ಚಿಕ್ಕೋಡಿ: ನೀರಾವರಿಯ ಜೊತೆಗೆ ಕಾಗವಾಡ ಮತ ಕ್ಷೇತ್ರದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದು, ಶಿಕ್ಷಣದ ಗುಣಮಟ್ಟದಲ್ಲಿ ಯಾವುದೇ ಕೊರತೆ ಆಗಲು ಬಿಡುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಕಾಗವಾಡ ಕ್ಷೇತ್ರದ ಶಾಸಕ ಶ್ರೀಮಂತ ಪಾಟೀಲ್ ಹೇಳಿದ್ದಾರೆ.
Advertisement
ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಲೋಕೂರ ಗ್ರಾಮದಲ್ಲಿ ಸರ್ಕಾರಿ ಶಾಲೆಯ ನೂತನ ಕೊಠಡಿಗಳನ್ನ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಶಿಕ್ಷಣದ ಗಯಣಮಟ್ಟದಲ್ಲಿ ಯಾವುದೇ ಕೊರತೆ ಆಗಬಾರದು. ಕ್ಷೇತ್ರದಲ್ಲಿ ಸಮರ್ಪಕ ಕೊಠಡಿಗಳ ನಿರ್ಮಾಣಕ್ಕೆ ಒತ್ತು ಕೊಡಲಾಗಿದ್ದು ಎಲ್ಲೆ ಕೊಠಡಿಗಳ ಸಮಸ್ಯೆ ಇದ್ದರೂ ಬಗೆಹರಿಸುವ ಕಾರ್ಯವನ್ನ ಮಾಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಸಣ್ಣ ಪ್ರಮಾಣದ ಡ್ರಗ್ಸ್ ಸೇವಿಸಿದವರಿಗೆ ಜೈಲು ಶಿಕ್ಷೆ ಬೇಡ!
Advertisement
Advertisement
ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯದ ಜೊತೆಗೆ ಶುದ್ಧ ಕುಡಿಯುವ ನೀರು ಪೂರೈಸಲು ಪ್ರತಿ ಶಾಲೆಯಲ್ಲಿ ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಕ್ಷೇತ್ರದ ಜನರು ಯಾವುದೇ ಸಮಸ್ಯೆ ಇದ್ದರೂ ನನ್ನ ಬಳಿ ಬಂದರೇ ಪಕ್ಷ, ಜಾತಿ ಬೇಧ ಮರೆತು ಕಾರ್ಯ ನಿರ್ವಹಿಸುವದಾಗಿ ಹೇಳಿದು. ಈ ಸಂದರ್ಭದಲ್ಲಿ ಕಾಗವಾಡ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಮ್.ಆರ್ ಮುಂಜೆ, ತಾಲೂಕು ಪಂಚಾಯತ್ ಸದಸ್ಯ ಸುಧಾಕರ ಭಗತ್, ದಶರಥ ಚವ್ಹಾಣ, ರಾಜಾರಾಮ್ ಗಡಗೆ, ರಶೀದ್ ತಾಂಬೋಳಿ, ಮುಖಂಡರು ಗ್ರಾಮ ಪಂಚಾಯತ್ ಸದಸ್ಯರು, ಶಾಲೆಯ ಆಡಳಿತ ಮಂಡಳಿಯವರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ದಂಪತಿಯ ಹನಿ ಟ್ರ್ಯಾಪ್ ಬಲೆಗೆ ಬಿದ್ದ 300 ಮಂದಿ- ಒಂದೇ ವರ್ಷದಲ್ಲಿ 20 ಕೋಟಿ ಸುಲಿಗೆ!