ಧಾರವಾಡ: ರಾಷ್ಟ್ರೀಯ ಪಕ್ಷಗಳ ಮುಖಂಡರಾದ ಅಮಿತ್ ಶಾ ಹಾಗೂ ರಾಹುಲ್ ಗಾಂಧಿ ಪಕ್ಷ ಬೆಳವಣಿಗೆ ಬಗ್ಗೆ ಮಾತ್ರ ಪ್ರವಾಸ ಮಾಡುತ್ತಿದ್ದು, ಮಹದಾಯಿ ಬಗ್ಗೆ ಚಕಾರ ಎತ್ತಿಲ್ಲ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲ ಬಂದಿದೆ. ರೈತರಿಗೆ ನೀರಿನ ಹಾಹಾಕಾರ ಎದುರಾಗಿದೆ. ಮಹದಾಯಿ ನೀರಿನ ಸಮಸ್ಯೆ ಇದ್ದರೂ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಅಧಿಕಾರ ಮುಖ್ಯವಾಗಿದೆ ಎಂದರು.
Advertisement
ರೈತರಿಗೆ ಬೇಕಾದ ನೀರಿನ ವಿಷಯ ಎತ್ತುತ್ತಿಲ್ಲ. ಮಹದಾಯಿ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಗೋವಾ ಸಿಎಂ ನಿರ್ಲಜ್ಜ ಸಿಎಂ ಎಂದು ಕಿಡಿಕಾರಿದರು. ಚುನಾವಣೆಯಲ್ಲಿ ರಾಜಕೀಯ ಮಾಡದೇ, ರಾಜ್ಯದ ರೈತರ ಹಾಹಾಕಾರ ಇದೆ. ಅದಕ್ಕೆ ಪರಿಹಾರ ಕೊಡುವ ಕೆಲಸವನ್ನು ಅಮಿತ್ ಶಾ ಮಾಡಬೇಕು ಎಂದು ತಿಳಿಸಿದರು.
Advertisement
ನಾನೀಗಾಗಲೇ ಅಮಿತ್ ಶಾ ಅವರಿಗೆ ಪತ್ರ ಬರೆದು ಮಹದಾಯಿ ಬಗ್ಗೆ ಉಲ್ಲೇಖ ಮಾಡಿದ್ದೇನೆ. ಕಾಂಗ್ರೆಸ್‍ನ ರಾಹುಲ್ ಗಾಂಧಿ ಕೂಡಾ ರಾಜ್ಯದ ಜನರಿಗೆ ದ್ರೋಹ ಮಾಡುತ್ತಿದ್ದಾರೆ. ಎರಡು ವರ್ಷದಿಂದ ಪ್ರತಿಭಟನೆ ನಡೆಯುತ್ತಿದ್ದರೂ ಯಾವುದೇ ಪ್ರತಿಕ್ರಿಯೇ ಇಲ್ಲ. ರೈತರ ಮೇಲೆ ಕೇಸ್ ಹಾಕಿದ್ರೂ ಜನ ಛೀ.. ಥೂ.. ಅಂದರೂ ಸಮಸ್ಯೆ ಮಾತ್ರ ಸರಿಯಾಗುತ್ತಿಲ್ಲ. ಸೋನಿಯಾ ಗಾಂಧಿ ಅವರು ಕೂಡಾ ಮಹದಾಯಿ ಜೋಡಿಸುವ ವಿಚಾರದಲ್ಲಿ ಮೌನವಾಗಿದ್ದಾರೆ. ಬಿಜೆಪಿಗೆ ಜನರು ಅಧಿಕಾರ ಕೊಟ್ಟಿದ್ದಾರೆ. ಆದರೆ ಪರಿಸ್ಥಿತಿ ಹೀಗೆಯೇ ಮುಂದುವರೆಸಿದರೆ ಕೇಂದ್ರ ಸರ್ಕಾರದಲ್ಲಿ ಸೋನಿಯಾ ಗಾಂಧಿಗೆ ಆದ ಸ್ಥಿತಿ ನಿಮಗೂ ಆಗುತ್ತೆ ಎಂದು ಎಚ್ಚರಿಕೆ ನೀಡಿದರು.
Advertisement
ನಾಲ್ಕು ಜಿಲ್ಲೆಯ ಜನರು ಚುನಾವಣೆಗೆ ಬಹಿಷ್ಕಾರ ಹಾಕಬೇಕು. ನೀರು ತಂದು ಕೊಟ್ಟವರಿಗೆ ಓಟು ಹಾಕುವ ಕೆಲಸ ಆಗಬೇಕು. ನಿರ್ಗಮಿತ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು ದೇಶದಲ್ಲಿ ಮುಸ್ಲಿಮರು ಅಸುರಕ್ಷಿತ ಎಂದು ಹೇಳಿದ್ದಾರೆ. ಎರಡು ಬಾರಿ ನೀವು ಹಿಂದೂ ಸುರಕ್ಷತೆಯಲ್ಲಿ ಉಪರಾಷ್ಟ್ರಪತಿಯಾಗಿದ್ದೀರಿ. ಹೀಗಾಗಿ ಈ ರೀತಿ ಹೇಳಿಕೆ ನೀಡಿರುವುದು ಮೂರ್ಖತನವಾಗಿದೆ ಎಂದು ಹೇಳಿದರು.