ಬೆಂಗಳೂರು: ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿರುವ ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಪ್ರಕರಣವು ಈಗಾಗಲೇ ಕಲಬುರಗಿ ಜಿಲ್ಲೆಯಿಂದ ಸಿಲಿಕಾನ್‌ಸಿಟಿ ಬೆಂಗಳೂರು ಹಾಗೂ ಹಾಸಜನ ಜಿಲ್ಲೆಗಳಿಗೂ ವ್ಯಾಪಿಸಿದೆ.
ತನಿಖೆ ಚುರುಕುಗೊಳಿಸಿರುವ ಸಿಐಡಿ ಪೊಲೀಸರು 50ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿದ್ದಾರೆ. ಈ ನಡುವೆ ಉನ್ನತಶಿಕ್ಷಣ ಸಚಿವ ಸಿ.ಎನ್.ಅಶ್ವಥ್ ನಾರಾಯಣ ಅವರ ಸಹೋದರನೂ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪ ಕೇಳಿಬರುತ್ತಿದ್ದಂತೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಾಯಕರ ನಡುವೆ ವಾಕ್‌ಸಮರ ಶುರುವಾಗಿದೆ. ಇದನ್ನೂ ಓದಿ: 2-3 ದಿನದಲ್ಲಿ ಸಂಪುಟ ವಿಸ್ತರಣೆ : ಸಿಎಂ ಬೊಮ್ಮಾಯಿ
Advertisement
People across parties meet each other, go to functions, some even get married into families- I’m surprised @DKShivakumar would say this about @MBPatil who’s a staunch congressman. Shouldn’t the party be fighting elections as one unit? @INCIndia https://t.co/YOT11h35Cq
— Ramya/Divya Spandana (@divyaspandana) May 11, 2022
Advertisement
ಈ ನಡುವೆ ಸ್ಯಾಂಡಲ್‌ವುಡ್ ಕ್ವೀನ್ ಹಾಗೂ ಕಾಂಗ್ರೆಸ್ ಮಾಜಿ ಸಂಸದೆ ರಮ್ಯಾ ಅವರು, ಈ ವಿಚಾರಕ್ಕೆ ಸಂಬಂಧಿಸಿದಂತೆ ಧ್ವನಿ ಎತ್ತಿದ್ದಾರೆ. ಇದನ್ನೂ ಓದಿ: ಕರ್ತವ್ಯದ ವೇಳೆ ಕಂಠಪೂರ್ತಿ ಕುಡಿದು ರಂಪಾಟ ಮಾಡಿದ ಸರ್ಕಾರಿ ನೌಕರ
Advertisement
`ತಮ್ಮ ಇಲಾಖೆ ಹಗರಣಗಳ ವಿಚಾರಗಳ ಬಗ್ಗೆ ಯಾರು ಧ್ವನಿ ಎತ್ತರಬಾರದೆಂದು ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳುವ ಉದ್ದೇಶದಿಂದ ಅಶ್ವಥ್ ನಾರಾಯಣ್ ಅವರು ಎಂ.ಬಿ.ಪಾಟೀಲ್ ಅವರನ್ನು ಭೇಟಿ ಮಾಡಿದ್ದಾರೆ’ ಎಂದು ಡಿ.ಕೆ.ಶಿವಕುಮಾರ್ ನಿನ್ನೆಯಷ್ಟೇ ಆರೋಪಿಸಿದ್ದರು.
Advertisement
ಈ ಕುರಿತು ಟ್ವೀಟ್ ಮಾಡಿರುವ ನಟಿ ರಮ್ಯಾ, ಪಕ್ಷಾತೀತವಾಗಿ ಜನರು ಪರಸ್ಪರ ಭೇಟಿಯಾಗುತ್ತಾರೆ. ಸಮಾರಂಭಗಳಿಗೆ ಹೋಗುತ್ತಾರೆ. ಕೆಲವರು ಅಂತಹ ಕುಟುಂಬಗಳಲ್ಲಿ ಮದುವೆಯಾಗುತ್ತಾರೆ. ಆದರೆ, ಡಿ.ಕೆ.ಶಿವಕುಮಾರ್ ಅವರು ಹೇಳಿರುವುದು ನನಗೆ ಆಶ್ಚರ್ಯವಾಗಿದೆ. ಎಂ.ಬಿ.ಪಾಟೀಲ್ ಒಬ್ಬ ಕಟ್ಟಾ ಕಾಂಗ್ರೆಸ್ಸಿಗ. ಹಾಗಿದ್ದ ಮೇಲೆ ಪಕ್ಷ ಒಂದೇ ಘಟಕವಾಗಿ ಚುನಾವಣೆ ಎದುರಿಸಬೇಕಲ್ಲವೇ? ಎಂದು ಬರೆದುಕೊಂಡಿದ್ದಾರೆ.