿನ ದಾಳಿ ನಡೆದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಭದ್ರತಾ ಸಂಸ್ಥೆಯು ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಮತ್ತು ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರನ್ನು ತಕ್ಷಣವೇ ಸ್ಥಳಾಂತರಿಸಿದೆ.
ವಾಷಿಂಗ್ಟನ್ ಡಿ.ಸಿಯ ಪ್ರತಿಷ್ಠಿತ ವಾಷಿಂಗ್ಟನ್ ಹಿಲ್ಟನ್ ಹೋಟೆಲ್‌ನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಧ್ಯಕ್ಷ ಟ್ರಂಪ್ (Donald Trump) ಅವರು ಭಾಷಣ ಮಾಡಲು ವೇದಿಕೆಗೆ ಸಿದ್ಧರಾಗುತ್ತಿದ್ದಂತೆಯೇ, ಹೋಟೆಲ್‌ನ ಹೊರಗೆ ಸತತವಾಗಿ 5 ರಿಂದ 8 ಬಾರಿ ಗುಂಡಿನ ಸದ್ದು ಕೇಳಿಬಂದಿದೆ. ಇದರಿಂದ ಎಚ್ಚೆತ್ತ ಸೀಕ್ರೆಟ್ ಸರ್ವಿಸ್ ಏಜೆಂಟ್‌ಗಳು ಕ್ಷಣಾರ್ಧದಲ್ಲಿ ಅಧ್ಯಕ್ಷರು ಮತ್ತು ಗಣ್ಯರನ್ನು ಸುತ್ತುವರಿದು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದರು.
Loud Bangs and President Trump Evacuated
“Stay down!”
Loud bangs are heard and President Trump and others are evacuated from White House Correspondents’ Association Dinner.
Watch LIVE –> https://t.co/OQnyC97cOI#WHCD #WHCA #NerdProm pic.twitter.com/b36LtCEhnx
— CSPAN (@cspan) April 26, 2026
ಶಂಕಿತನ ಬಂಧನ
ಗುಂಡಿನ ದಾಳಿ ನಡೆದ ತಕ್ಷಣ ಕಾರ್ಯಪ್ರವೃತ್ತರಾದ ಭದ್ರತಾ ಪಡೆಗಳು ಒಬ್ಬ ಶಂಕಿತ ವ್ಯಕ್ತಿಯನ್ನು ಸ್ಥಳದಲ್ಲೇ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಶ್ವೇತಭವನದ ಸುತ್ತಮುತ್ತಲಿನ ಭದ್ರತೆಯನ್ನು ಹಿಂದೆಂದಿಗಿಂತಲೂ ಹೆಚ್ಚಿಸಲಾಗಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ.
ದಾಳಿಕೋರನು ಕಾರ್ಯಕ್ರಮದ ಭದ್ರತಾ ತಪಾಸಣಾ ಕೇಂದ್ರದ ಬಳಿ ಗುಂಡು ಹಾರಿಸಿದ್ದರಿಂದ ಹಾಲ್‌ನಲ್ಲಿದ್ದ ಅತಿಥಿಗಳು ಟೇಬಲ್‌ಗಳ ಕೆಳಗೆ ಅವಿತುಕೊಂಡಿದ್ದರು. ಈ ದಾಳಿಯಲ್ಲಿ ಒಬ್ಬ ಸೀಕ್ರೆಟ್ ಸರ್ವಿಸ್ ಏಜೆಂಟ್‌ಗೆ ಬುಲೆಟ್ ತಗುಲಿದ್ದು, ಅವರು ಬುಲೆಟ್ ಪ್ರೂಫ್ ಜಾಕೆಟ್ ಧರಿಸಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ.
ಈ ಘಟನೆಯ ನಂತರ ಶ್ವೇತಭವನ, ಕ್ಯಾಪಿಟಲ್ ಹಿಲ್ ಮತ್ತು ವಾಷಿಂಗ್ಟನ್‌ನ ಪ್ರಮುಖ ಸರ್ಕಾರಿ ಕಟ್ಟಡಗಳ ಸುತ್ತಲೂ ಭದ್ರತೆಯನ್ನು ದುಪ್ಪಟ್ಟುಗೊಳಿಸಲಾಗಿದೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಗಣ್ಯರ ಭದ್ರತಾ ಪ್ರೋಟೋಕಾಲ್‌ಗಳನ್ನು ಮರುಪರಿಶೀಲಿಸಲಾಗುತ್ತಿದೆ.

ಟ್ರಂಪ್ ಪ್ರತಿಕ್ರಿಯೆ
ಘಟನೆಯ ನಂತರ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಡೊನಾಲ್ಡ್ ಟ್ರಂಪ್, ಭದ್ರತಾ ಪಡೆಗಳ ಕಾರ್ಯವೈಖರಿಯನ್ನು ಶ್ಲಾಘಿಸಿದ್ದಾರೆ.
“ಡಿಸಿಯಲ್ಲಿ ಇದೊಂದು ವಿಚಿತ್ರ ಸಂಜೆ. ಸೀಕ್ರೆಟ್ ಸರ್ವಿಸ್ ಮತ್ತು ಕಾನೂನು ಜಾರಿ ಸಂಸ್ಥೆಗಳು ಅದ್ಭುತವಾಗಿ ಕೆಲಸ ಮಾಡಿವೆ. ಅವರು ಅತ್ಯಂತ ವೇಗವಾಗಿ ಮತ್ತು ಧೈರ್ಯದಿಂದ ಕಾರ್ಯನಿರ್ವಹಿಸಿದ್ದಾರೆ. ಶೂಟರ್‌ನನ್ನು ಈಗಾಗಲೇ ಬಂಧಿಸಲಾಗಿದೆ. ನಾನು ಕಾರ್ಯಕ್ರಮವನ್ನು ಮುಂದುವರಿಸಲು ಸೂಚಿಸಿದ್ದೇನೆ. ಆದರೆ ಭದ್ರತೆಯ ದೃಷ್ಟಿಯಿಂದ ಅಂತಿಮ ನಿರ್ಧಾರವನ್ನು ಅಧಿಕಾರಿಗಳ ವಿವೇಚನೆಗೆ ಬಿಟ್ಟಿದ್ದೇನೆ” ಎಂದು ಟ್ರಂಪ್ ತಿಳಿಸಿದ್ದಾರೆ.
ಈ ಸರಣಿ ಘಟನೆಗಳಿಂದಾಗಿ ಅಮೆರಿಕದ ರಾಜಕೀಯ ವಲಯದಲ್ಲಿ ತೀವ್ರ ಕಳವಳ ವ್ಯಕ್ತವಾಗಿದ್ದು, ತನಿಖೆ ಮುಂದುವರಿದಿದೆ.



