ಪಾಟ್ನಾ: ಬಿಹಾರದ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಮೊಹಮ್ಮದ್ ಇಸ್ರೈಲ್ ಮನ್ಸೂರಿ ಅವರು ಗಯಾದ ವಿಷ್ಣುಪಾದ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ನಡೆದ ವಿವಾದಕ್ಕೆ ಸಂಬಂಧಿಸಿ ಅವರ ವಿರುದ್ಧ ದೂರು ದಾಖಲಾಗಿದೆ.
ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಮುಜಾಫರ್‌ಪುರದ ನ್ಯಾಯಾಲಯದಲ್ಲಿ ಸಾಮಾಜಿಕ ಕಾರ್ಯಕರ್ತ ಚಂದ್ರ ಕಿಶೋರ್ ಪರಾಶರ ಅವರು ಮನ್ಸೂರಿ ವಿರುದ್ಧ ಎಫ್‍ಐಆರ್ ದಾಖಲಿಸಬೇಕೆಂದು ದೂರು ಸಲ್ಲಿಸಿದ್ದಾರೆ.
Advertisement
Advertisement
ಸನಾತನ ಧರ್ಮವನ್ನು ಅನುಸರಿಸುವವರಿಗೆ ಮಾತ್ರ ದೇವಸ್ಥಾನಕ್ಕೆ ಭೇಟಿ ನೀಡಲು ಅವಕಾಶವಿರುವುದರಿಂದ ಸಚಿವರು ಮುಸ್ಲಿಂ ಆಗಿರುವುದರಿಂದ ವಿಷ್ಣುಪಾದ ದೇವಸ್ಥಾನಕ್ಕೆ ಭೇಟಿ ನೀಡಬಾರದು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ದೇಗುಲದಲ್ಲಿ ಪ್ರಸಾದ ನಿರಾಕರಿಸಿದ ಸಚಿವ – ಹಿಂದೂ ಭಾವನೆಗೆ ಧಕ್ಕೆ ಎಂದು ಅರ್ಚಕ ಅಸಮಾಧಾನ
Advertisement
ಈ ಬಗ್ಗೆ ಪರಾಶರ ವಕೀಲ ರವೀಂದ್ರ ಕುಮಾರ್ ಸಿಂಗ್ ಮಾತನಾಡಿ, ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಸಚಿವರ ವಿರುದ್ಧ ಎಫ್‍ಐಆರ್ ದಾಖಲಿಸಬೇಕೆಂದು ನನ್ನ ಕಕ್ಷಿದಾರರು ಕೋರಿದ್ದಾರೆ. ನ್ಯಾಯಾಲಯವು ಸೆಪ್ಟೆಂಬರ್ 2 ರಂದು ವಿಚಾರಣೆ ನಡೆಸಲಿದೆ ಎಂದು ಹೇಳಿದರು. ಇದನ್ನೂ ಓದಿ: 5 ಫೋನ್‌ಗಳಲ್ಲಿ ಮಾಲ್‍ವೇರ್‌ಗಳು ಕಂಡು ಬಂದಿದೆ, ನಿರ್ದಿಷ್ಟವಾಗಿ ಪೆಗಾಸಸ್ ಎನ್ನಲು ಸಾಧ್ಯವಿಲ್ಲ – ಸುಪ್ರೀಂ ಕೋರ್ಟ್‍ಗೆ ತಜ್ಞರ ವರದಿ
Advertisement
ಬಿಹಾರದ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಇಸ್ರೇಲ್ ಮನ್ಸೂರ್ ಅವರು ಇಂದು ಗಯಾದ ವಿಷ್ಣುಪಾದ್ ದೇವಾಲಯಕ್ಕೆ ಭೇಟಿ ನೀಡಿದ್ದರು. ಆದರೆ ಈ ವೇಳೆ ಅವರು ಪ್ರಾರ್ಥನೆ ಸಲ್ಲಿಸಲಿಲ್ಲ ಹಾಗೂ ಪ್ರಸಾದವನ್ನು ಸ್ವೀಕರಿಸಲಿಲ್ಲ ಎಂದು ದೇವಾಲಯದ ಅರ್ಚಕ ತಿಳಿಸಿದ್ದರು.