ಬೆಂಗಳೂರು: ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಶೋರೂಂಗೆ ಬೆಂಕಿ ಹೊತ್ತಿಕೊಂಡು 13 ಎಲೆಕ್ಟ್ರಿಕ್ ಬೈಕ್ ಸುಟ್ಟು ಭಸ್ಮವಾಗಿರುವ ಘಟನೆ ಕೆ.ಆರ್ ಪುರದ (KR Pura) ಟಿ.ಸಿ ಪಾಳ್ಯ (TC Palya Signal) ಸಿಗ್ನಲ್ ಬಳಿ ನಡೆದಿದೆ.
ಬುಧವಾರ (ಜ.21) ರಾತ್ರಿ 9:30ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಬೆಂಕಿ ಹೊತ್ತಿಕೊಳ್ತಿದ್ದಂತೆಯೇ ಶೋರೂಂ ಸಿಬ್ಬಂದಿ ಓಡಿ ಹೊರಬಂದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿ ಕೆನ್ನಾಲಿಗೆಗೆ ಸಿಲುಕಿ ಶೋರೂಂನಲ್ಲಿದ್ದ 13 ಎಲೆಕ್ಟ್ರಿಕ್ ಬೈಕ್‌ಗಳು ಸುಟ್ಟು ಕರಕಲಾಗಿವೆ. ಇದನ್ನೂ ಓದಿ: ಆಂಧ್ರದಲ್ಲಿ ಮತ್ತೊಂದು ಬಸ್ ದುರಂತ – ಮೂವರು ಸಜೀವ ದಹನ; ಬಸ್, ಕಂಟೈನರ್ ಧಗಧಗ
ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರೋ ಶಂಕೆ ವ್ಯಕ್ತವಾಗಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಸಂಪೂರ್ಣವಾಗಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

