SportsCricketLatestMain Post

ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ದಾಖಲೆಯ ಶತಕ ಸಿಡಿಸಿದ ಶ್ರೇಯಸ್ ಅಯ್ಯರ್

ಲಕ್ನೋ: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಟೆಸ್ಟ್ ಪಂದ್ಯದಲ್ಲಿ ಭಾರತದ ಬ್ಯಾಟ್ಸ್‌ಮ್ಯಾನ್‌ ಶ್ರೇಯಸ್ ಅಯ್ಯರ್ ತನ್ನ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ಸಿಡಿಸಿ ಮಿಂಚಿದ್ದಾರೆ.

ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ದಾಖಲೆಯ ಶತಕ ಸಿಡಿಸಿದ ಶ್ರೇಯಸ್ ಅಯ್ಯರ್

ಶ್ರೇಯಸ್ ಅಯ್ಯರ್ ಟೀಂ ಇಂಡಿಯಾ ಪರ ನಿಗದಿತ ಓವರ್‌ಗಳ ತಂಡದಲ್ಲಿ ಈಗಾಗಲೇ ಆಡಿದ್ದಾರೆ. ಇದೀಗ ಟೆಸ್ಟ್ ತಂಡಕ್ಕೂ ಪಾದಾರ್ಪಣೆ ಮಾಡಿ ಮೊದಲ ಪಂದ್ಯದಲ್ಲೇ ಶತಕ ಸಿಡಿಸಿ, ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ಸಿಡಿಸಿದ ಭಾರತದ 16ನೇ ಆಟಗಾರ ಎಂಬ ದಾಖಲೆ ಬರೆದಿದ್ದಾರೆ. ಇದನ್ನೂ ಓದಿ: 4 ವರ್ಷದಿಂದಲೂ ಒಂದೇ ವಾಟ್ಸಪ್ ಡಿಪಿ – ಶ್ರೇಯಸ್ ಅಯ್ಯರ್ ತಂದೆಯ ಕನಸು ಕೊನೆಗೂ ನನಸು

ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ದಾಖಲೆಯ ಶತಕ ಸಿಡಿಸಿದ ಶ್ರೇಯಸ್ ಅಯ್ಯರ್

ಅಯ್ಯರ್ ನ್ಯೂಜಿಲೆಂಡ್ ವಿರುದ್ಧ 105 ರನ್ (171 ಎಸೆತ, 13 ಬೌಂಡರಿ, 2 ಸಿಕ್ಸ್) ಸಿಡಿಸಿ ಔಟ್ ಆದರು. ಈ ಮೂಲಕ ಟೆಸ್ಟ್ ಕ್ರಿಕೆಟ್‍ನಲ್ಲಿ ಮೊಟ್ಟ ಮೊದಲು ಪಂದ್ಯದಲ್ಲೇ ಶತಕ ಸಿಡಿಸಿದ ಶಿಖರ್ ಧವನ್, ರೋಹಿತ್ ಶರ್ಮಾ, ಪೃಥ್ವಿ ಶಾ ಸೇರಿ 16 ಮಂದಿ ಕ್ರಿಕೆಟಿಗರ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ. ಅಷ್ಟೇ ಅಲ್ಲದೆ 5ನೇ ಕ್ರಮಾಂಕದಲ್ಲಿ ಶತಕ ಸಿಡಿಸಿದ ಮೂರನೇ ಆಟಗಾರ ಎಂಬ ಹೆಗ್ಗಳಿಕೆಗೂ ಅಯ್ಯರ್ ಪಾತ್ರರಾದರು. ಈ ಮೊದಲು ಭಾರತ ತಂಡದ ಪರ ಮೂರನೇ ಕ್ರಮಾಂಕದಲ್ಲಿ ಅಜಿಂಕ್ಯ ರಹಾನೆ ಮತ್ತು ಕರಣ್ ನಾಯರ್ ಶತಕ ಸಿಡಿಸಿ ಮಿಂಚಿದ್ದಾರೆ. ಇದನ್ನೂ ಓದಿ: ಐಪಿಎಲ್‍ನಲ್ಲಿ ಧೋನಿ CSK ಪರ ಆಡುವುದು ಕನ್ಫರ್ಮ್ – ರೈನಾ ಡೌಟ್?

Related Articles

Leave a Reply

Your email address will not be published. Required fields are marked *