ಕಳೆದ 47 ವರ್ಷಗಳಿಂದ ಕನ್ನಡ ಚಿತ್ರರಂಗ ಮತ್ತು ಮಾಧ್ಯಮದ ನಡುವೆ ಸೇತುವೆಯಂತೆ ಕಾರ್ಯನಿರ್ವಹಿಸುತ್ತಾ ಬಂದಿರುವುದು ಶ್ರೀ ರಾಘವೇಂದ್ರ ಚಿತ್ರವಾಣಿ (Raghavendra Chitravani) ಸಂಸ್ಥೆ. ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದಿವಂಗತ ಡಿ.ವಿ.ಸುಧೀಂದ್ರ ಅವರಿಂದ ಸ್ಥಾಪಿಸಲ್ಪಟ್ಟ ಈ ಸಂಸ್ಥೆಗೆ 25 ವರ್ಷ ತುಂಬಿದ ಸಂದರ್ಭದಲ್ಲಿ, ಈ ಸುಧೀರ್ಘ ಯಾನಕ್ಕೆ ಕಾರಣಕರ್ತರಾಗಿದ್ದ ನಿರ್ಮಾಪಕರು ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡಿ ಗೌರವಿಸುವ ಪರಿಪಾಠವನ್ನು ಆರಂಭಿಸಿದ್ದರು. ಕೇವಲ ಎರಡು ಪ್ರಶಸ್ತಿಗಳಿಂದ ಪ್ರಾರಂಭವಾದ ಈ ಸಮಾರಂಭಕ್ಕೆ ಆಗಮಿಸಿದ ಗಣ್ಯರು, ನಮ್ಮ ಸಂಸ್ಥೆಯ ಮೂಲಕ ಪ್ರಶಸ್ತಿ ಪ್ರದಾನ ಮಾಡಲು ಮುಂದಾಗಿದ್ದರು. ಹೀಗೆ ಆರಂಭವಾದ ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲೀಗ 11 ಪ್ರಶಸ್ತಿಗಳಿಗೆ ವಿಸ್ತಾರವಾಗಿದೆ. ನಿರ್ಮಾಪಕರು ಮತ್ತು ಪತ್ರಕರ್ತರಿಗೆ ಮಾತ್ರವಲ್ಲದೆ ಕನ್ನಡ ಚಿತ್ರರಂಗಕ್ಕೆ ತಮ್ಮದೇ ರೀತಿಯಲ್ಲಿ ಕೊಡುಗೆಯನ್ನು ನೀಡುತ್ತಿರುವ ಕಲಾವಿದರು ಮತ್ತು ತಂತ್ರಜ್ನರಿಗೆ ಪ್ರಶಸ್ತಿ ನೀಡಲಾಗುತ್ತಿದೆ.
Advertisement
ಕಳೆದ ವರ್ಷ ಕೋವಿಡ್ ಕಾರಣದಿಂದ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿರಲಿಲ್ಲ. ಹಾಗಾಗಿ, ಕಳೆದ ವರ್ಷದ ಶ್ರೀ ರಾಘವೇಂದ್ರ ಚಿತ್ತವಾಣಿ ಪ್ರಶಸ್ತಿಯನ್ನು ಈ ಬಾರಿ ನೀಡಲಾಗುತ್ತಿದೆ. ಸಂಸ್ಥೆಯ ಸ್ಥಾಪಕರಾದ ಶ್ರೀ ಡಿ.ವಿ, ಸುಧೀಂದ್ರ ಅವರ ಜನ್ಮದಿನದಂದು (ಜನವರಿ 25), ಈ ಸಮಾರಂಭವನ್ನು ಚಾಮರಾಜಪೇಟೆಯ ಕನ್ನಡ ಚಲನಚಿತ್ರ ಕಲಾವಿದರ ಸಂಘದಲ್ಲಿ ಸಂಜೆ 5ಕ್ಕೆ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಸಂಸ್ಥೆಯ 47ನೇ ವಾರ್ಷಿಕೋತ್ಸವ ಹಾಗೂ 21 ಮತ್ತು 22ನೇ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಈ ಸಮಾರಂಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್, ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ನಟಿಯರಾದ ರಾಗಿಣಿ, ‘ಎ’ ಖ್ಯಾತಿಯ ಚಾಂದಿನಿ ಸೇರಿದಂತೆ ಕನ್ನಡ ಚಿತ್ರರಂಗದ ಪ್ರಮುಖ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇದನ್ನೂ ಓದಿ: ತಂದೆಯ ಹುಟ್ಟುಹಬ್ಬಕ್ಕೆ ವಿಶೇಷ ಫೋಟೋ ಹಂಚಿಕೊಂಡ ನಟಿ ರಾಧಿಕಾ ಪಂಡಿತ್
Advertisement
Advertisement
21 ಮತ್ತು 22ನೇ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಪ್ರಶಸ್ತಿಗಳ ವಿವರ
Advertisement
2021 ನೇ ಸಾಲಿನ ಪ್ರಶಸ್ತಿ :
ಪಿ. ಧನರಾಜ್, ಹಿರಿಯ ಚಲನಚಿತ್ರ ನಿರ್ಮಾಪಕರು (ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ)
ಈಶ್ಚರ ದೈತೋಟ, ಹಿರಿಯ ಪತ್ರಕರ್ತರು, (ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ)
2022 ನೇ ಸಾಲಿನ ಪ್ರಶಸ್ತಿ :
ಕುಮಾರ್ ಗೋವಿಂದ್, ಹಿರಿಯ ನಟ-ನಿರ್ಮಾಪಕರು (ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ)
ಸದಾಶಿವ ಶೆಣೈ, ಹಿರಿಯ ಪತ್ರಕರ್ತರು ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರು (ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ)
ರಾಜೇಶ್ ಕೃಷ್ಣನ್, ಖ್ಯಾತ ಹಿನ್ನೆಲೆ ಗಾಯಕರು (ಡಾ. ರಾಜಕುಮಾರ್ ಪ್ರಶಸ್ತಿ, ಶ್ರೀಮತಿ ಪಾರ್ವತಮ್ಮ ರಾಜಕುಮಾರ್ ಕುಟುಂಬದವರಿಂದ)
ಸಾಯಿಪ್ರಕಾಶ್, ಹಿರಿಯ ನಿರ್ದೇಶಕರು-ನಿರ್ಮಾಪಕರು (‘ಯಜಮಾನ’ ಚಿತ್ರದ ಖ್ಯಾತಿಯ ಆರ್. ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿ ಶ್ರೀಮತಿ ಭಾರತಿ ವಿಷ್ಣುವರ್ಧನ್ ಅವರಿಂದ)
ತುಳಸಿ, ಹಿರಿಯ ನಟಿ (ಖ್ಯಾತ ಅಭಿನೇತ್ರಿ ಡಾ. ಜಯಮಾಲ ಎಚ್.ಎಂ. ರಾಮಚಂದ್ರ ಪ್ರಶಸ್ತಿ)
ನೋಬಿನ್ ಪಾಲ್, ಅತ್ಯುತ್ತಮ ಸಂಗೀತ ನಿರ್ದೇಶನ, ‘777 ಚಾರ್ಲಿ’ ಚಿತ್ರಕ್ಕಾಗಿ (ಎಂ.ಎಸ್. ರಾಮಯ್ಯ ಮೀಡಿಯಾ ಅಂಡ್ ಎಂಟರ್ಟೈನ್ಮೆಂಟ್ ಪ್ರೈ ಲಿ ಪ್ರಶಸ್ತಿ)
ಮಧುಚಂದ್ರ, ಅತ್ಯುತ್ತಮ ಕಥಾಲೇಖಕರು, ‘ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ’ ಚಿತ್ರಕ್ಕಾಗಿ (ಖ್ಯಾತ ನಿರ್ದೇಶಕ-ನಿರ್ಮಾಪಕ ಶ್ರೀ ಕೆ.ವಿ. ಜಯರಾಂ ಪ್ರಶಸ್ತಿ, ಶ್ರೀಮತಿ ಮೀನಾಕ್ಷಿ ಜಯರಾಂ ಅವರಿಂದ)
ಎಂ.ಜಿ. ಶ್ರೀನಿವಾಸ್ (ಶ್ರೀನಿ) ಅತ್ಯುತ್ತಮ ಸಂಭಾಷಣೆ, ‘ಓಲ್ಡ್ ಮಾಂಕ್’ ಚಿತ್ರಕ್ಕಾಗಿ (ಖ್ಯಾತ ಚಿತ್ರಸಾಹಿತಿ ಶ್ರೀ ಹುಣಸೂರು ಕೃಷ್ಣಮೂರ್ತಿ ಸ್ಮರಣಾರ್ಥ ಪ್ರಶಸ್ತಿ ಡಾ.ಎಚ್.ಕೆ. ನರಹರಿ ಅವರಿಂದ)
ಕಿರಣ್ ರಾಜ್ (‘777 ಚಾರ್ಲಿ’) ಚೊಚ್ಚಲ ಚಿತ್ರದ ನಿರ್ದೇಶನಕ್ಕಾಗಿ (ಹಿರಿತೆರೆ-ಕಿರುತೆರೆ ನಿರ್ದೇಶಕ ಶ್ರೀ ಬಿ. ಸುರೇಶ ಪ್ರಶಸ್ತಿ)
ಪ್ರಮೋದ್ ಮರವಂತೆ, ‘ಕಾಂತಾರ’ ಚಿತ್ರದ ‘ಸಿಂಗಾರ ಸಿರಿಯೇ …’ ಗೀತರಚನೆಗಾಗಿ (ಹಿರಿಯ ಪತ್ರಕರ್ತರಾದ ಶ್ರೀ.ಪಿ.ಜಿ. ಶ್ರೀನಿವಾಸಮೂರ್ತಿ ಅವರ ಸ್ಮರಣಾರ್ಥ ಪ್ರಶಸ್ತಿ ಶ್ರೀ ವಿನಾಯಕರಾಮ್ ಕಲಗಾರು ಅವರಿಂದ)
ಶ್ರೀನಿವಾಸಮೂರ್ತಿ, ಹಿರಿಯ ಪೋಷಕ ಕಲಾವಿದರು (ಹಿರಿಯ ಪತ್ರಕರ್ತ ಸಿ. ಸೀತಾರಾಂ ಸ್ಮರಣಾರ್ಥ ಪ್ರಶಸ್ತಿ, ಶ್ರೀಮತಿ ನಾಗಮಣಿ ಸೀತಾರಾಮ ಕುಟುಂಬದವರಿಂದ)
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k