ನಟಿ ಶುಭಾ ಪೂಂಜಾ, `ಅಮೃತವರ್ಷಿಣಿ’ ಧಾರಾವಾಹಿ ಖ್ಯಾತಿಯ ರಜಿನಿ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ `ಅಂಬುಜಾ'(Ambuja Film) ಸಿನಿಮಾ ಟೀಸರ್ ಬಿಡುಗಡೆಯಾಗಿ ಸಾಮಾಜಿಕ ಜಾಲತಾಣದಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ. ನೈಜ ಘಟನೆ ಆಧಾರಿತ ಈ ಚಿತ್ರದ ಟೀಸರ್ ಇದೀಗ ಕುತೂಹಲವನ್ನು ಹುಟ್ಟು ಹಾಕಿದೆ, ಪ್ರೇಕ್ಷಕರಲ್ಲಿ ನಿರೀಕ್ಷೆಯನ್ನು ಹೆಚ್ಚಿಸಿದೆ.
`ಅಂಬುಜಾ’ ಕ್ರೈಂ ಥ್ರಿಲ್ಲರ್ ಹಾರಾರ್ ಕಥಾಹಂದರ ಒಳಗೊಂಡಿದೆ. ನೈಜ ಘಟನೆ ಆಧಾರಿತ ಈ ಚಿತ್ರಕ್ಕೆ ಕಾಶಿನಾಥ್ ಡಿ ಮಡಿವಾಳರ್ ನಿರ್ಮಾಣ ಮಾಡಿದ್ದಾರೆ. ಮೊದಲ ಬಾರಿ ಸಿನಿಮಾ ನಿರ್ಮಾಣ ಸಾಹಸಕ್ಕೆ ಕೈ ಹಾಕಿರುವ ಇವರು ಚಿತ್ರಕ್ಕೆ ಕಥೆ, ಸಾಹಿತ್ಯ ಕೂಡ ಬರೆದಿದ್ದಾರೆ. ಶ್ರೀನಿ ಹನುಮಂತರಾಜು(Shrini Hanumanthraju) ಚಿತ್ರವನ್ನು ನಿರ್ದೇಶನದಲ್ಲಿ ಸಿನಿಮಾ ಮೂಡಿ ಬಂದಿದೆ. ರಿಲೀಸ್‌ಗೂ ಮುನ್ನ ಟೀಸರ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. 4 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದು ಭರ್ಜರಿ ವಿವ್ಸ್ ಗಿಟ್ಟಿಸಿಕೊಳ್ಳುತ್ತಿದೆ. ಇದನ್ನೂ ಓದಿ:ಬಿಗ್ ಬಾಸ್ ಆಟಕ್ಕೆ ಫುಲ್ ಸ್ಟಾಪ್ ಇಡಲು ನಿರ್ಧರಿಸಿದ ಆರ್ಯವರ್ಧನ್ ಗುರೂಜಿ
ಗೊತ್ತಿಲ್ಲದ ವಿಚಾರಗಳನ್ನು ಜನರಿಗೆ ಹೇಳಬೇಕು ಎನಿಸಿತು. ಅದಾದ ಮೇಲೆ ನಿರ್ದೇಶಕ ಶ್ರೀನಿ ಅವರ ಜೊತೆ ಮಾತನಾಡಿದಾಗ ಅವರು ಕೂಡ ಕಥೆ ತುಂಬಾ ಚೆನ್ನಾಗಿದೆ ಅಂದ್ರು. ಸಿನಿಮಾ ಮಾಡೋಣ ಎಂದು ನಿರ್ಧರಿಸಿದೆ. ಸಿನಿಮಾಗೆ ಬೇಕಾದ ಪಾತ್ರಗಳು ಸಿಗುತ್ತ ಹೋಯಿತು. ಫೈನಲಿ ಒಂದೊಳ್ಳೆ ಸಿನಿಮಾ ರೆಡಿಯಾಗಿದೆ. `ಅಂಬುಜಾ’ ಮನೆಮಂದಿಯೆಲ್ಲ ಕುಳಿತು ನೋಡಬಹುದು ಎಂದು ಚಿತ್ರದ ನಿರ್ಮಾಪಕ ಕಾಶಿನಾಥ್ ಡಿ ಮಡಿವಾಳರ್ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ನಟಿ ಶುಭಾ ಪೂಂಜಾ(Shubha Poonja) ಚಿತ್ರದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಎಂದೂ ಮಾಡಿರದ ಕ್ರೈಂ ರಿಪೋರ್ಟರ್ ಪಾತ್ರದಲ್ಲಿ ಶುಭಾ ನಟಿಸಿದ್ದಾರೆ. ನಟಿ ರಜನಿ (Rajani), ಲಂಬಾಣಿ ಪಾತ್ರಕ್ಕೆ ಜೀವ ತುಂಬಿದ್ದಾರೆ. ಚಿತ್ರದಲ್ಲಿ ಪದ್ಮಜಾ ರಾವ್, ಕಾಮಿಡಿ ಕಿಲಾಡಿ ಗೋವಿಂದೇಗೌಡ, ಕಾಮಿಡಿ ಕಿಲಾಡಿ ನಿರ್ದೇಶಕ ಶರಣಯ್ಯ, ಪ್ರಿಯಾಂಕ ಕಾಮತ್, ಸಂದೇಶ್ ಶೆಟ್ಟಿ ಅಜ್ರಿ ಸೇರಿದಂತೆ ಹಲವು ಕಲಾವಿದರು ತಾರಾಬಳಗದಲ್ಲಿದ್ದಾರೆ. ಬೆಂಗಳೂರು, ಗದಗ, ಉಡುಪಿ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಎಸ್ ಕೆ ಸಿನಿಮಾಸ್ ಬ್ಯಾನರ್ ನಡಿ ಸಿನಿಮಾ ನಿರ್ಮಾಣವಾಗಿದ್ದು, ವಿಜಯ್ ಎಂ ಕುಮಾರ್ ಸಂಕಲನ, ಮುರಳೀಧರ್ ಎಂ ಛಾಯಾಗ್ರಹಣ, ಪ್ರಸನ್ನ ಕುಮಾರ್ ಎಂ.ಎಸ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.