ಕನ್ನಡ ಕಿರುತೆರೆ ಲೋಕದ ಹೆಸರಾಂತ ನಟಿ, ನಿರ್ಮಾಪಕಿ ಶ್ರುತಿ ನಾಯ್ಡು, ಈ ಹಿಂದೆ ಪ್ರೀಮಿಯರ್ ಪದ್ಮಿನಿ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಜಗ್ಗೇಶ್ ಮತ್ತು ಪ್ರಮೋದ್ ಕಾಂಬಿನೇಷನ್ ನ ಈ ಸಿನಿಮಾ ಬಾಕ್ಸ್ ಆಫೀಸಿನಲ್ಲೂ ಹಿಟ್ ಆಗಿತ್ತು. ಆ ನಂತರ ಈ ಚಿತ್ರದ ಸಿಕ್ವೇಲ್ ಮಾಡುವ ಕುರಿತು ಚರ್ಚೆ ನಡೆದಿತ್ತು. ಅದಕ್ಕೂ ಮೊದಲು ಮತ್ತೊಂದು ಸಿನಿಮಾ ಘೋಷಣೆ ಮಾಡಿದ್ದಾರೆ.
Advertisement
ಪ್ರೀಮಿಯರ್ ಪದ್ಮಿನಿ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದ ಪ್ರಮೋದ್ ಅವರನ್ನೇ ನಾಯಕನನ್ನಾಗಿ ಆಯ್ಕೆ ಮಾಡಿಕೊಂಡು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ ಶ್ರುತಿ ನಾಯ್ಡು. ಪ್ರಮೋದ್ ಹುಟ್ಟು ಹಬ್ಬದಂದು ಪೋಸ್ಟರ್ ಕೂಡ ರಿಲೀಸ್ ಮಾಡಿದ್ದಾರೆ. ಪ್ರೀಮಿಯರ್ ಪದ್ಮಿನಿಗೆ ನಿರ್ದೇಶಕರಾಗಿ ಕೆಲಸ ಮಾಡಿದ್ದ ರಮೇಶ್ ಇಂದಿರಾ ಅವರೇ ಈ ಚಿತ್ರಕ್ಕೂ ನಿರ್ದೇಶಕರು.
Advertisement
Advertisement
ಸಲಾರ್ ಸಿನಿಮಾದಲ್ಲಿ ಪ್ರಮೋದ್ ಗಟ್ಟಿಯಾಗಿರೋ ಪಾತ್ರವನ್ನೇ ಮಾಡಿದ್ದಾರೆ. ಆ ಪಾತ್ರದ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸುದ್ದಿಯಾಗಿದ್ದಾರೆ. ಇದೀಗ ಮತ್ತೆ ಶ್ರುತಿ ನಾಯ್ಡು ಅವರ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಈಗಾಗಲೇ ಚಿತ್ರಕ್ಕೆ ಪೂಜೆ ಕೂಡ ಆಗಿದ್ದು, ಫೆಬ್ರವರಿಯಲ್ಲಿ ಚಿತ್ರೀಕರಣಕ್ಕೂ ಸಿದ್ಧತೆ ಮಾಡಿಕೊಂಡಿದ್ದಾರೆ.