IND vs ENG Test: 11 ತಿಂಗಳ ಬಳಿಕ ಟೆಸ್ಟ್‌ನಲ್ಲಿ ಶತಕ ಸಿಡಿಸಿದ ಶುಭಮನ್ ಗಿಲ್

Public TV
1 Min Read
Shubman Gill 1 1

ವಿಶಾಖಪಟ್ಟಣಂ: ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ (IND vs ENG Test) ಪಂದ್ಯದ 2ನೇ ಇನ್ನಿಂಗ್ಸ್‌ನ 3ನೇ ದಿನದಾಟದಲ್ಲಿ ಶುಭಮನ್ ಗಿಲ್ (Shubman Gill) ಶತಕ ಸಿಡಿಸಿದ್ದಾರೆ. ಈ ಮೂಲಕ 11 ತಿಂಗಳ ಬಳಿಕ ಟೆಸ್ಟ್ ಕ್ರಿಕೆಟ್‍ನಲ್ಲಿ ಶತಕ ಸಿಡಿಸಿ ತಮ್ಮ ವಿರುದ್ಧದ ಟೀಕೆಗೆ ಬ್ಯಾಟ್ ಮೂಲಕ ಉತ್ತರಿಸಿದ್ದಾರೆ.

Shubman Gill 2

ಕಳೆದ ಕೆಲ ಪಂದ್ಯಗಳಿಂದ ಕಳಪೆ ಫಾರ್ಮ್‍ಗೆ ಒಳಗಾಗಿದ್ದ ಗಿಲ್ ಇಂದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಉತ್ತಮ ಬ್ಯಾಟಿಂಗ್ ಮಾಡುವ ಮೂಲಕ ಕೇವಲ 132 ಎಸೆತದಲ್ಲಿ 11 ಬೌಂಡರಿ ಹಾಗೂ 2 ಸಿಕ್ಸ್ ಸಿಡಿಸುವ ಮೂಲಕ 100 ರನ್ (147 ಎಸೆತಗಳಿಗೆ, ಒಟ್ಟು ರನ್ 104) ಸಿಡಿಸಿದ್ದಾರೆ. ಇದನ್ನೂ ಓದಿ: India vs England 2nd Test: 255 ಕ್ಕೆ ಭಾರತ ಆಲೌಟ್‌, ಇಂಗ್ಲೆಂಡ್‌ಗೆ 399 ರನ್‌ ಗುರಿ

Shubman Gill

ನಾಯಕ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಔಟಾದ ಬಳಿಕ, ಶುಭಮನ್ ಗಿಲ್ ಕಣಕ್ಕಿಳಿದರು. ಬಳಿಕ ಉತ್ತಮ ಬ್ಯಾಟಿಂಗ್ ಮೂಲಕ ತಂಡದ ಮೊತ್ತವನ್ನು 300 ರನ್‍ಗಳ ಗಡಿ ದಾಟಿಸುವಲ್ಲಿ ಸಫಲರಾದರು. ಈ ಮೂಲಕ ಅವರು ಟೆಸ್ಟ್‌ನಲ್ಲಿ ಮೂರನೇ ಶತಕ ಗಳಿಸಿದ್ದಾರೆ.

ಇದಕ್ಕೂ ಮುನ್ನ ಶುಭಮನ್ ಗಿಲ್ ಬಾಂಗ್ಲಾದೇಶದ ವಿರುದ್ಧ 110 ರನ್ ಮತ್ತು ಆಸ್ಟ್ರೇಲಿಯಾ ವಿರುದ್ಧ 128 ರನ್ ಗಳಿಸಿದ್ದರು. ಇದೀಗ ಇಂಗ್ಲೆಂಡ್ ವಿರುದ್ಧ ಶತಕ ಸಿಡಿಸಿ ಮೂರನೇ ಬಾರಿಗೆ ಶತಕ ಗಳಿಸಿದ್ದಾರೆ.

ಟೀಂ ಇಂಡಿಯಾ, 78.3 ಓವರ್‌ಗಳಿಗೆ 255 ರನ್ ಗಳಿಸಿ ಆಲೌಟ್ ಆಗಿದ್ದು, ಇಂಗ್ಲೆಂಡ್ ಗೆಲುವಿಗೆ 399 ರನ್‍ಗಳ ಗುರಿ ನೀಡಿದೆ. ಇದನ್ನೂ ಓದಿ: ಇಂಗ್ಲೆಂಡ್‌ ವಿರುದ್ಧದ 3ನೇ ಟೆಸ್ಟ್‌ ಪಂದ್ಯದಿಂದಲೂ ಕೊಹ್ಲಿ ಔಟ್‌?

Share This Article