ಮಕ್ಕಳಿಗೆ ಊಟ ಹಾಕ್ಲೋ, ಸಾಯಿಸ್ಲೋ – ಬೆಲೆ ಏರಿಕೆ ಖಂಡಿಸಿ ಪಾಕ್ ಪ್ರಧಾನಿಗೆ ಮಹಿಳೆಯಿಂದ ಕ್ಲಾಸ್

Public TV
2 Min Read
pak women 1

ಇಸ್ಲಾಮಾಬಾದ್: ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ನಡುವೆ ಕರಾಚಿಯಲ್ಲಿ ಔಷಧಿಗಳು, ದಿನಸಿ ಮತ್ತು ವಿದ್ಯುತ್ ಬೆಲೆ ಗಗನಕ್ಕೇರುತ್ತಿರುವ ಬಗ್ಗೆ ವಿವರಿಸುತ್ತಾ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಪಿಎಂಎಲ್-ಎನ್ ನಾಯಕಿ ಮರ್ಯಮ್ ನವಾಜ್ ವಿರುದ್ಧ ಪಾಕಿಸ್ತಾನಿ ಮಹಿಳೆಯೊಬ್ಬರು ವಾಗ್ದಾಳಿ ನಡೆಸಿರುವ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.

Shehbaz Sharif

ಪಾಕಿಸ್ತಾನವು ಆರ್ಥಿಕ ಬಿಕ್ಕಟ್ಟಿನ ನಡುವೆ ಹೋರಾಟ ನಡೆಸುತ್ತಿದೆ. ರಾಜಕೀಯವಾಗಿ ಸರ್ಕಾರ ತೆಗೆದುಕೊಳ್ಳುತ್ತಿರುವ ನಿರ್ಧಾರಗಳು ಎಲ್ಲೆಡೆ ಆತಂಕವನ್ನು ಸೃಷ್ಟಿಸುತ್ತಿದೆ. ಪಾಕ್ ನಾಗರಿಕರು ಸಾಮಾಜಿಕ ಜಾಲತಾಣ ಮೂಲಕ ತಮ್ಮ ಆರ್ಥಿಕತೆಯನ್ನು ಸುಧಾರಿಸುವ ಕೆಲಸವನ್ನು ಪ್ರಧಾನಿ ಮಾಡುತ್ತಿಲ್ಲ ಎಂದು ಟೀಕಿಸುತ್ತಿದ್ದಾರೆ. ಇದನ್ನೂ ಓದಿ: ನೈಟ್ ಕ್ಲಬ್​ನಲ್ಲಿ ಯುವತಿಗೆಯೊಂದಿಗೆ ಅಸಭ್ಯ ವರ್ತನೆ – ಪ್ರಶ್ನಿಸಿದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಬೌನ್ಸರ್ಸ್!

ಸದ್ಯ ಮಹಿಳೆಯೊಬ್ಬರ ವೀಡಿಯೋವನ್ನು ಪಾಕಿಸ್ತಾನಿ ಪತ್ರಕರ್ತ ಹಮೀದ್ ಮಿರ್ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ವೀಡಿಯೋದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಬಗ್ಗೆ ಕರಾಚಿ ಮಹಿಳೆಯೊಬ್ಬರು ಇನ್ನೂ ಮುಂದೆ ಮಕ್ಕಳಿಗೆ ಊಟ ನೀಡದೇ ಅವರ ಜೀವನವನ್ನು ಕೊನೆಗೊಳಿಸಬೇಕೇ ಎಂದು ಪ್ರಶ್ನಿಸುವ ಮೂಲಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಹೌದು, ರಾಬಿಯಾ ಅವರು, ಬೆಲೆ ಏರಿಕೆಯಿಂದಾಗಿ ತಾವು ಎದುರಿಸುತ್ತಿರುವ ಕಷ್ಟವನ್ನು ಕ್ಯಾಮೆರಾ ಮುಂದೆ ತೊಡಿಕೊಂಡಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ತಮಗೆ ಆಗುತ್ತಿರುವ ಖರ್ಚುಗಳನ್ನು ಹೇಗೆ ನಿರ್ವಹಿಸಬೇಕು ಎಂಬುದನ್ನು ತಿಳಿಸಬೇಕು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

Electricity

ನಾನು ಏನು ಮಾಡಬೇಕು, ಮನೆ ಬಾಡಿಗೆ ಕಟ್ಟಬೇಕೋ, ದುಬಾರಿ ವಿದ್ಯುತ್ ಬಿಲ್‍ಗಳನ್ನು ಪಾವತಿಸಬೇಕೋ, ನನ್ನ ಮಕ್ಕಳಿಗೆ ಹಾಲು ಮತ್ತು ಔಷಧಿಗಳನ್ನು ಖರೀದಿಸಬೇಕೋ, ನನ್ನ ಮಕ್ಕಳಿಗೆ ಊಟ ಹಾಕಬೇಕೋ ಅಥವಾ ಅವರನ್ನು ಕೊಲ್ಲಬೇಕೋ? ಎಂದು ಪ್ರಶ್ನಿಸುತ್ತಾ ಕಣ್ಣೀರು ಹಾಕಿದ್ದಾರೆ.  ಇದನ್ನೂ ಓದಿ: ಕಾಂಗ್ರೆಸ್ಸಿಗರ ಮನಸ್ಥಿತಿಯಲ್ಲಿ ಅತಂತ್ರವಿದೆ, ನಾನು ಮತ್ತಷ್ಟು ಗಟ್ಟಿಯಾಗಿದ್ದೇನೆ: ಬೊಮ್ಮಾಯಿ

ನನ್ನ ಮಕ್ಕಳಲ್ಲಿ ಒಬ್ಬರಿಗೆ ಫಿಟ್ಸ್ ಇದೆ. ಆದರೆ ನಾಲ್ಕು ತಿಂಗಳಿನಿಂದ ಅವರಿಗೆ ನೀಡಲಾಗುತ್ತಿರುವ ಔಷಧಿ ಬೆಲೆ ಏರಿಕೆಯಾಗಿದೆ. ಹಾಗಂತ ನನ್ನ ಮಕ್ಕಳಿಗೆ ಔಷಧಿ ನೀಡದೇ ಇರುವುದಕ್ಕೆ ಆಗುತ್ತಾ? ಸರ್ಕಾರ ಈಗಾಗಲೇ ಬಹುತೇಕ ಬಡವರನ್ನು ಕೊಂದಿದೆ. ಸರ್ವಶಕ್ತನಾದ ಅಲ್ಲಾಹನಿಗೆ ಈ ಬಗ್ಗೆ ಪ್ರಶ್ನಿಸಲು ನೀವು ಭಯಪಡುತ್ತೀರೋ ಅಥವಾ ಇಲ್ಲವೋ ಎಂದು ಆಕ್ರೋಶ ಹೊರಹಾಕಿದ್ದಾರೆ.

ಈ ವೀಡಿಯೋಗೆ ಪ್ರತಿಕ್ರಿಯಿಸಿದ ಹಣಕಾಸು ಸಚಿವ ಮಿಫ್ತಾ ಇಸ್ಮಾಯಿಲ್ ಅವರು, ದೇಶದ ಆರ್ಥಿಕ ಪರಿಸ್ಥಿತಿಯನ್ನು ಸಮರ್ಥಿಸಿಕೊಂಡಿದ್ದಾರೆ. ಸರ್ಕಾರ ಜೂನ್‍ನಲ್ಲಿ ವಿದ್ಯುತ್ ದರವನ್ನು ಹೆಚ್ಚಿಸಿಲ್ಲ ಅಥವಾ ಔಷಧಿಗಳ ಮೇಲೆ ಹೊಸ ತೆರಿಗೆಯನ್ನು ವಿಧಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 2022ರ ಏಪ್ರಿಲ್‍ನಲ್ಲಿ ಅಧಿಕಾರ ವಹಿಸಿಕೊಂಡ ಪಿಎಂ ಶೆಹಬಾಜ್ ಷರೀಫ್ ಅವರ ಸಮ್ಮಿಶ್ರ ಸರ್ಕಾರವು ಸಾಕಷ್ಟು ರಾಜಕೀಯ ಮತ್ತು ಆರ್ಥಿಕ ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *