ಇಸ್ಲಾಮಾಬಾದ್: ಪಾಕಿಸ್ತಾನದ ಉಪ ಪ್ರಧಾನಿ ಹಾಗೂ ವಿದೇಶಾಂಗ ಸಚಿವ ಇಶಾಕ್ ದಾರ್ (Ishaq Dar) ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಉಗ್ರ ಸಂಘಟನೆಗೆ ಸಂಸತ್‌ನಲ್ಲಿ ಬಹಿರಂಗವಾಗಿಯೇ ಬೆಂಬಲ ವ್ಯಕ್ತಪಡಿಸಿದ್ದಾರೆ.
Pak Deputy PM Ishaq Dar rejected TRF involvement in the Pahalgam attack and said :
‘Alhamdulillah we are the non permanent member of UNSC…..we don’t consider TRF as illegal…show the evidence that TRF has carried out the Pahalgam attack or show the ownership of TRF… We… pic.twitter.com/qLwDAC4zVy
— OsintTV 📺 (@OsintTV) July 18, 2025
ಪಾಕಿಸ್ತಾನ ಸಂಸತ್ತಿನಲ್ಲಿ ಭಾಷಣ ಮಾಡುವಾಗ, ಪಹಲ್ಗಾಮ್ ದಾಳಿಯನ್ನ (Pahalgam attack) ಟಿಆರ್‌ಎಫ್ ನಡೆಸಿದೆ ಅನ್ನೋದಕ್ಕೆ ಸಾಕ್ಷಿ ತೋರಿಸಿ ಎಂದು ಕೇಳಿರುವ ಇಶಾಕ್ ದಾರ್ ಉಗ್ರ ಸಂಘಟನೆಗೆ ನೇರ ಬೆಂಬಲ ಸೂಚಿಸಿದ್ದಾರೆ. ಇದನ್ನೂ ಓದಿ: Uttar Pradesh | ಸ್ಕೂಲ್ ವ್ಯಾನ್‌ನಲ್ಲಿ 4 ವರ್ಷದ ಬಾಲಕಿ ಮೇಲೆ ರೇಪ್ – ಡ್ರೈವರ್ ಬಂಧನ
ಏಪ್ರಿಲ್ 22ರ ಪಹಲ್ಗಾಮ್ ಉಗ್ರ ದಾಳಿ (Pahalgam Attack) ಎಸಗಿದ ಪಾಕಿಸ್ತಾನ (Pakistan) ಮೂಲದ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಅನ್ನು ಅಮೆರಿಕದ ವಿದೇಶಾಂಗ ಇಲಾಖೆ ಒಂದು ದಿನದ ಹಿಂದಷ್ಟೇ ಭಯೋತ್ಪಾದಕ ಸಂಘಟನೆ ಪಟ್ಟಿಗೆ ಸೇರಿಸಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರ ಪ್ರಾಣ ಬಲಿ ಪಡೆದ ಘಟನೆಯ ಹೊಣೆಗಾರಿಕೆಯನ್ನು ಈ ಸಂಘಟನೆ ವಹಿಸಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ (Marco Rubio) ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಮೆರಿಕದ ಈ ಹೇಳಿಕೆ ಬೆನ್ನಲ್ಲೇ ಪಾಕ್ ಉಪ ಪ್ರಧಾನಿ ಸಂಸತ್‌ನಲ್ಲಿ ಟಿಆರ್‌ಎಫ್ ಪರ ಧ್ವನಿ ಎತ್ತಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್ ದಾಳಿಯ ಹೊಣೆ ಹೊತ್ತಿದ್ದ ಟಿಆರ್‌ಎಫ್‌ನ್ನು ಉಗ್ರ ಸಂಘಟನೆ ಪಟ್ಟಿಗೆ ಸೇರಿಸಿದ ಅಮೆರಿಕ
A strong affirmation of India-US counter-terrorism cooperation.
Appreciate @SecRubio and @StateDept for designating TRF—a Lashkar-e-Tayyiba (LeT) proxy—as a Foreign Terrorist Organization (FTO) and Specially Designated Global Terrorist (SDGT). It claimed responsibility for the…
— Dr. S. Jaishankar (@DrSJaishankar) July 18, 2025
ಸಂಸತ್‌ನಲ್ಲಿ ಮಾತನಾಡಿದ ಇಶಾಕ್ ದಾರ್, ಅಮೆರಿಕ ಟಿಆರ್‌ಎಫ್ ಅನ್ನು ವಿದೇಶಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸಂಬಂಧಿಸಿದ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕ ಗುಂಪು ಟಿಆರ್‌ಎಫ್. ಇದು ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (ಎಲ್‌ಇಟಿ) ನ ಪ್ರಾಕ್ಸಿ ಕೂಡ ಆಗಿದೆ ಅಂತ ಅಮೆರಿಕ ಹೇಳಿದೆ. ಯುಎನ್‌ಎಸ್‌ಸಿ ಹೇಳಿಕೆಯಲ್ಲಿ ಟಿಆರ್‌ಎಫ್ ಉಲ್ಲೇಖವನ್ನು ನಾವು ವಿರೋಧಿಸುತ್ತೇವೆ. ಪಾಕಿಸ್ತಾನ ಇದನ್ನ ಒಪ್ಪುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಟೇಕಾಫ್ ಆಗಿ 16 ನಿಮಿಷಕ್ಕೆ ಲ್ಯಾಂಡ್ ಆಯ್ತು ಏರ್ ಇಂಡಿಯಾ ವಿಮಾನ
ಟಿಆರ್‌ಎಫ್ ಅನ್ನು ಅಕ್ರಮವೆಂದು ನಾವು ಪರಿಗಣಿಸಲ್ಲ, ಪಹಲ್ಗಾಮ್ ದಾಳಿಯನ್ನ ಅವರೇ ನಡೆಸಿದ್ದಾರೆ ಎಂಬುದಕ್ಕೆ ಸಾಕ್ಷಿ ತೋರಿಸಿ ಅಂತಲೂ ಹೇಳಿದ್ದಾರೆ. ಇದನ್ನೂ ಓದಿ: ಪಾಟ್ನಾ ಆಸ್ಪತ್ರೆಯಲ್ಲಿ ಐಸಿಯುಗೆ ನುಗ್ಗಿ ಗ್ಯಾಂಗ್‌ಸ್ಟರ್ ಹತ್ಯೆ – ಐವರು ಆರೋಪಿಗಳು ಕೋಲ್ಕತ್ತಾದಲ್ಲಿ ಅರೆಸ್ಟ್