– ಪಾಕಿಸ್ತಾನದವರು ಸಾಯುವವರೆಗೂ ವೈರಿಗಳೇ ಎಂದ ಸಭಾಪತಿ
ಚಿಕ್ಕೋಡಿ: ಯಾರದ್ದೋ ಮಾತು ಕೇಳಿ ಪಾಕ್ (Pakistan) ವಿರುದ್ಧ ಭಾರತ ಸಂಘರ್ಷ ನಿಲ್ಲಿಸಬಾರದಿತ್ತು ಎಂದು ಪ್ರಧಾನಿ ಮೋದಿ (Narendra Modi) ವಿರುದ್ಧ ಸಭಾಪತಿ ಬಸವರಾಜ್ ಹೊರಟ್ಟಿ (Basavaraj Horatti) ಅಸಮಾಧಾನ ಹೊರಹಾಕಿದ್ದಾರೆ.
ಈ ಕುರಿತು ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಸಂಘರ್ಷದಲ್ಲಿ ಪಾಕಿಸ್ತಾನವನ್ನು ನಾಶ ಮಾಡಬೇಕಿತ್ತು. ಕದನ ವಿರಾಮದ ನಂತರ ಮತ್ತೆ ದಾಳಿ ಮಾಡಿದ್ದಾರೆ. ಬೇರೆಯವರ ಮಾತು ಕೇಳಿ ಪಾಕಿಸ್ತಾನದ ಜೊತೆ ನಡೆಸುತ್ತಿದ್ದ ಸಂಘರ್ಷ ಕೈ ಬಿಟ್ಟಿದ್ದು ತಪ್ಪು. ಪಾಕಿಸ್ತಾನದವರು ಸಾಯುವವರೆಗೂ ವೈರಿಗಳೇ. ಅವರು ಎಂದಿಗೂ ನಮಗೆ ಒಳ್ಳೆಯದು ಮಾಡಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಭಾರತ-ಪಾಕ್ ಸಂಘರ್ಷ – ಬಿನ್ ಲಾಡೆನ್ ಆಪ್ತನ ಮಗ ಈಗ ಪಾಕ್ ಸೇನಾ ವಕ್ತಾರ
ಪಾಕ್ ಹಾಗೂ ಭಾರತದ ನಡುವೆ ಸಂಧಾನದಲ್ಲಿ ಟ್ರಂಪ್ (Donald Trump) ಮಧ್ಯಸ್ಥಿಕೆ ವಹಿಸಲು ಅವರು ಯಾರು? ಅಮೆರಿಕದ ವಿಚಾರದಲ್ಲಿ ನಾವು ಏನಾದರೂ ಹೇಳಿದರೆ ಅವರು ಕೇಳುತ್ತಾರಾ? ಮೋದಿಯವರು ಕಠಿಣ ಹಾಗೂ ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕಿತ್ತು. ಈ ವಿಚಾರದಲ್ಲಿ ಟ್ರಂಪ್ ಮಾತು ಕೇಳಿದ್ದು ತಪ್ಪು. ಭಯೋತ್ಪಾದಕರ ವಿಚಾರದಲ್ಲಿ ಎಲ್ಲಾ ದೇಶಗಳು ಶೃಂಗಸಭೆಯನ್ನ ನಡೆಸಿ ಭಯೋತ್ಪಾದಕರನ್ನು ನಾಶ ಮಾಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಆಪರೇಷನ್ ಸಿಂಧೂರ ಮುಂದುವರಿಯುತ್ತದೆ – ಭಾರತೀಯ ವಾಯುಸೇನೆ ಅಧಿಕೃತ ಘೋಷಣೆ