Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈಸೂರು ದಸರಾ ಮಾದರಿಯಲ್ಲಿ ನಂದಿ ಗಿರಿಧಾಮದಲ್ಲಿ ಶಿವೋತ್ಸವ: ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಮೈಸೂರು ದಸರಾ ಮಾದರಿಯಲ್ಲಿ ನಂದಿ ಗಿರಿಧಾಮದಲ್ಲಿ ಶಿವೋತ್ಸವ: ಸುಧಾಕರ್

Chikkaballapur

ಮೈಸೂರು ದಸರಾ ಮಾದರಿಯಲ್ಲಿ ನಂದಿ ಗಿರಿಧಾಮದಲ್ಲಿ ಶಿವೋತ್ಸವ: ಸುಧಾಕರ್

Public TV
Last updated: February 26, 2022 5:48 pm
Public TV
Share
3 Min Read
SUDHKAR
SHARE

ಚಿಕ್ಕಬಳ್ಳಾಪುರ: ಸಾವಿರ ವರ್ಷಗಳ ಇತಿಹಾಸ ಹೊಂದಿರುವ ನಂದಿ ಗಿರಿಧಾಮದ ಭೋಗನಂದೀಶ್ವರ ದೇವಾಲಯದಲ್ಲಿ ಈ ವರ್ಷದಿಂದ ಮೈಸೂರು ದಸರಾ ರೀತಿಯಲ್ಲೇ ಶಿವೋತ್ಸವ ನಡೆಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ckb

ಚಿಕ್ಕಬಳ್ಳಾಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಒಂದು ರಾಜ್ಯ ಹಲವು ಜಗತ್ತು ಎಂದು ಬಣ್ಣಿಸಲಾಗುತ್ತಿದೆ. ಅದೇ ರೀತಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯೂ ಒಂದು ಜಿಲ್ಲೆ, ಹಲವು ಜಗತ್ತು. ಪ್ರವಾಸಿ ತಾಣ, ದೇವಾಲಯ, ನದಿ, ಸರೋವರಗಳ ಜೊತೆ ಐತಿಹಾಸಿಕ ಸ್ಥಳಗಳು ಕೂಡ ಚಿಕ್ಕಬಳ್ಳಾಪುರದಲ್ಲಿವೆ. ನಂದಿ ಬೆಟ್ಟದಲ್ಲಿರುವ ಭೋಗನಂದೀಶ್ವರ ದೇವಸ್ಥಾನ ತನ್ನದೇ ಆದ ವಿಶಿಷ್ಠ ಪ್ರಾಮುಖ್ಯತೆ ಪಡೆದಿದೆ ಎಂದು ಹೇಳಿದರು. ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ ಹೆಸರಲ್ಲಿ ಕಾಂಗ್ರೆಸ್ ರಾಜಕೀಯವಾಗಿ ದುರ್ಬಳಕೆ : ಡಾ.ಕೆ.ಸುಧಾಕರ್

ಮಹಾಶಿವರಾತ್ರಿ ದಿನ ನಂದೀ ಕ್ಷೇತ್ರದಲ್ಲಿ ವಿಭಿನ್ನ ಮತ್ತು ವೈಭವದ ಶಿವೋತ್ಸವ ಆಚರಿಸಲು ತೀರ್ಮಾನ ಮಾಡಲಾಗಿದೆ. ಇಡೀ ಜಿಲ್ಲೆಯ ಹಾಗೂ ನಾಡಿನ ಜನತೆಗೆ ಶಿವನ ಅನುಗ್ರಹ ಸಿಗಬೇಕು ಅನ್ನುವ ಆಶಯದಿಂದ ಈ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಭೋಗನಂದೀಶ್ವರ ದೇವಾಲಯ ಪ್ರಾಚೀನ ದೇವಾಲಯ. ಈ ಕ್ಷೇತ್ರ, ಕದಂಬರು, ಚೋಳರು, ಹೊಯ್ಸಳರು, ವಿಜಯನಗರದ ಆಳ್ವಿಕೆಯನ್ನು ಕೂಡ ಕಂಡಿದೆ. ಈ ಬಾರಿ ಜಿಲ್ಲಾಡಳಿತದ ಸಹಕಾರದಿಂದ ಶಿವೋತ್ಸವ ನಡೆಸಲಾಗುತ್ತದೆ. ಮುಂದಿನ ವರ್ಷದಿಂದ ಸರ್ಕಾರವೇ ಇದರ ನಿರ್ವಹಣೆ ಮಾಡಲಿದೆ ಎಂದರು.

ರಾಜ್ಯದಲ್ಲಿ ಮೈಸೂರು ಚಾಮುಂಡೇಶ್ವರಿ ಕ್ಷೇತ್ರವು ದಸರಾ ಆಚರಣೆಗೆ ಪ್ರಸಿದ್ಧಿ ಹೊಂದಿದ್ದರೆ, ಹಂಪಿ ಕೂಡ ಹಂಪಿ ಉತ್ಸವಕ್ಕೆ ಜನಪ್ರಿಯತೆ ಪಡೆದಿದೆ. ಬೆಂಗಳೂರಿನಲ್ಲಿ ಕರಗ ಉತ್ಸವ ವಿಶ್ವಖ್ಯಾತಿ ಪಡೆದಿದೆ. ಈ ವರ್ಷದಿಂದ ಆರಂಭವಾಗುವ ಶಿವೋತ್ಸವ ಕೂಡ ಇದೇ ರೀತಿಯ ಖ್ಯಾತಿಯನ್ನು ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

SUDHAKAR METTING

ಈ ಬಾರಿಯ ಶಿವೋತ್ಸವಕ್ಕೆ ಥಾವರ್ ಚಾಂದ್ ಗೆಹ್ಲೋಟ್, ಚಾಲನೆ ಕೊಡಲಿದ್ದಾರೆ. ಮುಖ್ಯಮಂತ್ರಿಗಳಿಗೆ ಕೂಡ ಆಹ್ವಾನ ನೀಡಲಾಗಿದೆ. ಅನೇಕ ಸಂತರು, ಗುರುಗಳು ಇದರಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ಸಿರಿಗೆರೆಯ ಮಹಾಸ್ವಾಮಿಗಳು, ಸತ್ಯ ಸಾಯಿ ಸಂಸ್ಥೆಯ ಮಧುಸೂದನ್ ಗುರುಗಳು ಕೂಡ ಶಿವೋತ್ಸವಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ:  ಪೋಷಕರನ್ನು ಕಳೆದುಕೊಂಡು ನಡುಬೀದಿಯಲ್ಲೇ ಬಾಲಕನ ಆಕ್ರಂದನ

ಮಾರ್ಚ 1ರ ಸಂಜೆ 6 ಗಂಟೆಗೆ ಆರಂಭವಾಗಿ, ಬೆಳಗ್ಗೆ ರಥೋತ್ಸವ ನಡೆಯುವ ತನಕ ನಿರಂತರವಾಗಿ ಸಾಂಸ್ಕೃತಿಕ, ಭಕ್ತಿ ಹಾಗೂ ಜಾಗರಣೆ ಕಾರ್ಯಕ್ರಮಗಳು ನಡೆಯಲಿವೆ. ರಾಷ್ಟ್ರೀಯ ಮಟ್ಟದ ಸಂಗೀತ, ನಾಟ್ಯ ಕಲಾವಿದರು, ಚಿತ್ರ ತಾರೆಯರು ಕೂಡ ಇದರಲ್ಲಿ ಭಾಗಿಯಾಗಲಿದ್ದಾರೆ. ಸುಮಾರು 25 ಹೆಸರಾಂತ ವಿವಿಧ ತಂಡಗಳು ಭಾಗವಹಿಸಲಿವೆ. ನಗೆ ಹಬ್ಬ ಕೂಡ ಇರಲಿದೆ. ಜಾನಪದ ಕಲೆಗಳು, ಭರತ ನಾಟ್ಯ ಕೂಡ ಆಕರ್ಷಣೆಯಾಗಿರಲಿದೆ. ಮಧ್ಯಾಹ್ನ 1 ಗಂಟೆಯಿಂದ ಹಿಡಿದು, ಮುಂದಿನ ದಿನ ರಥೋತ್ಸವ ಆಗುವ ತನಕ ನಿರಂತರ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಹೇಳಿದರು.

ಮಹಾಶಿವರಾತ್ರಿ ಪ್ರಯುಕ್ತ ಚಿಕ್ಕಬಳ್ಳಾಪುರದ ನಂದಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿರುವ 'ನಂದಿ ಶಿವೋತ್ಸವ'ದ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳಲಾಯಿತು.

ನಂತರ ಸಿದ್ಧತೆಗಳನ್ನು ಪರಿಶೀಲಿಸಲು ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಾಯಿತು. ಜಿಲ್ಲಾಧಿಕಾರಿ, ಎಸ್ ಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. pic.twitter.com/jFchs8nuf9

— Dr Sudhakar K (@DrSudhakar_) February 26, 2022

ದೀಪಾಲಂಕಾರ:
ನಂದಿ ಬೆಟ್ಟದಲ್ಲಿ ದೀಪಾಲಂಕಾರ ಮಾಡಲಾಗುತ್ತದೆ. ಬೆಟ್ಟದಲ್ಲಿ ಲೇಸರ್ ಶೋ ಇರಲಿದೆ. ಸುಮಾರು 2 ಲಕ್ಷ ಜನರು ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. 20 ರಿಂದ 25 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದೆ. 3 ಸಾವಿರ ಫೋರ್‌ ವಿಲರ್‌ಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. 5 ಸಾವಿರ ದ್ವಿಚಕ್ರವಾಹನಗಳ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗುವುದು. ಊಟದ ವ್ಯವಸ್ಥೆಗೆ 25 ರಿಂದ 30 ಕೌಂಟರ್ 24 ಗಂಟೆಯೂ ಕಾರ್ಯನಿರ್ವಹಿಸಲಿದೆ ಎಂದು ಸಚಿವರು ವಿವರಿಸಿದರು.

ದೇವಾಸ್ಥಾನದ ಆವರಣದಲ್ಲಿ 25 ರಿಂದ 40 ಮಳಿಗೆಗಳು ಸ್ಥಳೀಯ ವಸ್ತುಗಳ ಪ್ರದರ್ಶನಕ್ಕೆ ಸೀಮಿತವಾಗಿರಲಿದೆ. ಜಿಲ್ಲೆಯ ವಿಶೇಷತೆಗಳನ್ನು ಇಲ್ಲಿ ಪ್ರದರ್ಶನಕ್ಕೆ ಇಡಲಾಗುವುದು ಎಂದರು.‌

Mekedatu Padyatra DK Shivakumar Siddaramaiah

ಕಾಂಗ್ರೆಸ್ ರಾಜಕೀಯ:
ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆ ರಾಜಕೀಯ ಉದ್ದೇಶ ಮತ್ತು ದುರ್ಬಳಕೆಯಾಗಿದೆ. ಅಧಿಕಾರದಲ್ಲಿದ್ದ 7 ವರ್ಷಗಳಲ್ಲಿ ಯೋಜನೆ ಮಾಡಿ ಮುಗಿಸಬಹುದಿತ್ತು. ಆದರೆ ಆ ಪಕ್ಷಕ್ಕೆ ಬದ್ಧತೆ ಇಲ್ಲ, ಜನರು ಮೂರ್ಖರಲ್ಲ. ಡಿಪಿಆರ್ ಮಾಡಲು ಕೇವಲ 3 ತಿಂಗಳು ಸಾಕು. ಆದರೆ 7 ವರ್ಷ ಕಾಲ ಹರಣ ಮಾಡಿ ಈಗ ಮೇಕೆದಾಟು ಯೋಜನೆ ಬಗ್ಗೆ ಹೋರಾಟ ಮಾಡುವ ನಾಟಕ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಭಯ ಬೇಡ:
ಉಕ್ರೇನ್ ಮತ್ತು ರಷ್ಯಾ ನಡುವೆ ಯುದ್ಧ ನಡೆಯುತ್ತಿದೆ. ರಾಜ್ಯದ ಹಲವು ವಿದ್ಯಾರ್ಥಿಗಳು ಅಲ್ಲಿದ್ದಾರೆ. ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಹಾಗೂ ವಿದೇಶಾಂಗ ಇಲಾಖೆ ಜೊತೆ ಸಂಪರ್ಕದಲ್ಲಿದ್ದಾರೆ. ವಿದ್ಯಾರ್ಥಿಗಳು ತಾವೇ ನಿರ್ಧಾರ ಮಾಡಿಕೊಂಡು ಬೇರೆ ದೇಶದ ಗಡಿಗಳಿಗೆ ಬರಬಾರದು. ಸರ್ಕಾರದ ಮಾರ್ಗಸೂಚಿಯಂತೆ ಮುಂದುವರಿಯಬೇಕು. ಎಲ್ಲರೂ ಸುರಕ್ಷಿತವಾಗಿದ್ದಾರೆ. ಅವರನ್ನು ಶೀಘ್ರದಲ್ಲೇ ತವರಿಗೆ ಕರೆ ತರಲಾಗುವುದು ಎಂದು ಹೇಳಿದರು.

TAGGED:dr. k sudhakarShree Bhoga And Yoga Nandeeshwara Swamy Temple Chikkaballapurಡಾ ಕೆ ಸುಧಾಕರ್ಶಿವೋತ್ಸವ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
1 hour ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
2 hours ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
2 hours ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
3 hours ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
4 hours ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?