ʻದೇವರ’ ಸಿನಿಮಾ ಬಳಿಕ ಪ್ರಶಾಂತ್ ನೀಲ್ (Prashanth Neel) ನಿರ್ದೇಶನದ ಸಿನಿಮಾದಲ್ಲಿ ಜ್ಯೂ.ಎನ್‌ಟಿಆರ್ (Jr.NTR) ಬ್ಯುಸಿಯಾಗಿದ್ದಾರೆ. ಇದೀಗ ಈ ಚಿತ್ರದ ಹೊಸ ವಿಚಾರವೊಂದು ಚರ್ಚೆಗೆ ಗ್ರಾಸವಾಗಿದೆ. ಈ ಚಿತ್ರದಲ್ಲಿ ಶ್ರುತಿ ಹಾಸನ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾದ ಸುದ್ದಿಯೊಂದು ಹರಿದಾಡುತ್ತಿದೆ. ಇದನ್ನೂ ಓದಿ:ಪಹಲ್ಗಾಮ್ ಉಗ್ರರ ದಾಳಿ: ಅಮಾಯಕರ ಹತ್ಯೆಯಿಂದ ಆಘಾತವಾಗಿದೆ ಎಂದ ಆಮೀರ್ ಖಾನ್
ಯಾವುದೇ ಕೆಲಸವಾಗಿದ್ರೂ ಅಚ್ಚುಕಟ್ಟಾಗಿ ಕೆಲಸ ಮಾಡುವ ಶ್ರುತಿ ಹಾಸನ್ ಇದೀಗ ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಜ್ಯೂ.ಎನ್‌ಟಿಆರ್ ಜೊತೆ ಶ್ರುತಿ (Shruti Haasan) ಸ್ಪೆಷಲ್ ಸಾಂಗ್‌ಗೆ ಹೆಜ್ಜೆ ಹಾಕಲಿದ್ದಾರಂತೆ. ಹಾಗಂತ ಟಾಲಿವುಡ್‌ನ ಗಲ್ಲಿಯಲ್ಲಿ ಈ ವಿಷ್ಯ ಚರ್ಚೆಯಾಗ್ತಿದೆ. ಈ ಸುದ್ದಿ ನಿಜನಾ ಎಂಬುದನ್ನು ಚಿತ್ರತಂಡವೇ ಸ್ಪಷ್ಟಪಡಿಸಬೇಕಿದೆ. ಇದನ್ನೂ ಓದಿ:ಮೊದಲ ವರ್ಷದ ಎಂಗೇಜ್‌ಮೆಂಟ್ ಆ್ಯನಿವರ್ಸರಿ ಸಂಭ್ರಮದಲ್ಲಿ ಶೋಭಾ ಶೆಟ್ಟಿ
ಈಗಾಗಲೇ ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ನಲ್ಲಿ ಶ್ರುತಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಹೀಗಾಗಿ ಜ್ಯೂ.ಎನ್‌ಟಿಆರ್ ಸಿನಿಮಾದಲ್ಲೂ ಅವರು ಕಾಣಿಸಿಕೊಂಡ್ರೆ ಪಡ್ಡೆಹುಡುಗರಿಗೆ ಹಬ್ಬ ಎಂದೇ ಹೇಳಬಹುದು. ಎಲ್ಲದ್ದಕ್ಕೂ ಚಿತ್ರತಂಡ ಅಧಿಕೃತವಾಗಿ ತಿಳಿಸುವವರೆಗೂ ಕಾದುನೋಡಬೇಕಿದೆ.
ಈ ಸಿನಿಮಾದಲ್ಲಿ ಜ್ಯೂ.ಎನ್‌ಟಿಆರ್‌ಗೆ ಕನ್ನಡದ ನಟಿ ರುಕ್ಮಿಣಿ ವಸಂತ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆಯೂ ಚಿತ್ರತಂಡದ ಕಡೆಯಿಂದ ಅಫಿಷಿಯಲ್ ಅಪ್‌ಡೇಟ್ ಸಿಕ್ಕಿಲ್ಲ. ಮುಂದಿನ ವರ್ಷ ಜ.9ರಂದು ಸಿನಿಮಾ ರಿಲೀಸ್ ಮಾಡೋದಾಗಿ ಚಿತ್ರತಂಡ ತಿಳಿಸಿದೆ.