ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಡನ್ ಸ್ಟಾರ್ ಗಣೇಶ್ (Goldan Star Ganesh) ನಾಯಕರಾಗಿ ನಟಿಸಿರುವ, ಸಮೃದ್ಧಿ ವಿ ಮಂಜುನಾಥ್ ಅವರ ಅದ್ದೂರಿ ನಿರ್ಮಾಣದ ಹಾಗೂ ಶ್ರೀನಿವಾಸರಾಜು ನಿರ್ದೇಶನದ ಬಹು ನಿರೀಕ್ಷಿತ ʻಬೃಂದಾವಿಹಾರಿʼ ಚಿತ್ರದ ನಾದನಿನಾದ ಹಾಡು ಬಿಡುಗಡೆಯಾಗಿದೆ.
ವಿ.ನಾಗೇಂದ್ರಪ್ರಸಾದ್ ಬರೆದಿರುವ ಈ ಹಾಡನ್ನು ಹೆಸರಾಂತ ಗಾಯಕಿ ಶ್ರೇಯಾ ಘೋಷಾಲ್ ಹಾಡಿದ್ದಾರೆ. ಹೇಶಮ್ ಅಬ್ದುಲ್ ವಹಾಬ್ ಸಂಗೀತ ಸಂಯೋಜಿಸಿರುವ ಈ ಹಾಡಿಗೆ ಬಿಡುಗಡೆಯಾದ ಕ್ಷಣದಿಂದಲೇ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಹಾಡುಗಳು ಸೂಪರ್ ಹಿಟ್ ಆಗಿವೆ.
ಗಣೇಶ್ ಹಾಗೂ ಶ್ರೀನಿವಾಸರಾಜು ಅವರ ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ʻಕೃಷ್ಣಂ ಪ್ರಣಯ ಸಖಿʼ ಚಿತ್ರ ಭರ್ಜರಿ ಯಶಸ್ಸು ಕಂಡಿತ್ತು. ಆ ಚಿತ್ರದ ನಂತರ ಇವರಿಬ್ಬರ ಕಾಂಬಿನೇಷನ್‌ನಲ್ಲಿ ಬರುತ್ತಿರುವ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಸದಭಿರುಚಿಯ ಚಿತ್ರಗಳ ನಿರ್ಮಾಪಕ ಸಮೃದ್ಧಿ ಮಂಜುನಾಥ್ ಅವರು ಯಾವುದೇ ಕೊರತೆ ಬಾರದ ಹಾಗೆ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಗಣೇಶ್ ಅವರ ಅಭಿಮಾನಿಗಳು ಚಿತ್ರ ಬಿಡುಗಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಇದನ್ನೂ ಓದಿ: ಚಂದ್ರು ನಿರ್ದೇಶನದ ಪ್ಯಾನ್ ಇಂಡಿಯಾ ಚಿತ್ರಕ್ಕೆ ಅದ್ಧೂರಿ ಮುಹೂರ್ತ
ಹೇಶಮ್ ಅಬ್ದುಲ್ ವಹಾಬ್ ಸಂಗೀತ ನಿರ್ದೇಶನ ಹಾಗೂ ವೆಂಕಟ್ ಪ್ರಸಾದ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಗಣೇಶ್ ಅವರಿಗೆ ನಾಯಕಿಯರಾಗಿ ದೇವಿಕಾ ಭಟ್ ಹಾಗೂ ಮಾಳವಿಕ ಶರ್ಮ ಅಭಿನಯಿಸಿದ್ದಾರೆ.ಇದನ್ನೂ ಓದಿ: ವಜ್ರ ಮುಚ್ಚಿಟ್ಟುಕೊಂಡು ಸ್ಪರ್ಧಿಗಳನ್ನ ಆಟವಾಡಿಸಿದ ಗಗನ್ ಚಿನ್ನಪ್ಪ
