ಚಿಕ್ಕೋಡಿ: ಕಳಪೆ ಮಟ್ಟದ ರಸ್ತೆಗಳನ್ನ ನಿರ್ಮಿಸುವ ಗುತ್ತಿಗೆದಾರರಿಗೆ ರಸ್ತೆ ನಿರ್ಮಾಣದ ಗುತ್ತಿಗೆ ನೀಡದಂತೆ ಕಾಗವಾಡ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಶ್ರೀಮಂತ್ ಪಾಟೀಲ್ ಸೂಚನೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೆಂಪವಾಡದ ಶಾಸಕರ ಕಚೇರಿಯಲ್ಲಿ ಲೋಕೋಪಯೋಗಿ ಇಲಾಖೆ, ಸಣ್ಣ ನೀರಾವರಿ ಜಿಲ್ಲಾ ಪಂಚಾಯತ್ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ರಸ್ತೆ ಸುಧಾರಣೆ ವಿಷಯದಲ್ಲಿ ಗುತ್ತಿಗೆದಾರರು ಜಾಗೃತೆಯಿಂದ ಗುಣಮಟ್ಟದ ರಸ್ತೆಗಳನ್ನ ನಿರ್ಮಿಸಬೇಕು. ಕಳಪೆ ಕಾಮಗಾರಿ ಆದಲ್ಲಿ ಅಂಥ ಗುತ್ತಿಗೆದಾರರ ಬಿಲ್ ತಡೆ ಹಿಡಿಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೇ ಕ್ಷೇತ್ರದಲ್ಲಿನ ರಸ್ತೆ, ನೀರಾವರಿ ಹಾಗೂ ಮತ್ತಿತರ ವಿಷಯಗಳಿಗೆ ಸಂಬಂಧಪಟ್ಟ ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ. ಇದನ್ನೂ ಓದಿ: ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ
Advertisement
Advertisement
ಈ ಸಮಯದಲ್ಲಿ ಜಿಲ್ಲಾ ಪಂಚಾಯತ್ ಇಲಾಖೆಯ ಅಧಿಕಾರಿಗಳಾದ ವೀರಣ್ಣ ವಾಲಿ, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಾದ ಎಸ್ ಎಸ್ ಮಕಾಣಿ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಾದ ಜೆ ಎ ಹಿರೇಮಠ, ಮಲ್ಲಿಕಾರ್ಜುನ ಮಗದುಮ ಸೇರಿದಂತೆ ಮತ್ತಿತರ ಇಲಾಖೆ ಅಧಿಕಾರಿಗಳು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು. ಇದನ್ನೂ ಓದಿ: ಅಪ್ಪು ಸಮಾಧಿಗೆ ಮಂಡಕ್ಕಿ ಹಾರ ಮಾಡಿಕೊಂಡು ಬಂದ ವೃದ್ಧೆ
Advertisement
Advertisement